2025-26ನೇ ಶೈಕ್ಷಣಿಕ ವರ್ಷದಿಂದ 1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ
ರಾಜ್ಯ ಸರ್ಕಾರ ಒಂದನೇ ತರಗತಿಗೆ ದಾಖಲು ಮಾಡಲು ಕನಿಷ್ಠ ವಯೋಮಿತಿಯನ್ನು 6 ವರ್ಷಕ್ಕೆ ಕಡ್ಡಾಯಗೊಳಿಸಿ ಹೊರಡಿಸಿದ್ದ ಆದೇಶ 2025-26 ರಿಂದ ಜಾರಿಗೆ ಬರಲಿದೆ.
ರಾಜ್ಯ ಸರ್ಕಾರ ಕಳೆದ ಜು.26ರಂದು ಹೊರಡಿಸಿದ್ದ ಆದೇಶ ಪ್ರತಿಯಲ್ಲಿ ಪ್ರಸಕ್ತ ಸಾಲಿನಿಂದಲೇ 1ನೇ ತರಗತಿಗೆ ಮಕ್ಕಳ ದಾಖಲಾತಿಯನ್ನು 6 ವರ್ಷ ಪೂರ್ಣಗೊಳ್ಳಬೇಕೆಂದು ನಿಗದಿ ಪಡಿಸಿತ್ತು. ಆ ಬಳಿಕ ಆದೇಶವನ್ನು ರದ್ದುಗೊಳಿಸಿ, ಇದೀಗ 2025-26ನೇ ಶೈಕ್ಷಣಿಕ ವರ್ಷದಿಂದ ಕಡ್ಡಾಯಗೊಳಿಸಿದೆ.
ಶಿಕ್ಷಣ ಇಲಾಖೆ ಹೊರಡಿಸಿದ ಹೊಸ ಆದೇಶದಲ್ಲಿ “ಶೈಕ್ಷಣಿಕ ವರ್ಷದ ಜೂನ್ ಒಂದನೇ ತಾರೀಕಿಗೆ ಕಡ್ಡಾಯವಾಗಿ 6 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿ ನಿಗದಿಪಡಿಸಿ” ಆದೇಶಿಸಿದೆ ಎಂಬುದನ್ನು 2025-26ನೇ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ಜೂನ್ ಒಂದನೇ ತಾರೀಕಿಗೆ ಕಡ್ಡಾಯವಾಗಿ 06 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿ ನಿಗದಿಪಡಿಸಿ ಆದೇಶಿಸಿದೆ ಎಂದು ತಿದ್ದಿ ಓದಿಕೊಳ್ಳತಕ್ಕದ್ದು. ಉಳಿದಂತೆ ಸರ್ಕಾರದ ಹಿಂದಿನ ಆದೇಶದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ತಿಳಿಸಿದೆ.
School joining age: Govt made 6 years compulsory to join 1st class…








