Uttara Kannada – ಇಕೋ ಬೀಚ್ ನಲ್ಲಿ ರಾಷ್ಟ್ರಮಟ್ಟದ ಬೀಚ್ ವಾಲಿಬಾಲ್ ಪಂದ್ಯಾವಳಿ
ಉತ್ತರ ಕನ್ನಡ : ಹೊನ್ನಾವರದ ಇಕೋ ಬೀಚ್ ನಲ್ಲಿ ಆಯೋಜನೆ ಮಾಡಲಾಗಿರುವ ರಾಷ್ಟ್ರಮಟ್ಟದ ಬೀಚ್ ವಾಲಿಬಾಲ್ ಪಂದ್ಯಾವಳಿಗೆ ಶಾಸಕ ಸುನೀಲ್ ನಾಯಕ್ ಚಾಲನೆ ನೀಡಿದರು.
ಉತ್ತರ ಕನ್ನಡ ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪ್ರವಾಸೋದ್ಯಮ ಇಲಾಖೆ ಮತ್ತು ಬೀಚ್ ವಾಲಿಬಾಲ್ ಫೆಡರೇಷನ್ ಆಫ್ ಇಂಡಿಯಾ ಸಹಯೋಗದಲ್ಲಿ ಈ ಪಂದ್ಯಾವಳಿಗಳನ್ನು ಆಯೋಜನೆ ಮಾಡಲಾಗಿದೆ.

ಪಂದ್ಯಾವಳಿಯಲ್ಲಿ 8 ರಾಜ್ಯಗಳ 20 ತಂಡಗಳು ಪಾಲ್ಗೊಂಡಿವೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಬೀಚ್ ವಾಲಿಬಾಲ್ ಪಂದ್ಯಾವಳಿ ನಡೆಸುವ ಮೂಲಕ ಜಿಲ್ಲೆಯನ್ನು ಕ್ರೀಡಾ ಪ್ರವಾಸೋದ್ಯಮ ಪಟ್ಟಿಗೆ ಸೇರ್ಪಡೆಗೊಳಿಸಲಾಗುತ್ತಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹ ನಿರ್ದೇಶಕ ಪ್ರವೀಣ್ ಕುಮಾರ್ ತಿಳಿಸಿದರು.








