KRS ಬೃಂದಾವನದಲ್ಲಿ ಚಿರತೆ ಪ್ರತ್ಯಕ್ಷ – ಪ್ರವಾಸಿಗರಲ್ಲಿ ಆತಂಕ…
15 ದಿನಗಳ ಅಂತರದಲ್ಲಿ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ ಎಸ್ ಬೃಂದಾವನದಲ್ಲಿ ಮೂರು ಬಾರಿ ಚಿರತೆ ಕಾಣಿಸಿಕೊಂಡು ಪ್ರವಾಸಿಗರಲ್ಲಿ ಆತಂಕ ಹುಟ್ಟಿಸಿದೆ.
ಭಾನುವಾರ ಸಂಜೆ 6 ಗಂಟೆ ಸಮಯದಲ್ಲಿ ಬೃಂದಾವನದ ಮೀನುಗಾರಿಕೆ ಇಲಾಖೆಯ ಅಕ್ಟೇರಿಯಂ ಬಳಿಯ ರಾಯಲ್ ಆರ್ಕಿಡ್ ಹೋಟೆಲ್ ಕಡೆ ಚಿರತೆ ಹೋಗುತ್ತಿರುವುದು ಭದ್ರತಾ ಸಿಬ್ಬಂದಿಯ ಗಮನಕ್ಕೆ ಬಂದಿದೆ.
ತಕ್ಷಣ ಜಾಗೃತರಾದ ಭದ್ರತಾ ಸಿಬ್ಬಂದಿ ಪ್ರವಾಸಿಗರನ್ನು ಬೃಂದಾವನದಿಂದ ಹೊರಗೆ ಕಳುಹಿಸಿರುವುದಾಗಿ ವರದಿಯಾಗಿದೆ. ಸದ್ಯ ಬಂದಾವನಕ್ಕೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಎರಡು ಕಡೆ ಬೋನ್ ಇರಿಸಿದ್ದರೂ ಅದು ಬೋನಿಗೆ ಬಿದ್ದಿಲ್ಲ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ನಿನ್ನೆ ಸಂಜೆಯಂತೂ ಚಿರತೆ ಇದೆ ಎಂದು ಎಚ್ಚರಿಸಿದಾಗ ಪ್ರವಾಸಿಗರು ಭಯಭೀತರಾಗಿ ಓಡಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಚಿರತೆ ಹಿಡಿಯುವ ತನಕ ಬೃಂದಾವನ ಮುಚ್ಚುವುದೇ ಸೂಕ್ತ ಎಂಬ ಅಭಿಪ್ರಾಯಗಳು ವ್ಯಕ್ತವಾಗಿದೆ.
Leopard: Leopard sighting at KRS Brindavan – Worry among tourists…








