Ind vs Ned | ನೆದರ್ ಲ್ಯಾಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ
ಟಿ 20 ವಿಶ್ವಕಪ್ ನ ಸೂಪರ್ 12ರ ತನ್ನ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ.
ಸಿಡ್ನಿಯಲ್ಲಿ ನಡೆದ ಪಂದ್ಯದಲ್ಲಿ ನೆದರ್ ಲ್ಯಾಂಡ್ ವಿರುದ್ಧ ಟೀಂ ಇಂಡಿಯಾ 56 ರನ್ ಗಳಿಂದ ಜಯಭೇರಿ ಬಾರಿಸಿದೆ.
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ನಿಗದಿತ 20 ಓವರ್ ಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ 179 ರನ್ ಗಳಿಸಿತು.
ಭಾರತದ ಪರ ನಾಯಕ ರೋಹಿತ್ ಶರ್ಮಾ 39 ಎಸೆತಗಳಲ್ಲಿ 53 ರನ್ ಗಳಿಸಿದರು. ವಿರಾಟ್ ಕೊಹ್ಲಿ 44 ಎಸೆತಗಳಲ್ಲಿ ಮೂರು ಬೌಂಡರಿ, ಎರಡು ಸಿಕ್ಸರ್ ಗಳ ನೆರವಿನಿಂದ 62 ರನ್ ಗಳಿಸಿ ಅಜೇಯರಾಗಿ ಉಳಿದರು.

ಮಿಂಚಿನ ಪ್ರದರ್ಶನ ನೀಡಿದ ಬ್ಯಾಟರ್ ಸೂರ್ಯ ಕುಮಾರ್ ಯಾದವ್ 25 ಎಸೆತಗಳಲ್ಲಿ 7 ಬೌಂಡರಿ, ಒಂದು ಸಿಕ್ಸರ್ ನೆರವಿನಿಂದ 51 ರನ್ ಚಚ್ಚಿದರು.
ಪಂದ್ಯ ಗೆಲ್ಲಲು 180 ರನ್ ಗಳ ಗುರಿ ಪಡೆದ ನೆದರ್ ಲ್ಯಾಂಡ್ ಆರಂಭದಿಂದ ವಿಕೆಟ್ ಗಳನ್ನು ಕಳೆದುಕೊಳ್ಳುತ್ತಾ ಸಾಗಿತು. ಆರಂಭಿಕ ವಿಕ್ರಮ್ಜಿತ್ ಸಿಂಗ್ 1 ರನ್ ಗಳಿಸಿ ಔಟ್ ಆದರು.
ಮ್ಯಾಕ್ಸ್ ಒಡೌಡ್, ಬಾಸ್ ಡೆ ಲೀಡ್ ತಲಾ 16 ರನ್ ಗಳಿಸಿದರು. ಕೊಲಿನ್ 17 ರನ್ ಗಳಿದ್ರೆ ಕೊನೆಯಲ್ಲಿ ಟಿಮ್ ಪ್ರಿಂಗಲ್ 20 ರನ್ ಗಳಿಸಿದರು.
ಭಾರತದ ಪರ ಭುವನೇಶ್ವರ್ ಕುಮಾರ್, ಅರ್ಷ್ ದೀಪ್ ಸಿಂಗ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್ ತಲಾ ಎರಡು ವಿಕೆಟ್ ಪಡೆದರು. ಮೊಹ್ಮದ್ ಶಮಿ ಒಂದು ವಿಕೆಟ್ ಪಡೆದರು.








