IND vs PAK Match ಪಾಕ್ ವಿರುದ್ಧದ ಪಂದ್ಯಕ್ಕೆ ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್
ಇಡೀ ವಿಶ್ವ ಕ್ರಿಕೆಟ್ ಜಗತ್ತು ಎದುರು ನೋಡುತ್ತಿರುವ ಇಂಡೋ – ಪಾಕ್ ಕಾಳಗಕ್ಕೆ ಕ್ಷಣಗಣನೆ ಶುರುವಾಗಿದೆ. ಆಸ್ಟ್ರೇಲಿಯಾದ ಮೆಲ್ ಬಾರ್ನ್ ನಲ್ಲಿ ಬದ್ಧವೈರಿಗಳ ಯುದ್ಧಕ್ಕೆ ವೇದಿಕೆ ಸಜ್ಜಾಗಿದೆ.
ಕಳೆದ ಟಿ 20 ವಿಶ್ವಕಪ್ ನಲ್ಲಿ ಆದ ಸೋಲಿನ ಅವಮಾನಕ್ಕೆ ಸೇಡು ತೀರಿಸಿಕೊಳ್ಳಲು ಟೀಂ ಇಂಡಿಯಾ ಪ್ಲಾನ್ ಮಾಡಿಕೊಂಡಿದೆ.
ಎಲ್ಲಾ ತಂಡಗಳಿಗೂ ಮುನ್ನವೇ ಆಸ್ಟ್ರೇಲಿಯಾಗೆ ಪಯಣಿಸಿದ್ದ ಟೀಂ ಇಂಡಿಯಾ ಅಲ್ಲಿನ ಕಂಡೀಷನ್ ಗಳಿಗೆ ಒಗ್ಗಿಕೊಂಡಿದೆ. ವಾರ್ಮ್ ಅಪ್ ಮ್ಯಾಚ್ ನಲ್ಲಿ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ಗೆಲುವು ಸಾಧಿಸಿದೆ. ಇದು ತಂಡದ ಆತ್ಮವಿಶ್ವಾಸ ದ್ವಿಗುಣವಾಗುತ್ತಿದೆ.
ಇದೇ ಜೋಷ್ ನಲ್ಲಿ ಪಾಕ್ ವಿರುದ್ಧದ ಪಂದ್ಯಕ್ಕೆ ಟೀಂ ಇಂಡಿಯಾ ಸಜ್ಜಾಗಿದೆ. ಹಾಗಾದ್ರೆ ಪಾಕಿಸ್ತಾನ ವಿರುದ್ದದ ಪಂದ್ಯಕ್ಕೆ ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ.
ಅನ್ ಪೇಪರ್ ನಲ್ಲಿ ಟೀಂ ಇಂಡಿಯಾ ಸಾಲಿಡ್ ಸ್ಟ್ರಾಂಗ್ ಆಗಿದೆ. ಬ್ಯಾಟಿಂಗ್ ನಲ್ಲಿ ಬಲಿಷ್ಟವಾಗಿರುವ ಭಾರತ ತಂಡದ ಬೌಲಿಂಗ್ ವಿಭಾಗ ಕೊಂಚ ಸುಧಾರಿಸಬೇಕಾಗಿದೆ.

ಕಳೆದ ಏಷ್ಯಾಕಪ್ ನಲ್ಲಿ ಪಾಕಿಸ್ತಾನ ವಿರುದ್ಧ ಕಣಕ್ಕಿಳಿದಿದ್ದ ತಂಡವೇ ಭಾಗಶಃ ಕಣಕ್ಕಿಳಿಯಲಿದೆ. ಏಷ್ಯಾಕಪ್ ಟೂರ್ನಿಯಲ್ಲಿ ಜಡೇಜಾ ಪಾಕ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದಿದ್ದರು.
ಅವರ ಬದಲಿಗೆ ಅಕ್ಷರ್ ಪಟೇಲ್ ಕಾಣಿಸಿಕೊಳ್ಳಲಿದ್ದಾರೆ. ಬುಮ್ರಾ ಜಾಗದಲ್ಲಿ ಶಮಿ ಬೌಲಿಂಗ್ ವಿಭಾಗವನ್ನು ಮುನ್ನಡೆಸಲಿದ್ದಾರೆ.
ಬ್ಯಾಟಿಂಗ್ ವಿಚಾರಕ್ಕೆ ಬಂದರೆ ಟೀಂ ಇಂಡಿಯಾದ ಬ್ಯಾಟಿಂಗ್ ಲೈನ್ ಅಪ್ ಈಗಾಗಲೇ ಫಿಕ್ಸ್ ಆಗಿದೆ.
ಆರಂಭಿಕರಾಗಿ ಕೆ.ಎಲ್ ರಾಹುಲ್, ರೋಹಿತ್ ಶರ್ಮಾ ಕಣಕ್ಕಿಳಿಯಲಿದ್ದು, ಮಿಡಲ್ ಆರ್ಡರ್ ನಲ್ಲಿ ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ ಆಡೋದು ಪಕ್ಕಾ.
ಇನ್ನು ವಿಕೆಟ್ ಕೀಪರ್ ಸ್ಥಾನದಲ್ಲಿ ದಿನೇಶ್ ಕಾರ್ತಿಕ್, ಸ್ಪಿನ್ ಆಲ್ ರೌಂಡರ್ ವಿಭಾಗದಲ್ಲಿ ಅಕ್ಷರ್ ಪಟೇಲ್ ಸ್ಥಾನ ಪಡೆಯಲಿದ್ದಾರೆ.
ಬೌಲಿಂಗ್ ವಿಭಾಗದಲ್ಲಿ ಅಶ್ವಿನ್, ಮೊಹ್ಮದ್ ಶಮಿ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್ ಅಥವಾ ಅರ್ಷ್ ದೀಪ್ ಸಿಂಗ್ ಗೆ ಅವಕಾಶ ಸಿಗಲಿದೆ.








