ಬೆಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಮುಂದಾಗಿದೆ. ಹುದ್ದೆಗಳ ಭರ್ತಿ ಬಗ್ಗೆ ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದ್ದಾರೆ
ಕ್ಯಾಬಿನೆಟ್ ಸಭೆ ಬಳಿಕ ಮಾತನಾಡಿದ ಸಚಿವ ಜೆ.ಸಿ. ಮಾಧುಸ್ವಾಮಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ತೀರ್ಮಾನ ಮಾಡಿದೆ. ವೈದ್ಯರ ಹುದ್ದೆಗಳನ್ನು ಭರ್ತಿ ಮಾಡಲು ಕ್ಯಾಬಿನೆಟ್ ಒಪ್ಪಿಗೆ ನೀಡಿದೆ.
ಈಗಾಗಲೇ ಸರ್ಕಾರಿ ಆಸ್ಪತ್ರೆಗಳಲ್ಲಿ ಅರೆಕಾಲಿಕವಾಗಿ ಕೆಲಸ ಮಾಡುತ್ತಿರುವ ತಜ್ಞರಿಗೆ, ವೈದ್ಯರಿಗೆ ಶೇ 2ರಷ್ಟು ಗ್ರೇಸ್ ಮಾರ್ಕ್ಸ್ ನೀಡಲು ಕ್ಯಾಬಿನೆಟ್ ತೀರ್ಮಾನ ಮಾಡಿದೆ. ಇದರಿಂದಾಗಿ ಭರ್ತಿ ಸಮಯದಲ್ಲಿ ಸಹಾಯವಾಗಲಿದೆ ಎಂದು ಸಚಿವ ಜೆ.ಸಿ, ಮಾಧುಸ್ವಾಮಿ ಹೇಳಿದರು.
ವೈದ್ಯರ ಹುದ್ದೆಗಳನ್ನು ಸೇರಿಕೊಂಡು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲ ಸರ್ಕಾರ ಮುಂದಾಗಿದೆ.








