nz vs pak Semi Final – ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ನ್ಯೂಜಿಲೆಂಡ್..
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರು T20 ವಿಶ್ವಕಪ್ ನ ಮೊದಲ ಸೆಮಿಫೈನಲ್ ಪಂದ್ಯ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನ್ಯೂಜಿಲೆಂಡ್ ಮತ್ತು ಪಾಕಿಸ್ತಾನ ನಡೆಯುತ್ತಿದೆ. ಪಾಕಿಸ್ತಾನದ ವಿರುದ್ಧ ಟಾಸ್ ಗೆದ್ದ ನ್ಯೂಜಿಲೆಂಡ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ.
ಎರಡೂ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ರೀತಿ ಇದೆ.
ನ್ಯೂಜಿಲೆಂಡ್ ಪ್ಲೇಯಿಂಗ್ XI
ಫಿನ್ ಅಲೆನ್, ಡೆವೊನ್ ಕಾನ್ವೇ, ಕೇನ್ ವಿಲಿಯಮ್ಸನ್ (ಸಿ), ಗ್ಲೆನ್ ಫಿಲಿಪ್ಸ್, ಡಾರೆಲ್ ಮಿಚೆಲ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಇಶ್ ಸೋಧಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್.
ಪಾಕಿಸ್ತಾನ ಪ್ಲೇಯಿಂಗ್ XI
ಮೊಹಮ್ಮದ್ ರಿಜ್ವಾನ್, ಬಾಬರ್ ಅಜಮ್ (ನಾಯಕ), ಮೊಹಮ್ಮದ್ ಹ್ಯಾರಿಸ್, ಶಾನ್ ಮಸೂದ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಂ ಜೂನಿಯರ್, ನಸೀಮ್ ಶಾ, ಹ್ಯಾರಿಸ್ ರೌಫ್, ಶಾಹೀನ್ ಶಾ ಆಫ್ರಿದಿ.
ಪಿಚ್ ವರದಿ: ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ನಡುವಿನ ಪಂದ್ಯಕ್ಕೂ ಇದೇ ಪಿಚ್ ಬಳಸಲಾಗಿದೆ ಎಂದು ಶಾನ್ ಪೊಲಾಕ್ ಹೇಳಿದ್ದಾರೆ. ಈ ಪಿಚ್‌ನಲ್ಲಿ ಎರಡು ರೀತಿಯ ವೇಗವನ್ನು ಕಾಣಬಹುದು. ಈ ರೀತಿಯ ಪಿಚ್‌ನಲ್ಲಿ ನ್ಯೂಜಿಲೆಂಡ್‌ಗಿಂತ ಪಾಕಿಸ್ತಾನ ಹೆಚ್ಚು ಪಂದ್ಯಗಳನ್ನು ಆಡಿದೆ. ಮೊದಲು ಬ್ಯಾಟಿಂಗ್ ಮಾಡಿದರೆ ಅನುಕೂಲವಾಗುತ್ತದೆ. ಪಾಕಿಸ್ತಾನದ ಬೌಲರ್‌ಗಳು ರಿವರ್ಸ್ ಸ್ವಿಂಗ್ ಪಡೆಯಬಹುದು, ಇದು ನ್ಯೂಜಿಲೆಂಡ್‌ಗೆ ಸಮಸ್ಯೆಗಳನ್ನು ಉಂಟುಮಾಡಬಹುದು.
ಗ್ರೂಪ್ 1 ರಲ್ಲಿ ನ್ಯೂಜಿಲೆಂಡ್ ತಂಡ 5 ಪಂದ್ಯಗಳಲ್ಲಿ 3 ರಲ್ಲಿ ಜಯಗಳಿಸಿದೆ. ಪಾಕಿಸ್ತಾನ್ ಗ್ರೂಪ್ ಎರಡಲ್ಲಿ ಒಟ್ಟು 5 ಪಂದ್ಯಗಳಲ್ಲಿ 3 ರಲ್ಲಿ ಗೆದ್ದು 2 ರಲ್ಲಿ ಸೋತಿದೆ.
nz vs pak Semi Final – New Zealand won the toss and chose to bat..








