Alia Bhatt : ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಆಲಿಯಾ ಭಟ್ …
ಆಲಿಯಾ ಭಟ್ ರಣಬೀರ್ ಕಪೂರ್ ಜೋಡಿ ಹೆಣ್ಣು ಮಗುವಿಗೆ ಪೋಷಕರಾಗಿದ್ದಾರೆ. ನಟಿ ಆಲಿಯಾ ಭಟ್ ಇಂದು ಅಂದರೆ ನವೆಂಬರ್ 6 ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಭಾನುವಾರ ಬೆಳಗ್ಗೆಯೇ ಆಲಿಯಾ ಅವರನ್ನು ಮುಂಬೈನ ಎಚ್‌ಎನ್ ರಿಲಯನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮುಂಬೈನ ಗೋರೆಗಾಂವ್ ಪ್ರದೇಶದಲ್ಲಿ ಇರುವ ಈ ಆಸ್ಪತ್ರೆಯಲ್ಲಿ ಕಪೂರ್ ಕುಟುಂಬಕ್ಕೆ ಹೊಸ ಸದಸ್ಯರೊಬ್ಬರು ಆಗಮಿಸಿದ್ದಾರೆ.
ಆಲಿಯಾ – ರಣಬೀರ್ ದಂಪತಿಗೆ ಸೋಷಿಯಲ್ ಮೀಡಿಯಾ ಮೂಲಕ ಸಿನಿ ತಾರೆಯರು ಮತ್ತು ಅಭಿಮಾನಿಗಳು ಶುಭ ಹಾರೈಸಿದ್ದಾರೆ.
ನಟಿ ಆಲಿಯಾ ಭಟ್ ಸೋಶಿಯಲ್ ಮೀಡಿಯಾ ಮೂಲಕ ಹೆಣ್ಣು ಮಗುವಿಗೆ ಜನ್ಮ ನೀಡಿರುವ ಸುದ್ದಿಯನ್ನ ಬಹಿರಂಗಪಡಿಸಿದ್ದಾರೆ. “ನಮ್ಮ ಜೀವನದ ಅತ್ಯುತ್ತಮ ಸುದ್ದಿ ಇದು. ನಮ್ಮ ಮಗು ಈ ಜಗತ್ತಿಗೆ ಬಂದಿದೆ ಮತ್ತು ಅವಳು ಅದ್ಭುತ ಹುಡುಗಿ. ಈ ಸಂತೋಷವನ್ನು ವ್ಯಕ್ತಪಡಿಸುವುದು ಕಷ್ಟ. ನಾವು ಪೋಷಕರಾಗಿದ್ದೇವೆ ಎಂದು ಬರೆದುಕೊಂಡಿದ್ದಾರೆ.
Alia Bhatt Baby News | Ranbir Kapoor Family Welcome First Child