Bangalore | ಮೇಲ್ಸೇತುವೆಯಿಂದ ಕೆಳಗೆ ಬಿದ್ದು ಬೈಕ್ ಸವಾರ ಸಾವು
ಬೆಂಗಳೂರು : ನಗರದ ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಬೈಕ್ ಸವಾರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮೃತನನ್ನು ಆಂಧ್ರ ಮೂಲದ ಕೊರೆ ನಾಗರಾಜು ಎಂದು ಗುರುತಿಸಲಾಗಿದೆ.

ಮೇಲ್ಸೇತುವೆಯ ಇಳಿಜಾರಿನ ತಿರುವಿನಲ್ಲಿ ಬೈಕ್ ನಿಯಂತ್ರಣ ತಪ್ಪಿದ್ದು ಬೈಕ್ ಸವಾರ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು ಸ್ಥಳಕ್ಕೆ ಬಿಇಟಿಎಸ್ ಹಾಗೂ ಎಲೆಕ್ಟ್ರಾನಿಕ್ ಸಿಟಿ ಸಂಚಾರ ವಿಭಾಗದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಂತರ ಮೃತದೇಹವನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.








