ಕೇಂದ್ರದ ನೇರ ತೆರಿಗೆ ಸಂಗ್ರಹಣೆಯಲ್ಲಿ ಶೇಕಡಾ 8ರಷ್ಟು ಹೆಚ್ಚಳ

ಹೊಸದಿಲ್ಲಿ, ಜೂನ್ 9: 2019-20 ನೇ ಸಾಲಿನ ಕೇಂದ್ರದ ನೇರ ತೆರಿಗೆ ಸಂಗ್ರಹಣೆಯಲ್ಲಿ ಹೆಚ್ಚಳ ಕಂಡು ಬಂದಿದ್ದು, ಒಟ್ಟು ನೇರ ತೆರಿಗೆ ಸಂಗ್ರಹದಲ್ಲಿ ಶೇ 8 ರಷ್ಟು ಬೆಳವಣಿಗೆಯಾಗಿದೆ. ಆದರೆ ಕಳೆದ ವರ್ಷಕ್ಕೆ ಹೋಲಿಸಿದರೆ ನೇರ ತೆರಿಗೆ ಸಂಗ್ರಹಣೆಯಲ್ಲಿ ಶೇ.5 ರಷ್ಟು ಇಳಿಕೆ ಕಂಡುಬಂದಿದೆ ಎಂದು ಕೇಂದ್ರ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ತಿಳಿಸಿದೆ.
ಕಾರ್ಪೊರೇಟ್ ತೆರಿಗೆ ಸುಧಾರಣೆಗಳಿಂದ 1,45,000 ಕೋಟಿ ರೂಪಾಯಿ ಸಂಗ್ರಹವಾಗಿದ್ದರೆ, ಇದೇ ಸಮಯದಲ್ಲಿ ಸುಮಾರು 23,200 ಕೋಟಿ ರೂಪಾಯಿ ಆದಾಯ ತೆರಿಗೆ ರಿಯಾಯಿತಿಗಳಿಂದಾಗಿ ಸಂಗ್ರಹಣೆಯಾಗಿದೆ ಎಂದು ಸಿಬಿಡಿಟಿ ತಿಳಿಸಿದೆ
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕಳೆದ ವರ್ಷ ಹೂಡಿಕೆ ಬೆಳವಣಿಗೆಯನ್ನು ಉತ್ತೇಜಿಸಲು ಕಾರ್ಪೊರೇಟ್ ತೆರಿಗೆಯನ್ನು ಗಣನೀಯವಾಗಿ ಕಡಿತಗೊಳಿಸಿದ್ದರು. ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ಸರ್ಕಾರವು ಹೂಡಿಕೆಗಳನ್ನು ಹೆಚ್ಚಿಸುವ ಸಲುವಾಗಿ ಕಾರ್ಪೊರೇಟ್ ತೆರಿಗೆ ದರವನ್ನು ತೀವ್ರವಾಗಿ ಕಡಿಮೆ ಮಾಡುವ ಮೂಲಕ ಕಾರ್ಪೊರೇಟ್ ವಲಯಕ್ಕೆ 1.45 ಲಕ್ಷ ಕೋಟಿ ಕೊಡುಗೆಯನ್ನು ನೀಡಿತು ಎಂದು ಸಿಬಿಡಿಟಿ ತಿಳಿಸಿದೆ.








