ಸೇಬು ಹಣ್ಣಿಗೆ ಮತ್ತು ಬರುವ ಔಷಧ ನೀಡಿ ಅತ್ಯಾಚಾರ – ಮುರುಘಾಶ್ರೀ ವಿರುದ್ಧ 649 ಪುಟಗಳ ಚಾರ್ಜ್ ಶೀಟ್..
ಸೇಬು ಹಣ್ಣಿ ನಲ್ಲಿ ಮತ್ತು ಬರಿಸುವ ಔಷಧ ನೀಡಿ ಮೃಗೀಯವಾಗಿ ಮಕ್ಕಳ ಮೇಲೆ ಅತ್ಯಾಚಾರ ಎಸೆಗಿದ್ದಾರೆ ಎಂದು ಮುರುಘಾ ಶ್ರೀ ಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಮಠದ ಶ್ರೀಗಳ ವಿರುದ್ಧ 2ನೇ ಪೋಕ್ಸೋ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್ಪಿ ಅನಿಲ್ ನೇತೃತ್ವದ ತಂಡ 2ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಒಟ್ಟು 694 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ.
ಪೋಕ್ಸೋ, ಅಟ್ರಾಸಿಟಿ ಮತ್ತು ಧಾರ್ಮಿಕ ಕೇಂದ್ರ ದುರುಪಯೋಗ ಕಾಯ್ದೆ ಅಡಿಯಲ್ಲೂ ಕೇಸ್ ದಾಖಲಾಗಿದ್ದು, ಮುರುಘಾಶ್ರೀ, ಲೇಡಿ ವಾರ್ಡನ್ (ರಶ್ಮಿ), ಕಾರ್ಯದರ್ಶಿ ಪರಮಶಿವಯ್ಯ ಹಾಗೂ ಮಠದ ಉತ್ತರಾಧಿಕಾರಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.
ಮುರುಘಾಶ್ರೀಗಳು ಲೇಡಿ ವಾರ್ಡನ್ ಮೂಲಕ ಮಕ್ಕಳನ್ನು ಕರೆಸಿ, ನಿರಂತರ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರು. ಮತ್ತು ಬರುವ ಔಷಧಿ ಬೆರೆಸಿದ ಸೇಬು ಹಣ್ಣು ನೀಡಿ ಮಕ್ಕಳನ್ನು ಅತ್ಯಾಚಾರಕ್ಕೆ ಬಳಸಿಕೊಂಡಿದ್ದಾರೆ ಎಂದು ಚಾರ್ಜ್ ಶೀಟ್ ನಲ್ಲಿ ಸಲ್ಲಿಸಲಾಗಿದೆ. ಕಚೇರಿ, ಬೆಡ್ ರೂಂ, ಬಾತ್ ರೂಂ ಗೆ ಕರೆದೊಯ್ದು ಬಲಾತ್ಕಾರ ಮಾಡಿದ್ದಾರೆ. ವಿರೋಧಿಸಿದವರಿಗೆ ಜೀವ ಬೆದರಿಕೆ ಹಾಕುತ್ತಿದ್ದರು. ಇದೇ ರೀತಿ ಹತ್ತಕ್ಕೂ ಹೆಚ್ಚು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕೇಳಿ ಬಂದಿದೆ.
ಅಲ್ಲದೇ ಕೆಲ ವರ್ಷದ ಹಿಂದೆ ಓರ್ವ ಬಾಲಕಿ ರೇಪ್ ಅಂಡ್ ಮರ್ಡರ್ ಸಹ ಆಗಿದ್ದಾಳೆ. ಈ ಕುರಿತು ಆಂಧ್ರಕ್ಕೆ ತೆರಳಿದ್ದ ಪೊಲೀಸ್ ತಂಡ ಹಲವು ಮಾಹಿತಿಗಳನ್ನ ಕಲೆ ಹಾಕಿದೆ. ಆಂಧ್ರದ ಬಾಲಕಿ ಮಠದ ಹಾಸ್ಟೆಲ್ನಲ್ಲಿ ವ್ಯಾಸಂಗ ಮಾಡ್ತಿದ್ದಳು. ಮಠದ ಹಾಸ್ಟೆಲ್ ನಲ್ಲಿದ್ದ ಮತ್ತಷ್ಟು ಮಕ್ಕಳ ವಿಚಾರಣೆ ನಡೆಸಲಾಗುತ್ತಿದ್ದು, ಶ್ರೀಗಳ ವಿರುದ್ಧ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
murugha shree : 649 page charge sheet against Murughashree..








