Arun Singh | ರಾಜ್ಯದಲ್ಲಿ 150 ಸೀಟು ಗೆದ್ದೇ ಗೆಲ್ಲುತ್ತೇವೆ
ಬೆಂಗಳೂರು : ಈ ಬಾರಿಯ ಚುನಾವಣೆಯಲ್ಲಿ ರಾಜ್ಯದಲ್ಲಿ 150 ಸೀಟು ಗೆದ್ದೇ ಗೆಲ್ಲುತ್ತೇವೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅರುಣ್ ಸಿಂಗ್, ಬಿಜೆಪಿ ಸಂಘಟನೆ ಮತ್ತು ಕಾರ್ಯಕರ್ತರ ಪಕ್ಷ. ರಾಜ್ಯದಲ್ಲಿ 150 ಸೀಟು ಗೆದ್ದೇ ಗೆಲ್ಲುತ್ತೇವೆ.
ಕಾಂಗ್ರೆಸ್ ಪಕ್ಷ ಹೆಸರು ಇಲ್ಲದಾಗೆ ಆಗುತ್ತಿದೆ. ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಒಂದೇ ಒಂದು ಸೀಟು ಗೆದ್ದಿಲ್ಲ.

ಎಲ್ಲಾ ಕಡೆ ಬಿಜೆಪಿ ಗೆದ್ದುಕೊಂಡು ಬರುತ್ತಿದೆ. ಮುಂದಿನ ದಿನಗಲ್ಲೂ ಕರ್ನಾಟಕದಲ್ಲಿ ಬಿಜೆಪಿ ವಿಜಯಶಾಲಿಯಾಗುತ್ತದೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೆಲಸ ರಾಜ್ಯದ ಜನಕ್ಕೆ ಇಷ್ಟ ಆಗಿದೆ.
ಹಾಗಾಗಿ ಮುಂದಿನ ಬಾರಿಯೂ ರಾಜ್ಯದಲ್ಲಿ ನಮ್ಮದೇ ಸರ್ಕಾರವಿರುತ್ತದೆ.
ಕಾಂಗ್ರೆಸ್ ನವರ ಬಳಿ ಹೇಳಿಕೊಳ್ಳಲು ಏನೂ ಇಲ್ಲ ಎಂದಿದ್ದಾರೆ.








