Belagavi : ವಸತಿ ನಿಲಯದಲ್ಲೇ ಬಾಲಕ ಆತ್ಮಹತ್ಯೆಗೆ ಶರಣು..
ಇತ್ತೀಚೆಗೆ ಅಪ್ರಾಪ್ತ ಶಾಲಾ ವಿದ್ಯಾರ್ಥಿಗಳೇ ಆತ್ಮಹತ್ಯೆಗೆ ಶರಣೊಗ್ತಿರುವ ಆಘಾತಕಾರಿ ಘಟನೆಗಳು ಬೆಳಕಿಗೆ ಬರುತ್ತಿವೆ..
ಇದೀಗ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ವಸತಿ ನಿಲಯದಲ್ಲೇ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ಬೈಲಹೊಂಗಲ ಪಟ್ಟಣದ ಇಂದಿರಾ ನಗರದಲ್ಲಿ ನಡೆದಿದೆ.
ಕೊಡ್ಡಿವಾಡ ಗ್ರಾಮದ ಪರುಶರಾಮ ಕೋನೇರಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಬೇರೆ ವಿದ್ಯಾರ್ಥಿಗಳು ಕಾಲೇಜಿಗೆ ಈತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ..
ವಿದ್ಯಾರ್ಥಿ ಬಾಗಿಲು ತೆರೆಯದಾಗ ವಿದ್ಯಾರ್ಥಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಹುಡುಗ ತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ.. ಸ್ಥಳಕ್ಕೆ ಆಗಮಿಸಿದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಮುಂದುವರೆಸಿದ್ದಾರೆ..
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.. ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..