Rahul Gandhi | ಬಳ್ಳಾರಿ ಜಿಲ್ಲೆಗೆ ಕಾಂಗ್ರೆಸ್ನ ಕೊಡುಗೆ ಏನು : ರಾಮುಲು ಪ್ರಶ್ನೆ
ಬಳ್ಳಾರಿ : ಬಳ್ಳಾರಿ ಜಿಲ್ಲೆಗೆ ಸೋನಿಯಾಗಾಂಧಿ ಆಗಲಿ ಅಥವಾ ಕಾಂಗ್ರೆಸ್ನ ಕೊಡುಗೆ ಏನು ಎಂಬುದನ್ನು ಅವರ ಪುತ್ರ ಶ್ರೀ ರಾಹುಲ್ ಗಾಂಧಿ ಅವರೇ ಹೇಳಬೇಕು ಎಂದು ಸಚಿವ ಬಿ. ಶ್ರೀ ರಾಮುಲು ಪ್ರಶ್ನಿಸಿದ್ದಾರೆ.
ಬಳ್ಳಾರಿಯಲ್ಲಿ ಭಾರತ್ ಜೋಡೊ ಯಾತ್ರೆಯ ಕಾರ್ಯಕ್ರಮದ ಬಗ್ಗೆ ಸರಣಿ ಟ್ವೀಟ್ ಗಳನ್ನು ಮಾಡಿರುವ ಬಿ.ರಾಮುಲು, ಬಳ್ಳಾರಿ ಜನತೆ ಸೋನಿಯಾಗಾಂಧಿ ಅವರು ಘೋಷಿಸಿದ ಪ್ಯಾಕೇಜ್ ಬಂದೇ ಬರುತ್ತದೆ ಎಂದು ಜನ ಕಣ್ ಕಣ್ ಬಿಟ್ಟಿದ್ದೇ ಆಯಿತು, ಆದರೆ ಅದು ಎಲ್ಲಿಗೆ ಬಂತು? ಯಾವಾಗ ಬಂತು? ಯಾರಿಗೆ ಹೋಯಿತು? ಯಾರ ಜೇಬಿಗೆ ಸೇರಿತು? ಕಾಂಗ್ರೆಸ್ನ ನಾಯಕರ ಬಳಿ ಉತ್ತರ ಇದೆಯೇ?
ಬಳ್ಳಾರಿ ಜನತೆ ಸೋನಿಯಾಗಾಂಧಿ ಅವರು ಘೋಷಿಸಿದ ಪ್ಯಾಕೇಜ್ ಬಂದೇ ಬರುತ್ತದೆ ಎಂದು ಜನ ಕಣ್ ಕಣ್ ಬಿಟ್ಟಿದ್ದೇ ಆಯಿತು, ಆದರೆ ಅದು ಎಲ್ಲಿಗೆ ಬಂತು? ಯಾವಾಗ ಬಂತು? ಯಾರಿಗೆ ಹೋಯಿತು? ಯಾರ ಜೇಬಿಗೆ ಸೇರಿತು? ಕಾಂಗ್ರೆಸ್ನ ನಾಯಕರ ಬಳಿ ಉತ್ತರ ಇದೆಯೇ? 6/14
— B Sriramulu (@sriramulubjp) October 15, 2022
ಸೋನಿಯಾಗಾಂಧಿ ಅವರು ಸ್ಪರ್ಧೆ ಮಾಡಿದಾಗ ಅವರ ಮೇಲಿನ ಪ್ರೀತಿ, ಅಭಿಮಾನದಿಂದ ಆಶೀರ್ವಾದ ಮಾಡಿದರು, ಗೆದ್ದ ಮೇಲೆ ಇಲ್ಲಿಗೆ ಎಷ್ಟು ಸಲ ಬಂದರು? ಕನಿಷ್ಟ ಪಕ್ಷ ಗೆಲ್ಲಿಸಿದ್ದಕ್ಕೆ ಮತದಾರರಿಗೆ ಸೌಜನ್ಯಕ್ಕಾದರೂ ಕೃತಜ್ಞತೆ ಹೇಳಿದ್ದಾರಾ? ಇದನ್ನು ಜನತೆಯ ಮುಂದಿಡಲು ಸಿದ್ದರಿದ್ದೀರಾ ಎಂದು ಪ್ರಶ್ನಿಸಿದ್ದಾರೆ.
ಬಳ್ಳಾರಿ ಜಿಲ್ಲೆಗೆ ಸೋನಿಯಾಗಾಂಧಿ ಆಗಲಿ ಅಥವಾ ಕಾಂಗ್ರೆಸ್ನ ಕೊಡುಗೆ ಏನು ಎಂಬುದನ್ನು ಅವರ ಪುತ್ರ ಶ್ರೀ ರಾಹುಲ್ ಗಾಂಧಿ ಅವರೇ ಹೇಳಬೇಕು. ದೇಶ ಬೆಸೆಯುತ್ತೇನೆ ಎಂದು ಹೊರಟಿರುವ ಅವರಿಗೆ ಜಿಲ್ಲೆಯ ಜನ ಪಾಠ ಕಲಿಸಲಿದ್ದಾರೆ ಎಂಬುದನ್ನು ಮರೆಯಬೇಡಿ.
ಕಡೆ ಪಕ್ಷ ಐದು ವರ್ಷಗಳ ಕಾಲ ಅಧಿಕಾರದಲ್ಲಿ ನಿಮ್ಮ ಕಾಂಗ್ರೆಸ್ ಪಕ್ಷ ಬಳ್ಳಾರಿಗೆ ಜಿಲ್ಲೆಗೆ ಕೊಡುಗೆ ಏನು ?. ರಾಹುಲ್ ಗಾಂಧಿ ಅವರೇ ನಿಮ್ಮ ಭಾಷಣದಲ್ಲಿ ಹೇಳುತ್ತೀರಾ.? ನಿಮ್ಮಬೆಸುಗೆಯ ಯಾತ್ರೆಗೆ ಜನ ಬಗ್ಗೋದಿಲ್ಲ. ಅವರನ್ನು TAKEN FOR GRANTED ಮಾಡಿಕೊಂಡಿದ್ದೀರಾ ಎಂದು ಪ್ರಶ್ನಿಸಿದ್ದಾರೆ.
ಏಕಂದರೆ, ಬಳ್ಳಾರಿ ಜಿಲ್ಲೆಗೆ ಸೋನಿಯಾ ಗಾಂಧಿ ಅವರು ಒಮ್ಮೆ ಲೋಕಸಭಾ ಸದಸ್ಯರಾಗಿ ಕೊಟ್ಟ ಕೊಡುಗೆ ಶೂನ್ಯ. ಅದನ್ನು ರಾಹುಲ್ ಗಾಂಧಿ ಮರೆತರೂ, ಜನ ಮರೆತಿಲ್ಲ. ಯಾತ್ರೆಯ ಮೂಲಕ ಮರೆ ಮಾಚಲು ಸಾಧ್ಯವಿಲ್ಲ ಎಂದು ರಾಮುಲು ಕುಟುಕಿದ್ದಾರೆ.