ಮಳೆ ಬಾಧಿತ 13 ಜಿಲ್ಲೆಗಳ ಅಧಿಕಾರಿಗಳೊಂದಿಗೆ ಸಿಎಂ ಬೊಮ್ಮಾಯಿ ಸಭೆ
ಈ ವರ್ಷ ರಾಜ್ಯಾದ್ಯಂತ ಉತ್ತಮ ಮಳೆಯಾಗಿದ್ದು ಹಲವು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಿ ಮನೆ ಮತ್ತು ಬೆಳೆಗಳಿಗೆ ಹಾನಿಯುಂಟಾಗಿದೆ. ಮಳೆ ಬಾಧಿತ 13 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಮಲಾಪುರದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಪರಿಶೀಲನಾ ಸಭೆ ನಡೆಸಿದರು.
ಮಳೆಯಿಂದ ಹಾನಿಗೊಳಗಾಗುವ ಪ್ರತಿಯೊಂದು ಮನೆಗೂ ಪರಿಹಾರ ದೊರೆಯುವಂತೆ ಜಿಲ್ಲಾಧಿಕಾರಿಗಳು ನಿಗಾ ವಹಿಸಬೇಕು ಎಂದು ಸಿ ಎಂ ಸೂಚಿಸಿದರು. ಬೆಳೆಹಾನಿ ಪರಿಹಾರ ವಿತರಣೆಯನ್ನೂ ತ್ವರಿತವಾಗಿ ವಿತರಿಸಬೇಕು. ಅಕ್ಟೋಬರ್ ತಿಂಗಳಿನಲ್ಲಿ ಸಂಭವಿಸಿದ ಬೆಳೆಹಾನಿಯನ್ನು ಸಹ ಕೂಡಲೇ ಜಂಟಿ ಸಮೀಕ್ಷೆ ನಡೆಸಿ, ಈ ತಿಂಗಳೊಳಗೆ ಪರಿಹಾರ ವಿತರಿಸಲು ಸೂಚನೆ ನೀಡಿದರು.
ಮಳೆಹಾನಿಯಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿಗಳು ಖುದ್ದು ಭೇಟಿ ನೀಡಿ, ಪರಿಹಾರ ವಿತರಣೆ, ಮಾಹಿತಿ ದಾಖಲಿಸುವಲ್ಲಿ ಲೋಪಗಳಾಗದಂತೆ ತಹಸೀಲ್ದಾರರಿಗೆ ಮಾರ್ಗಸೂಚಿ ನೀಡಬೇಕು. ಬೆಳೆಹಾನಿ ಹಾಗೂ ಮನೆಹಾನಿಗೆ ಪರಿಹಾರ ನೀಡಲು ಅನುದಾನದ ಕೊರತೆ ಇಲ್ಲ. ಮೂಲಸೌಕರ್ಯ ಹಾನಿಗೆ ಬಿಡುಗಡೆ ಮಾಡಲಾದ ಅನುದಾನಕ್ಕೆ ಕ್ರಿಯಾಯೋಜನೆ ರೂಪಿಸಿ, ಅನುಷ್ಠಾನಗೊಳಿಸುವಂತೆ ಮುಖ್ಯಮಂತ್ರಿ ಸೂಚಿಸಿದರು.
basavaraj bommai: CM Bommai meeting with officials of 13 rain affected districts








