Congress – ಗೃಹಿಣಿರಿಗೆ ಕಣ್ಣೀರು, ಬಡವರ ಹೊಟ್ಟೆಗೆ ತಣ್ಣೀರು, ರೈತರಿಗೆ ರಕ್ತ ಕಣ್ಣೀರು
ಬೆಂಗಳೂರು : ಬೆಲೆ ಏರಿಕೆಯ ಜೊತೆಗೆ ನಿಮ್ಮ ಅವೈಜ್ಞಾನಿಕ GST ಹೇರಿಕೆ ಹಾಗೂ ಏರಿಕೆಯು ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆಯುತ್ತಿದೆ. ಗೃಹಿಣಿರಿಗೆ ಕಣ್ಣೀರು, ಬಡವರ ಹೊಟ್ಟೆಗೆ ತಣ್ಣೀರು, ರೈತರಿಗೆ ರಕ್ತ ಕಣ್ಣೀರು ಎಂಬಂತಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಾಜ್ಯ ಕಾಂಗ್ರೆಸ್ ಕಿಡಿಕಾರಿದೆ.
ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಕಾಂಗ್ರೆಸ್, PSI, ಸಹಾಯಕ ಪ್ರಾಧ್ಯಾಪಕರು, KPTCL ಸೇರಿದಂತೆ ಬಹುತೇಕ ನೇಮಕಾತಿಗಳಲ್ಲಿ ಅಕ್ರಮ ನಡೆದಿರುವ ಸಂಗತಿ ನಿಮ್ಮ ಗಮನಕ್ಕೆ ಬಂದಿದೆಯಲ್ಲವೇ ನರೇಂದ್ರ ಮೋದಿ ಅವರೇ? ವರ್ಷಕ್ಕೆ 2 ಕೋಟಿ ಉದ್ಯೋಗ ಎಂದಿದ್ದೀರಿ, ಆದರೆ ಇಲ್ಲಿ “2 ಕೋಟಿಗೆ ಒಂದು ಉದ್ಯೋಗ” ಎಂಬಂತಾಗಿದೆ. ನಿಮ್ಮ #TroubleEngineSarkara ದ ಹುದ್ದೆ ಮಾರಾಟದ ಬಗ್ಗೆ ಮಾತನಾಡುವಿರಾ?
ಕಳೆದ ನಾಲ್ಕು ವರ್ಷಗಳಲ್ಲಿ ಪ್ರಕೃತಿ ವಿಕೋಪಗಳಿಂದ ಒಂದು ಲಕ್ಷ ಕೋಟಿಗೂ ಹೆಚ್ಚು ನಷ್ಟವಾಗಿದೆ. ನರೇಂದ್ರ ಮೋದಿ ಅವರೇ, ಒಮ್ಮೆಯೂ ನೆರೆ ವೀಕ್ಷಣೆಗೆ ತಾವು ಬರಲಿಲ್ಲ, ಆನೆ ಹೊಟ್ಟೆಗೆ ಅರೆ ಕಾಸಿನ ಮಜ್ಜಿಗೆ ಎಂಬಂತೆ ಕೇವಲ 1,500 ಕೋಟಿ ಬಿಟ್ಟರೆ ಮತ್ತೇನೂ ಕೊಟ್ಟಿಲ್ಲ.

ಬೆಲೆ ಏರಿಕೆಯ ಜೊತೆಗೆ ನಿಮ್ಮ ಅವೈಜ್ಞಾನಿಕ GST ಹೇರಿಕೆ ಹಾಗೂ ಏರಿಕೆಯು ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆಯುತ್ತಿದೆ. ಗೃಹಿಣಿರಿಗೆ ಕಣ್ಣೀರು, ಬಡವರ ಹೊಟ್ಟೆಗೆ ತಣ್ಣೀರು, ರೈತರಿಗೆ ರಕ್ತ ಕಣ್ಣೀರು ಎಂಬಂತಾಗಿದೆ #TroubleEngineSarkara ದ GST ಹಾಗೂ ಬೆಲೆ ಏರಿಕೆಯ ಬಗ್ಗೆ ಮಾತನಾಡುವ ಧೈರ್ಯವಿದೆಯೇ ನರೇಂದ್ರ ಮೋದಿ ಅವರೇ?
ಮಾನ್ಯ ನರೇಂದ್ರ ಮೋದಿ ಅವರೇ,#TroubleEngineSarkara ದ ಕಿರುಕುಳದ ಬಗ್ಗೆ ಗುತ್ತಿದೆದಾರ ಸಂತೋಷ್ ಪಾಟೀಲ್ ಪತ್ರಕ್ಕೆ ತಾವು ಯಾವುದೇ ಕ್ರಮ ಕೈಗೊಳ್ಳದ ಪರಿಣಾಮ ಅವರ ಜೀವ ಹೋಯ್ತು. ಗುತ್ತಿಗೆದಾರರು ಭ್ರಷ್ಟ ಸರ್ಕಾರದ 40% ಲೂಟಿಯ ಬಗ್ಗೆ 2 ಬಾರಿ ನಿಮಗೆ ಪತ್ರ ಬರೆದಿದ್ದಾರೆ, ಅವರಿಗೆ ಉತ್ತರ ನೀಡಿವಿರಾ? ಅವರ ಸಮಸ್ಯೆಗೆ ಪರಿಹಾರ ತಂದಿದ್ದೀರಾ?
ಮಾನ್ಯ ನರೇಂದ್ರ ಮೋದಿ ಅವರೇ, ನಿಮ್ಮ ಮೇಲಿನ ಭರವಸೆಯಿಂದ ಹಿಂದೆ ನಳಿನ್ ಕುಮಾರ್ ಕಟೀಲ್ ಅವರು ಒಂದು ಡಾಲರ್‌ಗೆ 15 ರೂಪಾಯಿಯಾಗುತ್ತದೆ ಎಂದಿದ್ದರು, ಈಗ 83 ರೂಪಾಯಿಯಾಗಿದೆ. ನಿಮ್ಮ ನಳಿನ್ ಅವರೀಗ ಡಾಲರ್ ಎಂಬ ಪದ ಉಚ್ಚರಿಸುತ್ತಲೇ ಇಲ್ಲ, ಆ ಪದ ಕೇಳಿದರೆ ಬೆಚ್ಚಿ ಬೀಳುತ್ತಾರೆ! ಅವರಿಗೆ ಸಾಂತ್ವಾನ ಹೇಳುವಿರಾ ಎಂದು ಪ್ರಶ್ನಿಸಿದೆ.








