Virat Kohli – ಸೆಕೆಂಡ್ ಇನ್ನಿಂಗ್ಸ್ ನ ದಾಖಲೆ ವೀರ ವಿರಾಟ್
ವಿಶ್ವಕಪ್ ನಲ್ಲಿ ಬ್ಯಾಕ್ ಟು ಬ್ಯಾಕ್ ಅರ್ಧಶತಕಗಳನ್ನು ಸಿಡಿಸಿ ಮಿಂಚುತ್ತಿರುವ ಕೊಹ್ಲಿ, ಟಿ 20 ಕ್ರಿಕೆಟ್ ನಲ್ಲಿ ಸಾಕಷ್ಟು ದಾಖಲೆಗಳನ್ನು ನಿರ್ಮಿಸುತ್ತಿದ್ದಾರೆ.
ಈ ಬಾರಿಯ ವಿಶ್ವಕಪ್ ನಲ್ಲಿ ಎರಡು ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ ಸತತ ಎರಡು ಅರ್ಧಶತಕಗಳನ್ನು ಗಳಿಸಿದ್ದಾರೆ.
ಪಾಕಿಸ್ತಾನ ವಿರುದ್ದದ ಪಂದ್ಯದಲ್ಲಿ 82 ರನ್ ನೆದರ್ ಲ್ಯಾಂಡ್ ವಿರುದ್ಧದ 62 ರನ್ ಗಳಿಸಿ ಎರಡೂ ಪಂದ್ಯಗಳಲ್ಲಿ ಅಜೇಯರಾಗುಳಿದರು.
ಅದರಲ್ಲೂ ಪಾಕ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಟಾರ್ಗೆಟ್ ಚೇಸ್ ಮಾಡಿ ನಿಜವಾದ ಚೇಸಿಂಗ್ ಚಾಂಪಿಯನ್ ಎನಿಸಿಕೊಂಡಿದ್ದಾರೆ.
ಇದರೊಂದಿಗೆ ಚೇಸಿಂಗ್ ನಲ್ಲಿ ವಿರಾಟ್ ಕೊಹ್ಲಿ ಅವರ ದಾಖಲೆಯನ್ನು ಮುರಿಯುವುದು ಸ್ವಲ್ಪ ಕಷ್ಟವೇ ಆಗಬಹುದು.
ಯಾಕೆಂದರೆ ಸದ್ಯ ಟಿ 20 ಯಲ್ಲಿ ಎರಡನೇ ಇನ್ನಿಂಗ್ಸ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ಹೊಂದಿದ್ದಾರೆ.
ಕೊಹ್ಲಿ ಎರಡನೇ ಇನ್ನಿಂಗ್ಸ್ ನಲ್ಲಿ 1983 ರನ್ ಗಳಿಸಿದ್ದಾರೆ. ಇದಲ್ಲದೆ ಎರಡನೇ ಇನ್ನಿಂಗ್ಸ್ ನಲ್ಲಿ ಅತಿ ಹೆಚ್ಚು 50 ರನ್ ಬಾರಿಸಿದ ದಾಖಲೆ ಕೂಡ ಕೊಹ್ಲಿ ಹೆಸರಿನಲ್ಲಿದೆ.
ಕ್ರಿಕೆಟ್ ಇತಿಹಾಸದಲ್ಲಿ ಚೇಸಿಂಗ್ ಮಾಡಿ ಗೆದ್ದ ತಂಡದಲ್ಲಿ ಹೆಚ್ಚು ಅರ್ಧಶತಕ ಗಳಿಸಿದ ಕೀರ್ತಿಯೂ ವಿರಾಟ್ ಕೊಹ್ಲಿಗೆ ಸಲ್ಲುತ್ತದೆ.
ಇದನ್ನೂ ಓದಿ : https://saakshatv.com/virat-kohli-beco…cond-highest-run