Rajiv Gandhi ಹತ್ಯೆ ಪ್ರಕರಣ – ನಳಿನಿ ಮತ್ತು ರವಿಚಂದ್ರನ್ ಬಿಡುಗಡೆಗೆ ಸುಪ್ರೀಂ ಆದೇಶ…
ರಾಜೀವ್ ಗಾಂಧಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ ಶ್ರೀಹರನ್ ಮತ್ತು ಆರ್ ಪಿ ರವಿಚಂದ್ರನ್ ಅವರನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶ ನೀಡಿದೆ.
ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಬಿ.ವಿ.ನಾಗರತ್ನ ಅವರನ್ನೊಳಗೊಂಡ ಪೀಠ, ಮೇ ತಿಂಗಳಲ್ಲಿ ಬಿಡುಗಡೆಯಾದ ಮತ್ತೊಬ್ಬ ಅಪರಾಧಿ ಎಜಿ ಪೆರಾರಿವಾಲನ್ ಅವರ ಪ್ರಕರಣವನ್ನ ಪರಿಗಣನೆಗೆ ತೆಗೆದುಕೊಂಡು ಈ ಆದೇಶ ನೀಡಿದೆ.
ಪ್ರಸ್ತುತ ಪೆರೋಲ್ ಮೇಲೆ ಹೊರಗಿರುವ ನಳಿನಿ, ಮದ್ರಾಸ್ ಹೈಕೋರ್ಟ್ ತನ್ನ ಮನವಿಯನ್ನು ತಿರಸ್ಕರಿಸಿದ ನಂತರ ಜೈಲಿನಿಂದ ಬೇಗನೆ ಬಿಡುಗಡೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಮೇ 18 ರಂದು ಸುಪ್ರೀಂ ಕೋರ್ಟ್ ಸಂವಿಧಾನದ 142 ನೇ ವಿಧಿಯ ಅಡಿಯಲ್ಲಿ ವಿಶೇಷ ಅಧಿಕಾರವನ್ನು ಚಲಾಯಿಸುವ ಮೂಲಕ 30 ವರ್ಷಗಳಿಗಿಂತ ಹೆಚ್ಚು ಕಾಲ ಜೈಲಿನಲ್ಲಿ ಸೇವೆ ಸಲ್ಲಿಸಿದ ಪೆರಾರಿವಾಲನ್ ಅವರನ್ನು ಬಿಡುಗಡೆ ಮಾಡಲು ಆದೇಶಿಸಿದ ನಂತರ ನಳಿನಿ ಪೆರಿಯಾವಾಲನ್ ಪ್ರಕರಣವನ್ನ ಉಲ್ಲೇಖಿಸಿ ಇದೇ ರೀತಿ ಪರಿಹಾರಕ್ಕೆ ಅರ್ಜಿ ಸಲ್ಲಿಸಿದ್ದರು.
ಮೇ 21, 1991 ರಂದು ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಚುನಾವಣಾ ಸಮಾವೇಶದಲ್ಲಿ ಭಾಗವಹಿಸುವ ವೇಳೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನ ಎಲ್‌ಟಿಟಿಇ ಆತ್ಮಹತ್ಯಾ ಬಾಂಬರ್ ಮೂಲಕ ಹತ್ಯೆ ಮಾಡಲಾಗಿತ್ತು.
Rajiv Gandhi Assassination Case: SC Orders Release of Nalini, Ravichandran