Siddaramaiah – ಸಿಎಂ ಬೊಮ್ಮಾಯಿಗೆ ಪ್ರಶ್ನೆಗಳ ಸುರಿಮಳೆಗೈದ ಸಿದ್ದರಾಮಯ್ಯ
ಬೆಂಗಳೂರು : ಭ್ರಷ್ಟಾಚಾರ ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಮುಖ್ಯಮಂತ್ರಿ ಬವಸರಾಜ ಬೊಮ್ಮಾಯಿ ಅವರಿಗೆ ಸರಣಿ ಪ್ರಶ್ನೆಗಳನ್ನು ಮಾಡಿದ್ದಾರೆ.
ಸಿದ್ದರಾಮಯ್ಯ ತನ್ನ ಟ್ವಿಟ್ಟರ್ ನಲ್ಲಿ.. ಪಿಎಸ್‌ಐ ನೇಮಕಾತಿಯಲ್ಲಿ ಯಾವ ಅಕ್ರಮಗಳು ನಡೆದಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದರು. ಹಾಗಾದರೆ ಎಡಿಜಿಪಿ ಅಮೃತ್ ಪೌಲ್ ಅವರು ಜೈಲು ಸೇರಿದ್ದು ಯಾಕೆ?
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಚೇರಿಯಿಂದಲೇ ದೀಪಾವಳಿ ಉಡುಗೊರೆ ನೆಪದಲ್ಲಿ ಆಯ್ದ ಪತ್ರಕರ್ತರಿಗೆ ಲಕ್ಷ, ಲಕ್ಷ ರೂಪಾಯಿ ಲಂಚ ನೀಡಿರುವುದನ್ನು ಪತ್ರಕರ್ತರೇ ಬಹಿರಂಗ ಪಡಿಸಿದ್ದಾರೆ. ನಮ್ಮ ಆರೋಪಕ್ಕೆ ಸಾಕ್ಷಿ ಕೇಳುತ್ತಿರಲ್ಲಾ ಮುಖ್ಯಮಂತ್ರಿಗಳೇ, ಪತ್ರಕರ್ತರೇ ಸಾಕ್ಷಿ ಕೊಟಿದ್ದಾರಲ್ಲಾ?

ಸರ್ಕಾರದ ಭ್ರಷ್ಟಾಚಾರವನ್ನು ಮುಚ್ಚಿಹಾಕುವ ಉದ್ದೇಶದಿಂದಲೇ ಪತ್ರಕರ್ತರಿಗೆ ದೀಪಾವಳಿ ಉಡುಗೊರೆ ನೆಪದಲ್ಲಿ ಬಸವರಾಜ ಬೊಮ್ಮಾಯಿ ಅವರು ಲಕ್ಷ, ಲಕ್ಷ ದುಡ್ಡು ಕೊಟ್ಟಿದ್ದಾರೆ. ಇದರ ಬಗ್ಗೆಯೂ ತನಿಖೆಯಾಗಲಿ.
ಪೊಲೀಸ್ ಅಧಿಕಾರಿ ನಂದೀಶ್ ಹೃದಯಾಘಾತಕ್ಕೆ ಅವರು ವರ್ಗಾವಣೆಗಾಗಿ 60-70 ಲಕ್ಷ ರೂಪಾಯಿ ಲಂಚ ಕೊಟ್ಟಿರುವುದೇ ಕಾರಣ ಎಂದು ಸಚಿವ ಎಂ.ಟಿ.ಬಿ.ನಾಗರಾಜ್ ಹೇಳಿದ್ದಾರೆ. ಲಂಚಗುಳಿತನಕ್ಕೆ ಇನ್ನೇನು ಸಾಕ್ಷಿ ಬೇಕು
ಸಚಿವ ಕೆ.ಎಸ್.ಈಶ್ವರಪ್ಪ 40% ಲಂಚ ಕೇಳಿದ್ದಾರೆ ಎಂದು ಆರೋಪಿಸಿ ಸಂತೋಷ್ ಪಾಟೀಲ್ ಎಂಬ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದಕ್ಕಾಗಿ ಈಶ್ವರಪ್ಪ ರಾಜೀನಾಮೆ ನೀಡಿಲ್ವಾ? ಇನ್ನೇನು ಸಾಕ್ಷಿ ಬೇಕು ಬಿಜೆಪಿ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.








