Good news from Prime Minister-ದೀಪಾವಳಿ ಪ್ರಯುಕ್ತ ದೇಶದ ಯುವ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಗುಡ್ ನ್ಯೂಸ್ ಕೊಟ್ಟಿದ್ದಾರೆ.
ಕೆಂದ್ರಸರಕಾರದಿಂದ ದೀಪಾವಳಿಗೆ ಬಂಪರ್ ಬಹುಮಾನ ಘೊಷಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶದ ಯುವ ಜನತೆಗೆ ವಿಶಿಷ್ಟ ಉಡುಗೊರೆ ನೀಡುತ್ತಿದ್ದಾರೆ.
ಪ್ರಧಾನಿ ಮೋದಿಯವರು ಶನಿವಾರ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಯುವಕರೊಂದಿಗೆ ಸಂವಾದ ನಡೆಸಲಿದ್ದಾರೆ. ಈ ಹಿಂದೆ ರೈತರಿಗೆ ಹಾಗೂ ರೈಲ್ವೆ ಉದ್ಯೋಗಿಗಳಿಗೆ ದೀಪಾವಳಿ ಉಡುಗೊರೆ ನರೇಂದ್ರ ಮೋದಿ ಅವರ ನೀಡಿದ್ದರು ಈಗ ಅವರ ಚಿತ್ತ ಯುವಕರತ್ತ ಹೊಗಿದೆ.
ವಿವಿಧ ಸಚಿವಾಲಯಗಳು ಮತ್ತು ಸರ್ಕಾರಿ ಇಲಾಖೆಗಳಲ್ಲಿ ಕೆಲಸ ಮಾಡಲು 75,000 ಯುವ ಜನತೆಗೆ ಪ್ರಧಾನಿ ಮೋದಿ ಸರ್ಕಾರಿ ಉದ್ಯೋಗ ನೀಡುತ್ತಿದ್ದಾರೆ, ಸಾವಿರಾರು ಯುವ ಜನತೆಗೆ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಲಿದ್ದಾರೆ.
ಅಕ್ಟೋಬರ್ 22 ರಂದು ಈ ಕೆಳಕಂಡ ಎಲ್ಲಾ ಇಲಾಖೆಯ ಅಬ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.
ಅಂಚೆ ಇಲಾಖೆ, ರಕ್ಷಣಾ ಸಚಿವಾಲಯ, ಗೃಹ ಸಚಿವಾಲಯ, ರೈಲ್ವೆ ಸಚಿವಾಲಯ, ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ, ಕೇಂದ್ರ ಕೈಗಾರಿಕಾ ಭದ್ರತಾ ಪಡೆ, ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್, ಕಸ್ಟಮ್ಸ್ ಮತ್ತು ಬ್ಯಾಂಕಿಂಗ್ ಇತ್ಯಾದಿ ಇಲಾಖೆಗಳಲ್ಲಿ ಉದ್ಯೋಗಗಳನ್ನು ನೀಡಲಾಗುತ್ತಿದೆ.
ಇದಕ್ಕೆ ಸಂಬಂಧಿಸಿದಂತೆ ಈ ಕಾರ್ಯಕ್ರಮದಲ್ಲಿ ದೇಶದ ವಿವಿಧ ನಗರಗಳಿಂದ ಕೇಂದ್ರ ಸಚಿವರು ಭಾಗವಹಿಸಲಿದ್ದಾರೆ ಮಹಾರಾಷ್ಟ್ರದಿಂದ ಕೇಂದ್ರ ವಾಣಿಜ್ಯ ಸಚಿವ ಪಿಯೂಶ್ ಗೋಯಲ್, ತಮಿಳುನಾಡಿನಿಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಚಂಡೀಗಢದಿಂದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್, ಗುಜರಾತ್‌ನಿಂದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ, ಒಡಿಶಾದಿಂದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ರಾಜಸ್ಥಾನದಿಂದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಉತ್ತರ ಪ್ರದೇಶದಿಂದ ಕೇಂದ್ರ ಭಾರಿ ಕೈಗಾರಿಕೆ ಸಚಿವ ಮಹೇಂದ್ರ ಪಾಂಡೆ, ಬಿಹಾರದಿಂದ ಕೇಂದ್ರ ಪಂಚಾಯತ್ ರಾಜ್ ಸಚಿವ ಗಿರಿರಾಜ್ ಸಿಂಗ್ ಜಾರ್ಖಂಡ್‌ನಿಂದ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಭಾಗಿಯಾಗಲಿದ್ದಾರೆ .
ಬೇರೆ ಬೇರೆ ನಗರಗಳಿಂದ ಇನ್ನೂಳಿದ ಕೇಂದ್ರ ಸಚಿವರು ಸಹ ಸೇರಲಿದ್ದಾರೆ ಮತ್ತು ಎಲ್ಲಾ ಬಿಜೆಪಿ ಸಂಸದರು ತಮ್ಮ ಸಂಸದೀಯ ಕ್ಷೇತ್ರಗಳಿಂದ ಈ ಕಾರ್ಯಕ್ರಮಕ್ಕೆ ಸೇರಲಿದ್ದಾರೆ ಎಂದು ತಿಳಿದುಬಂದಿದೆ.
ಕೇಂದ್ರ ಸಶಸ್ತ್ರ ಪಡೆ ಸಿಬ್ಬಂದಿ, ಸಬ್ ಇನ್‌ಸ್ಪೆಕ್ಟರ್, ಕಾನ್ಸ್‌ಟೇಬಲ್, ಎಲ್‌ಡಿಸಿ, ಸ್ಟೆನೋ, ಪಿಎ, ಆದಾಯ ತೆರಿಗೆ ತನಿಖಾಧಿಕಾರಿಗಳು, MTS, ಇತರ ಹುದ್ದೆಗಳಿಗೆ ಗ್ರೂಪ್ – ಎ, ಗ್ರೂಪ್ – ಬಿ (ಗೆಜೆಟೆಡ್), ಗ್ರೂಪ್ – ಬಿ (ನಾನ್ ಗೆಜೆಟೆಡ್) ಮತ್ತು ಗ್ರೂಪ್ – ಸಿ ಹುದ್ದೆಗಳಲ್ಲಿ ನೇಮಕಾತಿಗಳನ್ನು ಮಾಡಲಾಗುತ್ತಿದೆ.
ಕೆಂದ್ರ ಸರ್ಕಾರದ 38 ಸಚಿವಾಲಯಗಳು/ಇಲಾಖೆಗಳಿಗೆ ದೇಶಾದ್ಯಂತ ಆಯ್ಕೆಯಾದ ಹೊಸ ಉದ್ಯೋಗಿಗಳು ಸೇರಿಕೊಳ್ಳುತ್ತಾರೆ.
Good news for the youth from Prime Minister Narendra Modi