ಸಂಪುಟ ವಿಸ್ತರಣೆಯೋ ಅಥವಾ ಪುನಾರಚನೆಯೋ – ಕಾದು ನೋಡಿ ಎಂದ ಸಿಎಂ…
ಸಚಿವ ಸಂಪುಟದ ಕುರಿತು ಚರ್ಚಿಸಲು ಬಿಜೆಪಿ ಕೇಂದ್ರ ನಾಯಕತ್ವವನ್ನು ಭೇಟಿ ಮಾಡಲು ಶೀಘ್ರದಲ್ಲೇ ನವದೆಹಲಿಗೆ ತೆರಳುವುದಾಗಿ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಹೇಳಿದ್ದಾರೆ, ಆದರೆ ಇದು ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ರಚನೆಯೇ ಎಂಬ ಬಗ್ಗೆ ಸಸ್ಪೆನ್ಸ್ ಉಳಿಸಿಕೊಂಡಿದೆ.
ಸಂಪುಟಕ್ಕೆ ಯಾರನ್ನು ಸೇರ್ಪಡೆಗೊಳಿಸಬೇಕು ಎಂಬುದನ್ನು ಬಿಜೆಪಿ ಹೈಕಮಾಂಡ್ ಅಂತಿಮವಾಗಿ ನಿರ್ಧರಿಸುತ್ತದೆ ಎಂದು ಅವರು ಹೇಳಿದರು. “ನಾನು ಶೀಘ್ರದಲ್ಲೇ ದೆಹಲಿಗೆ (ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಚರ್ಚಿಸಲು) ಹೋಗುತ್ತೇನೆ” ಎಂದು ಬೊಮ್ಮಾಯಿ ಸುದ್ದಿಗಾರರಿಗೆ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕೆಲವು ಆರೋಪಗಳ ಹಿನ್ನಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ನಾಯಕರಾದ ಕೆ ಎಸ್ ಈಶ್ವರಪ್ಪ, ರಮೇಶ್ ಜಾರಕಿಹೊಳಿ ಮುಂತಾದವರು ಪಕ್ಷದ ನಾಯಕರನ್ನ ಭೇಟಿ ಮಾಡಿರುವ ಹಿನ್ನಲೆಯಲ್ಲಿ ಸಚಿವ ಸಂಪುಟಕ್ಕೆ ಮತ್ತೆ ಸೇರ್ಪಡೆಯಾಗುತ್ತಾರ ಎಂಬ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಅಂದಾಜಿನ ಪ್ರಶ್ನೆಗಳಿಗೆ ಉತ್ತರಿಸಲು ಸಾಧ್ಯವಿಲ್ಲ. ಆದರೇ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಎಂದು ತಿಳಿಸಿದ್ದಾರೆ.
ಸಚಿವ ಸಂಪುಟ ವಿಸ್ತರಣೆಯೋ ಅಥವಾ ಪುನಾರಚನೆಯೋ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಕಾದು ನೋಡಿ’ ಎಂದಷ್ಟೇ ಹೇಳಿದರು. ಸಚಿವ ಸಂಪುಟದ ಕಸರತ್ತು ಕುರಿತು ಪಕ್ಷದ ನಾಯಕತ್ವದೊಂದಿಗೆ ಚರ್ಚಿಸಲು ಈ ವಾರ ನವದೆಹಲಿಗೆ ತೆರಳುವುದಾಗಿ ಬೊಮ್ಮಾಯಿ ಮಂಗಳವಾರ ತಿಳಿಸಿದ್ದರು.
B.S. Bommai: Wait and watch whether cabinet expansion or rejig: Karnataka CM