Hijab |Supreme Court | ಹಿಜಾಬ್ ವಿವಾದ : ಇಂದು ಸುಪ್ರೀಂ ಕೋರ್ಟ್ ತೀರ್ಪು ಪ್ರಕಟ
ನವದೆಹಲಿ : ಹಿಜಾಬ್ ಸಂಬಂಧ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿರುವ ಮೇಲ್ಮನವಿಗಳ ಬಗ್ಗೆ ಸುಪ್ರೀಂ ಕೋರ್ಟ್ ಇಂದು ತೀರ್ಪು ಪ್ರಕಟಿಸಲಿದೆ.
ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತ ಹಾಗೂ ಸುಧಾಂಶು ಧುಲಿಯಾ ಅವರನ್ನು ಒಳಗೊಂಡ ಪೀಠವು 10 ದಿನಗಳ ವಾದ – ಪ್ರತಿವಾದ ಆಲಿಸಿದ್ದು, ಸೆಪ್ಟೆಂಬರ್ 22 ರಂದು ತೀರ್ಪನ್ನು ಕಾಯ್ದಿರಿಸಿತ್ತು.

ಈ ಪ್ರಕರಣದ ತೀರ್ಪುನ್ನು ಇಂದು ಪ್ರಕಟಿಸಲಾಗುತ್ತದೆ ಎಂದು ಸುಪ್ರೀಂ ಕೋರ್ಟ್ ವೆಬ್ ಸೈಟ್ ನಲ್ಲಿ ಹೇಳಲಾಗಿದೆ.
ಇಂದು ಬೆಳಗ್ಗೆ 10.30 ಕ್ಕೆ ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಲಿದೆ.
ರಾಜ್ಯ ಸರ್ಕಾರವು ಫೆಬ್ರವರಿ 5 ರಂದು ಹೊರಡಿಸಿದ ತನ್ನ ಆದೇಶದಲ್ಲಿ ಶಾಲೆ ಮತ್ತು ಕಾಲೇಜುಗಳಲ್ಲಿ ಸಮಾನತೆ, ಸಮಗ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತರುವ ಬಟ್ಟೆ ಧರಿಸುವುದನ್ನ ನಿಷೇಧಿಸಿದೆ.
ರಾಜ್ಯ ಸರ್ಕಾರದ ನಿಷೇಧ ಎತ್ತಿ ಹಿಡಿದ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದವು.








