Puneeth – ನವೆಂಬರ್ 1 ರಂದು ಪುನೀತ್ ಗೆ ಕರ್ನಾಟಕ ರತ್ನ ಪ್ರಶಸ್ತಿ
ಬೆಂಗಳೂರು : ದಿವಂಗತ ನಟ ಪುನೀತ್ ರಾಜಕುಮಾರ್ ಅವರಿಗೆ ನವೆಂಬರ್ ಒಂದರಂದು ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸಂಜೆ ನಾಲ್ಕು ಗಂಟೆಗೆ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗುವುದು.

ಈ ಕಾರ್ಯಕ್ರಮಕ್ಕೆ ರಜನಿಕಾಂತ್, ಜ್ಯೂನಿಯರ್ ಎನ್ ಟಿ ಆರ್ ಅವರಿಗೆ ಆಹ್ವಾನ ನೀಡಲಾಗಿದೆ.
ಹಾಗೇ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ್ ಕಂಬಾರರು, ರಾಜ್ ಕುಮಾರ್ ಕುಟುಂಬದವರು ಭಾಗಿಯಾಗುತ್ತಾರೆ.
ಅಂದಹಾಗೆ ಇಂದು ಪುನೀತ್ ರಾಜ್ ಕುಮಾರ್ ಅವರ ಗಂಧದಗುಡಿ ಸಿನಿಮಾ ತೆರೆ ಕಂಡಿದ್ದು, ಎಲ್ಲೆಡೆ ಭಾರಿ ರೆಸ್ಪಾನ್ಸ್ ಸಿಕ್ಕಿದೆ.








