BJP: ಕಂಗನಾ ರಣಾವತ್ ಗೆ ಜೆಪಿ ನಡ್ಡಾ ಗ್ರೀನ್ ಸಿಗ್ನಲ್….
ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. 2024 ರ ಲೋಕಸಭಾ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದಿಂದ ಸ್ಪರ್ಧಿಸಲು ಅವಕಾಶ ನೀಡಿದರೆ ಬಿಜೆಪಿಗೆ ಸೇರುತ್ತೇನೆ ಎಂದು ಹೇಳಿದ ನಂತರ ಜೆಪಿ ನಡ್ಡಾ ಅವರು ಕಂಗಾನ ನಿರ್ಧಾರವನ್ನು ಸ್ವಾಗತಿಸಿದ್ದಾರೆ.
ಆದರೆ ಅವರಿಗೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡುವ ಕುರಿತು ಸಮಾಲೋಚಿಸಿದ ನಂತರವೇ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ನಡ್ಡಾ ಹೇಳಿದರು. ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ನಿಮಿತ್ತ ಮಾಧ್ಯಮ ಸಂಸ್ಥೆಯೊಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಇಬ್ಬರೂ ಮಾತನಾಡಿದರು.
ಶನಿವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಕಂಗನಾ ರಣಾವತ್, ರಾಜಕೀಯ ಸೇರುವ ಇಚ್ಛೆ ಇದೆ ಎಂದು ಹೇಳಿದ್ದಾರೆ. ಜನರು ಬಯಸಿ ಬಿಜೆಪಿ ಟಿಕೆಟ್ ನೀಡಿದರೆ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧ ಎಂದರು.
ಬಳಿಕ ಇದೇ ಕಾರ್ಯಕ್ರಮದಲ್ಲಿ ಜೆಪಿ ನಡ್ಡಾ ಭಾಗವಹಿಸಿದ್ದರು. ಕಂಗನಾ ರಣಾವತ್ ಅವರ ಮಾತುಗಳನ್ನು ಪ್ರಸ್ತಾಪಿಸಿದಾಗ, ಪ್ರತಿಕ್ರಿಯಿಸಿ “ಕಂಗನಾ ರಣಾವತ್ ನಮ್ಮ ಪಕ್ಷಕ್ಕೆ ಸೇರಲು ಬಯಸಿದರೆ ಸ್ವಾಗತಿಸುತ್ತೇವೆ. ಪಕ್ಷದೊಂದಿಗೆ ಕೆಲಸ ಮಾಡಲು ಬಯಸುವವರಿಗೆ ಉತ್ತಮ ಅವಕಾಶವಿದೆ. ಆದರೆ ಚುನಾವಣೆಗೆ ಸ್ಪರ್ಧಿಸುವುದು ನನ್ನ ನಿರ್ಧಾರ ಮಾತ್ರ ಅಲ್ಲ. ಅದಕ್ಕಾಗಿ ಕ್ಷೇತ್ರ ಮಟ್ಟದಿಂದ ಚುನಾವಣಾ ಸಮಿತಿ, ನಂತರ ಪಕ್ಷದ ಸಂಸದೀಯ ಮಂಡಳಿಗೆ ಸಮಾಲೋಚನೆ ಪ್ರಕ್ರಿಯೆ ನಡೆಯುತ್ತಿದೆ,’’ ಎಂದರು.
ಸದ್ಯ ಹಿಮಾಚಲ ಪ್ರದೇಶದಲ್ಲಿ ಚುನಾವಾಣ ಕಾವು ಏರಿಕೆಯಾಗಿದ್ದು, ಬಿಜೆಪಿ ಅಧಿಕಾರದಲ್ಲಿದೆ. 68 ಸ್ಥಾನಗಳ ಈ ರಾಜ್ಯದಲ್ಲಿ ನವೆಂಬರ್ 12 ರಂದು ಚುನಾವಣೆ ನಡೆಯಲಿದೆ. ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ. ಸದ್ಯ ಇಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಪೈಪೋಟಿ ಏರ್ಪಟ್ಟಿದೆ.
Kangana Ranaut is welcome to join BJP but…: JP Nadda after she hints at political foray