Hubli:ಹುಬ್ಬಳ್ಳಿ: ವಿವಾದ ದಲ್ಲಿದ್ದ ಈದ್ಗಾ ಮೈದಾನದಲ್ಲಿ ಅಂತಿಮವಾಗಿ ಟಿಪ್ಪು ಜಯಂತಿ ಆಚರಿಸಿದ ಶ್ರೀರಾಮ ಸೇನೆ
ಈ ಕೆಲಸಕ್ಕೆ AMIM ಪಕ್ಷದ ಮುಖಂಡರು ತಮ್ಮ ಪಕ್ಷದ ಜಿಲ್ಲಾಧ್ಯಕ್ಷರ ತೀವ್ರ ವಿರೋಧದ ನಡುವೆಯೂ ಮಾಹಾನಗರ ಪಾಲಿಕೆಯಿಂದ ಅಧಿಕೃತ ಅನುಮತಿ ಪಡೆದ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆ ಮಾಡಿದರು ಈ ಹಿಂದೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿ ಇತಿಹಾಸ ಸೃಷ್ಟಿಸಿದ್ದರು .
ಹು-ಧಾ ಮಹಾನಗರ ಪಾಲಿಕೆ ಅಧಿಕೃತ ಘೋಷಣೆ ಹೊರಡಿಸುತ್ತಿದ್ದಂತೆ ರಾಣಿ ಚೆನ್ನಮ್ಮ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಪರ ವಿರೋಧ ಚರ್ಚೆ ಆರಂಭವಾಗಿದ್ದವು. ಅನುಮತಿ ಕೇಳಿದ್ದ ಸ್ವತಃAMIM ಪಕ್ಷದ ಜಿಲ್ಲಾಧ್ಯಕ್ಷರೇ ಮೈದಾನದಲ್ಲಿ ಜಯಂತಿ ಬೇಡ ಎಂದು ಬಹಿರಂಗವಾಗಿ ಹೇಳಿದ್ದರು .
ಪಾಲಿಕೆ ನಿರ್ಣಯದ ವಿರುದ್ಧ ಕೆಂಡಾಮಂಡಲವಾಗಿದ್ದ ಶ್ರೀರಾಮಸೇನೆ ಮತ್ತು ವಿಪಕ್ಷ ಕಾಂಗ್ರೆಸ್ ನ ಚಿತ್ತ ಈದ್ಗಾ ಮೈದಾನದತ್ತ ಎಂಬುವಂತಾಗಿತ್ತು ನಿಜ .
AMIM ಪಕ್ಷದ ಮುಖಂಡ ವಿಜಯ್ ಗುಂಟ್ರಾಳ ಮತ್ತು ಇತರ ಸದಸ್ಯರು ನಿರೀಕ್ಷೆಯಂತೆ ಇಂದು ಈದ್ಗಾ ಮೈದಾನದಲ್ಲಿ ಟಿಪ್ಪು ಭಾವ ಚಿತ್ರವಿಟ್ಟು, ಪುಷ್ಪಾಪರ್ಣೆ ಮಾಡಿ, ಟಿಪ್ಪು ಪರ ಜಯಘೋಷ ಹಾಕುವ ಮೂಲಕ ಜಯಂತಿ ಆಚರಣೆ ಮಾಡಿದರು.
ಈಗ ಈದ್ಗಾ ಮೈದಾನ ಸಾರ್ವಜನಿಕವಾಗಿದ್ದು, ಪಾಲಿಕೆ ಅನುಮತಿ ಪಡೆದು ಯಾವ ಸಮುದಾಯವಾದರೂ ಬೇಕಾದ ಜಯಂತಿ ಆಚರಣೆಗಳನ್ನು ಮುಕ್ತವಾಗಿ ಮಾಡಬಹುದಾಗಿವೆ .
ವಿವಾದದ ಕೇಂದ್ರ ಬಿಂದುವಾಗಿದ್ದ ಈದ್ಗಾ ಮೈದಾನ ಈಗ ಸಾರ್ವಜನಿರ ಆಸ್ಥಿಯಾಗಿದೆ . ಕೇವಲ ಹಿಂದೂ ಮತ್ತು ಮುಸ್ಲಿಂ ಸಮುದಾಯಕ್ಕೆ ಮಾತ್ರ ಸೀಮಿತವಾಗಿರದೇ ಎಲ್ಲಾ ಸಮುದಾಯಗಳ ಜಯಂತಿ ಆಚರಣೆಗೆ ಮಾಡಲು ಮುಕ್ತವಾಗಿದೆ.
ಪಾಲಿಕೆ ತೆಗೆದುಕೊಂಡ ಐತಿಹಾಸಿಕ ನಿರ್ಣಯ ಪರಿಣಾಮ ಸರ್ವ ಧರ್ಮಗಳ ಹಿತಕ್ಕಾಗಿದೆ, ಇನ್ನು ಮುಂದೆಯಾದರೂ ಈದ್ಗಾ ಮೈದಾನಕ್ಕಿರುವ ರಕ್ತಸಿಕ್ತ ಇತಿಹಾಸದ ಕಳಂಕ ದೂರವಾಗಿ, ಸರ್ವ ಜನಾಂಗದ ಶಾಂತಿಯ ತೋಟವಾಗಲಿ ಎನ್ನುವುದು ಹು-ಧಾ ಜನರ ಆಶಯವಾಗಿದೆ








