EWS quota | ನಾಳೆ ಆರ್ಥಿಕ ದುರ್ಬಲ ವರ್ಗದವರಿಗೆ ಮೀಸಲಾತಿ ಕುರಿತ ತೀರ್ಪು
ನವದೆಹಲಿ : ಸುಪ್ರೀಂ ಕೋರ್ಟ್ ನಾಳೆ ಆರ್ಥಿಕ ದುರ್ಬಲ ವರ್ಗದವರಿಗೆ ಶೇಕಡಾ 10ರಷ್ಟು ಮೀಸಲಾತಿ ಒದಗಿಸುವ ಸಂವಿಧಾನದ 103ನೇ ತಿದ್ದುಪಡಿಯ ಸಿಂಧುತ್ವ ಕುರಿತಂತೆ ತೀರ್ಪು ಪ್ರಕಟಿಸಲಿದೆ.
ಮುಖ್ಯ ನ್ಯಾಯಮೂರ್ತಿ ಯು.ಯು. ಲಲಿತ್, ನ್ಯಾಯಮೂರ್ತಿಗಳಾದ ದಿನೇಶ್ ಮಹೇಶ್ವರಿ, ಎಸ್. ರವೀಂದ್ರ ಭಟ್, ಬೇಲಾ ಎಂ. ತ್ರಿವೇದಿ ಮತ್ತು ಜೆ.ಬಿ. ಪಾರ್ದಿವಾಲಾ ಅವರನ್ನೊಳಗೊಂಡ ಪಂಚ ಸದಸ್ಯರ ವಿಭಾಗೀಯ ಪೀಠವು ಈ ಕುರಿತ ತೀರ್ಪನ್ನು ಸೆಪ್ಟೆಂಬರ್ 27ರಂದು ನಡೆದ ವಿಚಾರಣೆ ವೇಳೆ ನಾಳೆಗೆ ಕಾಯ್ದಿರಿಸಿತ್ತು.

ಹೀಗಾಗಿ ನಾಳೆ ಸುಪ್ರೀಂ ಕೋರ್ಟ್ ಆರ್ಥಿಕ ದುರ್ಬಲ ವರ್ಗದವರಿಗೆ ಶೇಕಡಾ 10ರಷ್ಟು ಮೀಸಲಾತಿ ಒದಗಿಸುವ ಸಂವಿಧಾನದ 103ನೇ ತಿದ್ದುಪಡಿಯ ಸಿಂಧುತ್ವ ಕುರಿತಂತೆ ತೀರ್ಪು ಪ್ರಕಟಿಸಲಿದೆ.








