ಕಾಶ್ಮೀರದ ಶೋಪಿಯಾನ್ ನಲ್ಲಿ ಎನ್ ಕೌಂಟರ್ – JEM ಉಗ್ರನ ಹತ್ಯೆ….
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಶುಕ್ರವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಜೈಶ್-ಎ-ಮೊಹಮ್ಮದ್ (ಜೆಇಎಂ) ಉಗ್ರನನ್ನ ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉಗ್ರರನ್ನು ಕಮ್ರಾನ್ ಭಾಯ್ ಅಲಿಯಾಸ್ ಹನೀಸ್ ಎಂದು ಗುರುತಿಸಲಾಗಿದೆ. ಶುಕ್ರವಾರ ಮುಂಜಾನೆ ಶೋಪಿಯಾನ್ ಜಿಲ್ಲೆಯ ಕಪ್ರೆನ್ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
“JeM ಭಯೋತ್ಪಾದಕ ಸಂಘಟನೆಯ ಒಬ್ಬ ಉಗ್ರ ಕೊಲ್ಲಲ್ಪರು. ಕುಲ್ಗಾಮ್ ಶೋಪಿಯಾನ್ ಪ್ರದೇಶದಲ್ಲಿ ಸಕ್ರಿಯವಾಗಿದ್ದ ಕಮ್ರಾನ್ ಭಾಯಿ ಆಲಿಯಾಸ್ ಹನೀಸ್ ಎಂದು ಗುರುತಿಸಲಾಗಿದೆ. ಇನ್ನೂ ಶೋಧ ನಡೆಯುತ್ತಿದೆ,” ಕಾಶ್ಮೀರದ ಎಡಿಜಿಪಿ ವಿಜಯ್ ಕುಮಾರ್ ಟ್ವೀಟ್ ಮಾಡಿದ್ದಾರೆ.
JeM terrorist killed in encounter in J-K’s Shopian