Shraddha Murder Case: ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಮತ್ತಷ್ಟು ಆಘಾತಕಾರಿ ಮಾಹಿತಿ ಇಲ್ಲಿದೆ..
ಶ್ರದ್ಧಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಆಘಾತಕಾರಿ ಮಾಹಿತಿಗಳು ಹೊರಬಂದಿದ್ದು ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾ ತನ್ನ ಗೆಳತಿ ಜೀವಂತವಾಗಿದ್ದಾಳೆ ಎಂದು ತೋರಿಸಿಲು ಆಕೆಯ ಇನ್ಸ್ಟಾಗ್ರಾಂ ಖಾತೆಯನ್ನ ಬಳಸುತ್ತಿದ್ದ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.
ಮೇ 18 ರಂದು ನಡೆದ 26 ವರ್ಷದ ಶ್ರದ್ಧಾ ಹತ್ಯೆ ಇಡೀ ದೇಶವನ್ನೆ ಬೆಚ್ಚಿಬೀಳಿಸಿದೆ. ನವೆಂಬರ್ 14 ರಂದು ದೆಹಲಿ ಪೊಲೀಸರು ಆರೋಪಿಯನ್ನ ಬಂಧಿಸಿದ ನಂತರ ಬೆಚ್ಚಿ ಬೀಳುವ ಪ್ರಕರಣ ಬೆಳಕಿಗೆ ಬಂದಿದೆ.
ಶ್ರದ್ಧಾ ದೇಹವನ್ನ ತುಂಡು ಮಾಡಲು ಬಳಸಿದ ಆಯುಧಕ್ಕಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಜೂನ್ ವರೆಗೆ ಆಕೆಯ ಇನ್‌ಸ್ಟಾಗ್ರಾಮ್ ಖಾತೆಯನ್ನು ಬಳಸಿ ಆಕೆ ಜೀವಂತವಾಗಿದ್ದಾಳೆ ಎಂದು ನಂಬಿಸಿದ್ದಾನೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಇಬ್ಬರ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು ಎಂದು ದೆಹಲಿ ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಇದಲ್ಲದೆ, ಗೆಳತಿಯನ್ನ ಕೊಂದ ನಂತರ ಪೂನಾವಾಲಾ ಡೇಟಿಂಗ್ ಆ್ಯಪ್‌ನಲ್ಲಿ ಹಲವಾರು ಹುಡುಗಿಯರನ್ನ ಭೇಟಿ ಮಾಡುವುದನ್ನ ಮುಂದುವರೆಸಿದ್ದ ಎಂದು ತಿಳಿದು ಬಂದಿದೆ.
ರಾತ್ರಿ 20 ಗಂಟೆ ಸಮಯದಲ್ಲಿ ಜನ ಕಡಿಮೆ ಇದ್ದಾಗ ಕತ್ತರಿಸಿದ್ದ ದೇಹದ ತುಂಡುಗಳನ್ನ ಕಪ್ಪು ಕವರ್ ನಲ್ಲಿ ತೆಗೆದುಕೊಂಡು ಹೋಗಿ ವಿಲೇವಾರಿ ಮಾಡುತ್ತಿದ್ದ ಎನ್ನಲಾಗಿದೆ.








