Congress : ಸರ್ಕಾರಿ ಇಲಾಖೆಗಳಲ್ಲಿ 30 ಲಕ್ಷ ಹುದ್ದೆಗಳು ಖಾಲಿಯಿವೆ – ಮಲ್ಲಿಕಾರ್ಜುನ ಖರ್ಗೆ
ಸರ್ಕಾರಿ ಇಲಾಖೆಗಳಲ್ಲಿ 30 ಲಕ್ಷ ಹುದ್ದೆಗಳು ಖಾಲಿ ಇವೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗ್ತಿದ್ದು , ಈ ಸಮಸ್ಯೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕ್ರೋಶ ಹೊರಹಾಕಿದ್ದಾರೆ..
ದೇಶದಲ್ಲಿ ಒಟ್ಟು 30 ಲಕ್ಷ ಹುದ್ದೆಗಳು ಖಾಲಿ ಇದ್ರೂ ಕೇವಲ 75 ಸಾವಿರ ಹುದ್ದೆಗಳಷ್ಟೇ ಭರ್ತಿಯಾಗಿದೆ ಎಂದು ಟೀಕಿಸಿದ್ದಾರೆ.
ಕೇಂದ್ರ ಸಚಿವಾಲಯ ಸೇವೆ ಕಚೇರಿಗಳಲ್ಲಿ 1,600ರಷ್ಟು ಹುದ್ದೆಗಳು ಖಾಲಿ ಇವೆ ಎಂಬ ಮಾಧ್ಯಮ ವರದಿಯನ್ನು ಉದ್ದೇಶಿಸಿ ಖರ್ಗೆ ಕೇಂದ್ರ ಸರ್ಕಾರವನ್ನ ಪ್ರಶ್ನೆ ಮಾಡುತ್ತಾ ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡುವುದಾಗಿ ಪ್ರಧಾನಿ ಮೋದಿ ಭರವಸೆ ನೀಡಿದ್ದರು. ಎಂಟು ವರ್ಷಗಳಲ್ಲಿ 16 ಕೋಟಿ ಹುದ್ದೆ ಸೃಷ್ಟಿಯಾಗಬೇಕಿತ್ತು. ಸರ್ಕಾರದ ವಿವಿಧ ಇಲಾಖೆಗಳಲ್ಲಿ 30 ಲಕ್ಷಕ್ಕೂ ಹೆಚ್ಚು ಖುದ್ದೆಗಳು ಖಾಲಿ ಇವೆ. ಪ್ರಧಾನಿ 75,000 ನೇಮಕಾತಿ ಪತ್ರಗಳನ್ನು ಮಾತ್ರ ವಿತರಿಸಿದ್ದಾರೆ ಎಂದು ಖರ್ಗೆ ಟೀಕಿಸಿದ್ದಾರೆ..








