Rahul Gandhi : ಸಾವರ್ಕರ್ ಗೆ ಅವಮಾನ ಆರೋಪ , ರಾಹುಲ್ ಗಾಂಧಿ ವಿರುದ್ಧ ದೂರು..!!
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಭಾರತ್ ಜೋಡೊ ಯಾತ್ರೆಯ ಭಾಗವಾಗಿ ರಾಹುಲ್ ಗಾಂಧಿ ಅವರು ನಡೆಸಿದ ಸುದ್ದಿಗೋಷ್ಠಿಯಲ್ಲಿ ಸಾವರ್ಕರ್ ವಿರುದ್ಧ ಟೀಕಿಸಿದ್ದರು. ಸಾವರ್ಕರ್ ಬ್ರಿಟಿಷರಿಗೆ ಸಹಾಯ ಮಾಡಿದರು ಮತ್ತು ಬ್ರಿಟಿಷ್ ಸರ್ಕಾರಕ್ಕೆ ಕ್ಷಮಾಪಣಾ ಪತ್ರ ಬರೆಯುವ ಮೂಲಕ ಸ್ವಾತಂತ್ರ್ಯ ಹೋರಾಟಗಾರರಿಗೆ ದ್ರೋಹ ಮಾಡಿದರು ಎಂದು ವಾಗ್ದಾಳಿ ನಡೆಸಿದ್ದರು.
ಹೀಗಾಗಿ ಸಾವರ್ಕರ್ ರಿಗೆ ರಾಹುಲ್ ಗಾಂಧಿ ಅವಮಾನ ಮಾಡಿದ್ದಾರೆಂದು ಆರೋಪಿಸಿ ಅವರ ಮೊಮ್ಮಗ ರಂಜಿತ್ ಸಾವರ್ಕರ್ ಮುಂಬೈನ ಶಿವಾಜಿ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.








