ADVERTISEMENT
Friday, June 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Chintan Shivir : ‘ಒಂದು ರಾಷ್ಟ್ರ ಒಂದು  ಪೊಲೀಸ್ ಸಮವಸ್ತ್ರ’ ತರಲು ಪ್ರಧಾನಿ ಚಿಂತನೆ…

“ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ ಕೇವಲ ರಾಜ್ಯಗಳಿಗೆ ಸೀಮಿತವಾಗಿಲ್ಲ ಎಂದ ಪ್ರಧಾನಿ ಅವರು, ಅಪರಾಧಗಳು ಅಂತಾರಾಜ್ಯ ಹಾಗೂ ಅಂತರಾಷ್ಟ್ರೀಯ ಮಟ್ಟ ತಲುಪುತ್ತಿವೆ. ದೇಶದ ಗಡಿಯಾಚೆಗಿನ ತಂತ್ರಜ್ಞಾನವನ್ನು ಅಪರಾಧಿಗಳು ಬಳಸುತ್ತಿದ್ದಾರೆ” ಎಂದು ವಿವರಿಸಿದರು

Naveen Kumar B C by Naveen Kumar B C
October 28, 2022
in Newsbeat, National, ದೇಶ - ವಿದೇಶ
Narendra Modi

Chintan Shivir

Share on FacebookShare on TwitterShare on WhatsappShare on Telegram

Chintan Shivir : ‘ಒಂದು ರಾಷ್ಟ್ರ ಒಂದು  ಪೊಲೀಸ್ ಸಮವಸ್ತ್ರ’ ತರಲು ಪ್ರಧಾನಿ ಚಿಂತನೆ…

‘ಒಂದು ರಾಷ್ಟ್ರ ಒಂದು  ಪೊಲೀಸ್ ಸಮವಸ್ತ್ರ’ ಕಾರ್ಯಸಾಧ್ಯತೆಯ ಕುರಿತು ಚರ್ಚೆ ನಡೆಸುವಂತೆ  ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕರೆ ನೀಡಿದ್ದಾರೆ. ಶುಕ್ರವಾರ ಹರಿಯಾಣದ ಸೂರಜ್‌ಕುಂಡ್‌ನಲ್ಲಿ ರಾಜ್ಯ ಗೃಹ ಸಚಿವರೊಂದಿಗೆ ಚಿಂತನ-ಮಂಥನ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ “ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ ರಾಜ್ಯಗಳ ಮೇಲಿದ್ದರೂ ಅದು ದೇಶದ ಏಕತೆ ಮತ್ತು ಸಮಗ್ರತೆಗೆ ಸಂಬಂಧಿಸಿದ್ದು” ಎಂದು ತಿಳಿಸಿದ್ದಾರೆ.

Related posts

Brazil football star Neymar

fifaworldcup2026- ಯಮನಿಗೆ ಬೆನ್ನು ತೋರಿಸಿದ್ದ ಮೃತ್ಯುಂಜಯ.. ಫುಟ್‍ಬಾಲ್ ಜಗತ್ತಿನ ಸಾಂಬಾ ಡಾನ್ಸರ್ ನ ಬದುಕಿನ ಯಾನ..!

June 26, 2026
ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿಸುದ್ದಿ; ಪ್ರತಿ ಕ್ವಿಂಟಾಲ್‌ಗೆ ₹1,750 ಸಹಾಯಧನ

ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿಸುದ್ದಿ; ಪ್ರತಿ ಕ್ವಿಂಟಾಲ್‌ಗೆ ₹1,750 ಸಹಾಯಧನ

June 26, 2026

ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ಪ್ರಧಾನಿ  “ಚಿಂತನ್ ಶಿವರ್ ಸಹಕಾರಿ ಫೆಡರಲಿಸಂಗೆ ಅಸಾಮಾನ್ಯ ಉದಾಹರಣೆಯಾಗಿದೆ” ಎಂದು ಅವರು ಹೇಳಿದರು. “ರಾಜ್ಯಗಳು ಪರಸ್ಪರ ಕಲಿಯಬಹುದು, ಪರಸ್ಪರ ಸ್ಫೂರ್ತಿ ಪಡೆಯಬಹುದು ಮತ್ತು ಭಾರತದ ಅಭಿವೃದ್ಧಿಗೆ ಒಟ್ಟಾಗಿ ಕೆಲಸ ಮಾಡಬಹುದು” ಎಂದು ಅವರು ಹೇಳಿದರು. ಇದೊಂದು ಸಾಂವಿಧಾನಿಕ ಪರಿಕಲ್ಪನೆಯಾಗಿದ್ದು, ಜನತೆಗೆ ನಮ್ಮ ಕರ್ತವ್ಯವಾಗಿದೆ ಎಂದು ವಿವರಿಸಿದರು.

“ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ ಕೇವಲ ರಾಜ್ಯಗಳಿಗೆ ಸೀಮಿತವಾಗಿಲ್ಲ ಎಂದ ಅವರು, ಅಪರಾಧಗಳು ಅಂತಾರಾಜ್ಯ ಹಾಗೂ ಅಂತರಾಷ್ಟ್ರೀಯ ಮಟ್ಟ ತಲುಪುತ್ತಿವೆ. ದೇಶದ ಗಡಿಯಾಚೆಗಿನ ತಂತ್ರಜ್ಞಾನವನ್ನು ಅಪರಾಧಿಗಳು ಬಳಸುತ್ತಿದ್ದಾರೆ” ಎಂದು ಅವರು ನೆನಪಿಸಿದರು. ರಾಜ್ಯಗಳು ಮತ್ತು ಕೇಂದ್ರ ತನಿಖಾ ಸಂಸ್ಥೆಗಳು ಸಮನ್ವಯತೆಯಿಂದ ಕೆಲಸ ಮಾಡುವ ಅಗತ್ಯವನ್ನು ಪ್ರಧಾನಿ ಒತ್ತಿ ಹೇಳಿದರು.

ಪ್ರಧಾನ ಮಂತ್ರಿಗಳ ಕಚೇರಿ (ಪಿಎಂಒ) ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಚಿಂತನ-ಮಂಥನ ಸಮ್ಮೇಳನವು ಎರಡು ದಿನಗಳ ಕಾಲ ನಡೆಯಲಿದೆ. ಸಮ್ಮೇಳನವು ಆಂತರಿಕ ಭದ್ರತೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ನೀತಿ ನಿರೂಪಣೆಗೆ ರಾಷ್ಟ್ರೀಯ ದೃಷ್ಟಿಕೋನವನ್ನು ಒದಗಿಸುವ ಪ್ರಯತ್ನವಾಗಿದೆ. ಪೊಲೀಸ್ ಪಡೆಗಳ ಆಧುನೀಕರಣ, ಸೈಬರ್ ಅಪರಾಧ ನಿರ್ವಹಣೆ, ಕ್ರಿಮಿನಲ್ ನ್ಯಾಯ ವ್ಯವಸ್ಥೆಯಲ್ಲಿ ಮಾಹಿತಿ ತಂತ್ರಜ್ಞಾನದ ಹೆಚ್ಚಿನ ಬಳಕೆ, ಭೂ ಗಡಿ ನಿರ್ವಹಣೆ, ಕರಾವಳಿ ಭದ್ರತೆ, ಮಹಿಳಾ ಭದ್ರತೆ, ಮಾದಕವಸ್ತು ಕಳ್ಳಸಾಗಣೆ ಇತ್ಯಾದಿಗಳ ಕುರಿತು ಈ ಸಭೆಗಳಲ್ಲಿ ಚರ್ಚಿಸಲಾಗುವುದು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಗಳಲ್ಲಿ ಎಂಟು ರಾಜ್ಯಗಳ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಮತ್ತು 16 ರಾಜ್ಯಗಳ ಗೃಹ ಸಚಿವರು ಭಾಗವಹಿಸಿದ್ದರು.

PM Modi pitches for ‘One Nation, One Uniform’ for police at MHA’s Chintan Shivir

ಇದನ್ನೂ ಓದಿ : https://saakshatv.com/delhi-cm-arvind-…i-chief-minister/

Tags: Chintan ShivirPM MODI
ShareTweetSendShare
Join us on:

Related Posts

Brazil football star Neymar

fifaworldcup2026- ಯಮನಿಗೆ ಬೆನ್ನು ತೋರಿಸಿದ್ದ ಮೃತ್ಯುಂಜಯ.. ಫುಟ್‍ಬಾಲ್ ಜಗತ್ತಿನ ಸಾಂಬಾ ಡಾನ್ಸರ್ ನ ಬದುಕಿನ ಯಾನ..!

by admin
June 26, 2026
0

ಫುಟ್‍ಬಾಲ್ ಜಗತ್ತಿನಲ್ಲಿ ಇತಿಹಾಸವನ್ನ ಬರೆದವರಿದ್ದಾರೆ. ಸಾಮ್ರಾಜ್ಯವನ್ನು ಕಟ್ಟಿದವರಿದ್ದಾರೆ. ಆದ್ರೆ ಸಾವು ಬದುಕಿನ ಆಟದಲ್ಲಿ ಒಂದಲ್ಲ ಎರಡಲ್ಲ.. ನಾಲ್ಕು ಬಾರಿ ಯಮರಾಯನಿಗೆ ಬೆನ್ನು ತೋರಿಸಿ, ಫುಟ್‍ಬಾಲ್ ಮೈದಾನದಲ್ಲಿ ಚರಿತ್ರೆ...

ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿಸುದ್ದಿ; ಪ್ರತಿ ಕ್ವಿಂಟಾಲ್‌ಗೆ ₹1,750 ಸಹಾಯಧನ

ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿಸುದ್ದಿ; ಪ್ರತಿ ಕ್ವಿಂಟಾಲ್‌ಗೆ ₹1,750 ಸಹಾಯಧನ

by Shwetha
June 26, 2026
0

ಮಾರುಕಟ್ಟೆಯಲ್ಲಿ ಬೆಲೆ ಕುಸಿತ ಹಾಗೂ ಹವಾಮಾನ ವೈಪರೀತ್ಯದಿಂದ ಸಂಕಷ್ಟದಲ್ಲಿದ್ದ ತೋತಾಪುರಿ ಮಾವು ಬೆಳೆಗಾರರಿಗೆ ಕೇಂದ್ರ ಸರ್ಕಾರ ಮಹತ್ವದ ನೆರವು ಘೋಷಿಸಿದೆ. ಕೇಂದ್ರ ಕೃಷಿ ಸಚಿವಾಲಯ ವತಿಯಿಂದ ಮಾರುಕಟ್ಟೆ...

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

by Shwetha
June 26, 2026
0

ಬಿಡದಿ ಉಪನಗರ ಯೋಜನೆಯ ವಿಚಾರದಲ್ಲಿ ರಾಜ್ಯ ರಾಜಕಾರಣದಲ್ಲಿ ಮತ್ತೆ ಸಂಚಲನ ಮೂಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಎರಡನೇ ಬಾರಿಗೆ ಸುದೀರ್ಘ...

ನದಿಗಳ ಜೋಡಣೆ ಮೋದಿ ಅವರಿಂದ ಮಾತ್ರ ಸಾಧ್ಯ: ಕಾಂಗ್ರೆಸ್ ಸಿಎಂಗಳ ಎದುರೇ ಪ್ರಧಾನಿ ಮೋದಿ ಗುಣಗಾನ ಮಾಡಿದ ಚಂದ್ರಬಾಬು ನಾಯ್ಡು

ನದಿಗಳ ಜೋಡಣೆ ಮೋದಿ ಅವರಿಂದ ಮಾತ್ರ ಸಾಧ್ಯ: ಕಾಂಗ್ರೆಸ್ ಸಿಎಂಗಳ ಎದುರೇ ಪ್ರಧಾನಿ ಮೋದಿ ಗುಣಗಾನ ಮಾಡಿದ ಚಂದ್ರಬಾಬು ನಾಯ್ಡು

by Shwetha
June 26, 2026
0

ಕೊಪ್ಪಳ ಜಿಲ್ಲೆಯ ಮುನಿರಾಬಾದ್‌ನಲ್ಲಿ ಇತಿಹಾಸ ನಿರ್ಮಾಣವಾಗಿದೆ. ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಕೇಂದ್ರ ಸಚಿವರು ಒಂದೇ ವೇದಿಕೆಯಲ್ಲಿ...

ಅಡ್ಡಮತದಾನ ವಿವಾದದ ನಡುವೆಯೇ ಧರ್ಮಸ್ಥಳಕ್ಕೆ ವಿಜಯೇಂದ್ರ ಭೇಟಿ

ಅಡ್ಡಮತದಾನ ವಿವಾದದ ನಡುವೆಯೇ ಧರ್ಮಸ್ಥಳಕ್ಕೆ ವಿಜಯೇಂದ್ರ ಭೇಟಿ

by Shwetha
June 26, 2026
0

ವಿಧಾನ ಪರಿಷತ್ (MLC) ಚುನಾವಣೆಯ ಅಡ್ಡಮತದಾನ ವಿವಾದ ತೀವ್ರಗೊಂಡಿರುವ ನಡುವೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ.ಅವರು ಮಂಗಳೂರು ತಲುಪಿ, ಅಲ್ಲಿಂದ ರಸ್ತೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram