satish jarkiholi : ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಬಾರದೆಂಬ ಕಾರಣಕ್ಕೆ ಹೇಳಿಕೆ ವಾಪಸ್ ಪಡೆದೆ – ಸತೀಶ್ ಜಾರಕಿಹೊಳಿ…
ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಬಾರದು ಮತ್ತು ಸಮಾಜದಲ್ಲಿ ಗೊಂದಲ ಉಂಟಾಗಬಾರದು ಎಂಬ ಏಕೈಕ ಕಾರಣಕ್ಕೆ ಹಿಂದು ಪದದ ಬಗ್ಗೆ ನಾನು ನೀಡಿದ್ದ ಹೇಳಿಕೆಯನ್ನ ವಾಪಸ್ ಪಡೆದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಹೇಳಿದ್ದಾರೆ.
ನಿಪ್ಪಾಣಿಯಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ನಾನು ನೀಡಿದ್ದ ಹೇಳಿಕೆಯನ್ನ ತಿರುಚಲಾಯಿತು. ಇದರಿಂದ ವಿವಾದ ಸೃಷ್ಟಿಯಾಯಿತು. ನನ್ನನ್ನು ಹಿಂದೂ ವಿರೋಧಿ ಎಂದು ಬಿಂಬಿಸಲಾಯಿತು. ಹಾಗಾಗಿ ಪಕ್ಷಕ್ಕೆ ಹಾನಿ ಆಗಬಾರದೆಂದು ಸ್ಥಳೀಯ ನಾಯಕರೊಂದಿಗೆ ಚರ್ಚಿಸಿ ಸ್ವತಃ ನಾನೇ ಈ ನಿರ್ಣಯ ಕೈಗೊಂಡಿದ್ದೇನೆ ಎಂದು ಹೇಳಿದರು.
ನಿಪ್ಪಾಣಿಯಲ್ಲಿ ನಡೆದಿದ್ದು ಖಾಸಗಿ ಕಾರ್ಯಕ್ರಮ. ಅದು ನನ್ನ ವೈಯಕ್ತಿಕ ಹೇಳಿಕೆ. ಪಕ್ಷಕ್ಕೂ ಅದಕ್ಕೂ ಸಂಬಂಧವಿಲ್ಲ. ಈ ಹೇಳಿಕೆಯಿಂದ ವಿವಾದ ಉಂಟಾಗಿದ್ದಲ್ಲದೆ ನನ್ನ ಮೇಲೆಯೇ ಆರೋಪ ಬಂತು. ಆದರೆ ನಾನು ನನ್ನ ಸಿದ್ಧಾಂತದಿಂದ ಹಿಂದೆ ಸರಿದಿಲ್ಲ ಎಂದು ತಿಳಿಸಿದರು.
ಸತೀಶ ಜಾರಕಿಹೊಳಿ ದುಡುಕುವವರಲ್ಲ. ಕಾಂಗ್ರೆಸ್ ಸಹವಾಸದಿಂದ ಅವರಿಗೆ ಹೀಗಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಾನು ಎಂದಿಗೂ ದುಡುಕಿಲ್ಲ. ನನ್ನ ಹೇಳಿಕೆಯನ್ನೇ ಸೂಕ್ಷ್ಮವಾಗಿ ಗಮನಿಸಿ ಎಂದಿದ್ದೇನೆ. ಆದರೆ, ಸರ್ಕಾರದ ಮಟ್ಟದಲ್ಲಿ ಮತ್ತು ಸಮಾಜದಲ್ಲಿ ಗೊಂದಲವಾಗಬಾರದೆಂಬ ಉದ್ದೇಶದಿಂದ ಹೇಳಿಕೆ ವಾಪಸ್ ಪಡಿದಿದ್ದೇನೆ ಎಂದು ಸ್ಪಷ್ಟಪಡಿಸಿದರು.
satish jarkiholi: I took back the statement because the charisma of the party should not be affected – Satish Jarkiholi…








