Vijayapura – ಮಹಾನಗರ ಪಾಲಿಕೆ ಚುನಾವಣೆ – ವೇತನ ಸಹಿತ ರಜೆ
ವಿಜಯಪುರ : ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ಶುಕ್ರವಾರ ನಡೆಯಲಿದ್ದು, ಕರ್ನಾಟಕ ಚುನಾವಣಾ ಆಯೋಗ 35 ವಾರ್ಡ್ ಗಳಿಗೆ ಚುನಾವಣೆ ನಡೆಸಲಿದೆ.
ಈ ಹಿನ್ನೆಲೆಯಲ್ಲಿ ಮತಗಟ್ಟೆಗಳನ್ನು ಸ್ಥಾಪಿಸಿರುವ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಕೇವಲ ಶಾಲೆಗಳು ಮಾತ್ರವಲ್ಲದೆ ಪಾಲಿಕೆ ವ್ಯಾಪ್ತಿಯಲ್ಲಿನ ಸರ್ಕಾರಿ ಕಚೇರಿ, ಸರ್ಕಾರಿ ಸಂಸ್ಥೆಗಳು, ಅನುದಾನಿತ ಹಾಗೂ ಅನುದಾನರಹಿತ ವಿದ್ಯಾಸಂಸ್ಥೆಗಳು, ರಾಷ್ಟ್ರೀಕೃತ ಹಾಗೂ ಇತರೆ ಬ್ಯಾಂಕುಗಳಿಗೆ ವೇತನ ಸಹಿತ ರಜೆ ಘೋಷಣೆ ಮಾಡಲಾಗಿದೆ.
ಪಾಲಿಕೆಯ 35 ವಾರ್ಡ್ ಗಳ ಪೈಕಿ ಕಾಂಗ್ರೆಸ್ ಪಕ್ಷ ಎಲ್ಲಾ ವಾರ್ಡ್ ಗಳಲ್ಲಿ ಚುನಾವಣೆಗೆ ಸ್ಪರ್ಧಿಸಿದ್ರೆ, ಬಿಜೆಪಿ 33 ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧೆ ಮಾಡಿದೆ.
ಇನ್ನು ಜೆಡಿಎಸ್ 20 ವಾರ್ಡ್ ಗಳಲ್ಲಿ, ಎಎಪಿ 15, ಎಐಎಂಐಎಂ ನಾಲ್ಕು, ಜನತಾ ಪಕ್ಷ ಮೂರು, ಕೆಆರ್ ಎಸ್ ಮೂರು, ಎಸ್ ಡಿಪಿಐ ಎರಡು, ಬಿಎಸ್ ಪಿ ಒಂದು ಹಾಗೂ 58 ಮಂದಿ ಪಕ್ಷೇತರರಾಗಿ ಸ್ಪರ್ಧಿಸಿದ್ದಾರೆ.