Basavaraja Bommai | ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಸಿಎಂ ಹೇಳಿದ್ದೇನು ?
ಚಿತ್ರದುರ್ಗ : ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಪ್ರಮುಖ ಯೋಜನೆಯಾಗಿ ಸಾರ್ವಜನಿಕ ಬಂಡವಾಳ ಹೂಡಿಕೆ ಮಂಡಳಿ -ಪಿಐಬಿಯಲ್ಲಿ ಅನುಮೋದನೆ ನೀಡಲಾಗಿದೆ.
ಕೇಂದ್ರ ಸಚಿವ ಸಂಪುಟದಿಂದ ಅನುಮೋದನೆ ಬಾಕಿ ಇದೆ. ಭದ್ರಾ ಮೇಲ್ದಂಡೆ ಯೋಜನೆ ರಾಜ್ಯದ ಪ್ರಥಮ ರಾಷ್ಟ್ರೀಯ ನೀರಾವರಿ ಯೋಜನೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಚಿತ್ರದುರ್ಗ ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಭದ್ರಾ ಮೇಲ್ದಂಡೆ ಯೋಜನೆ ಕುರಿತು ತಾವು ಕೇಂದ್ರ ಜಲ ಸಂಪನ್ಮೂಲ ಸಚಿವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಾಗಿದೆ.

ಈ ಸಂಬಂಧ ಕೇಂದ್ರ ಸಚಿವರು ಯೋಜನೆ ಕುರಿತು ಕಾರ್ಯೋನ್ಮುಖರಾಗಿದ್ದಾರೆ.
ಕೇಂದ್ರದಿಂದ ಯೋಜನೆಗೆ ಬಹಳ ದೊಡ್ಡ ಪ್ರಮಾಣದಲ್ಲಿ ಹಣಕಾಸಿನ ನೆರವು ಲಭಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದೇ ವೇಳೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಿದ ಬೊಮ್ಮಾಯಿ, ಶೀಘ್ರದಲ್ಲೇ ದೆಹಲಿಗೆ ತೆರಳಿ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.








