Salaar ನಲ್ಲಿ ಕನ್ನಡದ ನಟ ಪ್ರಮೋದ್ ನಟನೆ ಖಚಿತ ಪಡಿಸಿದ ಪ್ರಶಾಂತ್ ನೀಲ್..!!!
KGF 2 ಖ್ಯಾತೆಯ ಪ್ರಶಾಂತ್ ನೀಲ್ ಸದ್ಯ ಸಲಾರ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.,. ಇದೊಂದು ಪಕ್ಕಾ ಮಾಸ್ ಎಂಟರ್ ಟೈನರ್ ಸಿನಿಮಾವಾಗಿದ್ದು , ಪ್ಯಾನ್ ಇಂಡಿಯನ್ ಲೆವೆಲ್ ನಲ್ಲಿ ರಿಲೀಸ್ ಆಗಲಿದೆ.. ಹೊಂಬಾಳೆ ಫಿಲಮ್ಸ್ ನಿರ್ಮಾಣ ಮಾಡುತ್ತಿರುವ ಬಿಗ್ ಬಜೆಟ್ ಸಿನಿಮಾದಲ್ಲಿ ಬಾಹುಬಲಿ ಖ್ಯಾತಿಯ ನಟ ಪ್ರಭಾಸ್ ನಾಯಕರಾಗಿದ್ದಾರೆ..
ಈ ಸಿನಿಮಾದ ಮೇಲೆ ಸಿಕ್ಕಾಪಟ್ಟೆ ಕ್ರೇಜ್ ಇದೆ.. ಸಾಲು ಸಾಲು ಪ್ರಭಾಸ್ ಸಿನಿಮಾಗಳು ಸೋಲುತ್ತಲೇ ಇದ್ದು , ಈ ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ ಇದೆ..
ಅಂದ್ಹಾಗೆ ಈ ಸಿನಿಮಾದಲ್ಲಿ ಕನ್ನಡದ ಖ್ಯಾತ ನಟ ಪ್ರಮೋದ್ ನಟಿಸಲಿದ್ದಾರೆಂಬ ಸುದ್ದಿ ಇತ್ತೀಚೆಗೆ ಸಿಕ್ಕಾಪಟ್ಟೆ ಸದ್ದು ಮಾಡಿತ್ತು.. ಕೆಲವರು ಇದನ್ನ ವದಂತಿಯಷ್ಟೇ ಎಂದಿದ್ದರಾದ್ರೆ ದು ಸತ್ಯ ಎಂದು ಖುದ್ದು ನಿರ್ದೇಶಕ ಪ್ರಶಾಂತ್ ನೀಲ್ ಖಚಿತಪಡಿಸಿದ್ದಾರೆ..
ಮಾಧ್ಯಮದವರ ಜೊತೆಗೆ ಮಾತನಾಡಿರುವ ಪ್ರಶಾಂತ್ ನೀಲ್ ಅವರು ಪ್ರಮೋದ್ ಅವರನ್ನು ನಾನು ರತ್ನನ್ ಪ್ರಪಂಚ ಸಿನಿಮಾದಲ್ಲಿ ನೋಡಿದ್ದೆ. ಆ ಸಿನಿಮಾದಲ್ಲಿ ಅವರು ತುಂಬಾ ಚೆನ್ನಾಗಿ ಅಭಿನಯಿಸಿದ್ದರು. ಈ ಸಿನಿಮಾದ ಅವರ ಅಭಿನಯವೇ ಸಲಾರ್ ಸಿನಿಮಾದಲ್ಲಿ ನಟಿಸಲು ಆಯ್ಕೆ ಮಾಡುವಂತೆ ಮಾಡಿತ್ತು. ಹಾಗಾಗಿ ಸಲಾರ್ ಸಿನಿಮಾದಲ್ಲಿ ಪ್ರಮೋದ್ ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ದಾರೆ ಎಂದು ಹೇಳಿದ್ದಾರೆ.






