Police constable age limit : ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ 2 ವರ್ಷ ವಯೋಮಿತಿ ಹೆಚ್ಚಳ
ಪೊಲೀಸ್ ಉದ್ಯೋಗಾಕಾಂಕ್ಷಿಗಳ ಬಹುದಿನದ ಬೇಡಿಕೆ ರಾಜ್ಯ ಸರ್ಕಾರ ಅಸ್ತು ಎಂದಿದೆ. ಪೊಲೀಸ್ ಕಾನ್ಸ್ಟೇಬಲ್ ಹುದ್ದೆ ಗಳಿಗೆ ನಿಗದಿಪಡಿಸಲಾದ ವಯೋಮಿತಿಯನ್ನು ಒಂದು ಬಾರಿಗೆ ಅನ್ವಯವಾಗುವಂತೆ ಹೆಚ್ಚಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಕಳೆದ ಮೂರು ವರ್ಷಗಳಿಂದ ಕೋವಿಡ್ನಿಂದಾಗಿ ನಿಯಮಿತವಾಗಿ ನೇಮಕಾತಿ ನಡೆಯದ ಹಿನ್ನೆಲೆಯಲ್ಲಿ ಉದ್ಯೋಗಾಕಾಂಕ್ಷಿಗಳು ಅರ್ಜಿ ಸಲ್ಲಿಸುವ ಅವಕಾಶದಿಂದ ವಂಚಿತರಾಗಿದ್ದರು. ಹೀಗಾಗಿ ನೇಮಕಾತಿಯಲ್ಲಿ ಎರಡು ವರ್ಷಗಳ ವಿನಾಯಿತಿ ನೀಡುವಂತೆ ಸರ್ಕಾರಕ್ಕೆ ಹಲವು ಭಾರಿ ಮನವಿ ಮಾಡಲಾಗಿತ್ತು.
ಇದೀಗ ರಾಜ್ಯ ಸರ್ಕಾರ ಸಿವಿಲ್, ಸಿಎಆರ್, ಡಿಎಆರ್, ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ವಯೋಮಿತಿ 2 ವರ್ಷ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2022-23ನೇ ಸಾಲಿನಲ್ಲಿ 3484 ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಇದಕ್ಕೆ ಮಾತ್ರ ಅನ್ವಯವಾಗಲಿದೆ.
ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಸಾಮಾನ್ಯ ವರ್ಗಕ್ಕೆ ಗರಿಷ್ಠ ವಯೋಮಿತಿಯನ್ನು 25 ರಿಂದ 27 ವರ್ಷ ಹಾಗೂ ಎಸ್ಸಿ/ಎಸ್ಟಿ ಹಾಗೂ ಹಿಂದುಳಿದ ವರ್ಗಗಳಿಗೆ 27 ರಿಂದ 29 ವರ್ಷಳಿಗೆ ಹಾಗೂ ಬುಡ ಕಟ್ಟು ಜನಾಂಗದ ಅಭ್ಯರ್ಥಿಗಳಿಗೆ 32 ವರ್ಷಗಳಿಗೆ ಹೆಚ್ಚಿಸಲಾಗಿದೆ. ಸೇವಾ ನಿರತ ಅಭ್ಯರ್ಥಿಗಳ ವಯೋಮಿತಿಯಲ್ಲಿ ಎಸ್ಸಿ/ಎಸ್ಟಿ ಅಭ್ಯರ್ಥಿಗಳ ವಯಸ್ಸಿಗೆ 35 ಹಾಗೂ ಇತರೆ ಅಭ್ಯರ್ಥಿಗಳಿಗೆ 33 ವರ್ಷಗಳಿಗೆ ಹೆಚ್ಚಿಸಲಾಗಿದೆ.
ಸಶಸ್ತ್ರ ಪಡೆಯ ಪೊಲೀಶ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಶೇ. 10 ರಷ್ಟು ಮೀಸಲಾತಿಯನ್ನು ಕಲ್ಪಿಸಿ ಗರಿಷ್ಠ ವಯೋಮಿತಿಯನ್ನು ಸಾಮಾನ್ಯ ವರ್ಗಕ್ಕೆ 31 ವರ್ಷ ಹಾಗೂ ಎಸ್ಸಿ/ಎಸ್ಟಿ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ 33 ವರ್ಷ ನಿಗದಿ ಪಡಿಸಲಾಗಿದೆ.
Age limit increase by 2 years for Police constable posts – State Govt
ಇದನ್ನೂ ಓದಿ – https://saakshatv.com/kantara-hyderaba…e-wrong-offering/








