ADVERTISEMENT
Thursday, November 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

UDID card :ರಾಜ್ಯದ 5.86 ಲಕ್ಷ ವಿಶೇಷಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ – ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌

ಸರ್ಕಾರದಿಂದ ವಿಶೇಷಚೇತನರಿಗೆ ನೀಡುವ ವಿಶಿಷ್ಟ ಗುರುತಿನ ಚೀಟಿಯ (UDID) ವಿತರಣೆಯಲ್ಲಿ ರಾಜ್ಯದಲ್ಲಿ ಗಮನಾರ್ಹ ಸಾಧನೆಯಾಗಿದ್ದು, ಈವರೆಗೆ 5.86 ಲಕ್ಷ ವಿಶೇಷಚೇತನರಿಗೆ ಕಾರ್ಡ್‌ ವಿತರಣೆ ಮಾಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ.

Naveen Kumar B C by Naveen Kumar B C
November 26, 2022
in Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

ರಾಜ್ಯದ 5.86 ಲಕ್ಷ ವಿಶೇಷಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ – ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌

ಸರ್ಕಾರದಿಂದ ವಿಶೇಷಚೇತನರಿಗೆ ನೀಡುವ ವಿಶಿಷ್ಟ ಗುರುತಿನ ಚೀಟಿಯ (UDID) ವಿತರಣೆಯಲ್ಲಿ ರಾಜ್ಯದಲ್ಲಿ ಗಮನಾರ್ಹ ಸಾಧನೆಯಾಗಿದ್ದು, ಈವರೆಗೆ 5.86 ಲಕ್ಷ ವಿಶೇಷಚೇತನರಿಗೆ ಕಾರ್ಡ್‌ ವಿತರಣೆ ಮಾಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ.

ಯುಡಿಐಡಿ ಕಾರ್ಡ್‌ ವಿತರಣೆ ಪ್ರಕ್ರಿಯೆಯ ಪ್ರಗತಿ ಪರಿಶೀಲಿಸಿ ಸಚಿವರು ಮಾತನಾಡಿದರು.

Related posts

virat-kohli-birthday-special-cheeku-king-kohli-cricket-legend

ಸೋಲಿನ ನೆರಳಿನಲ್ಲೂ ಗೆಲುವಿನ ಚಿತ್ತಾರ ಬಿಡಿಸುವ ಕ್ರಿಕೆಟ್ ಜಗತ್ತಿನ ವಿಶ್ವಕರ್ಮ…!

November 5, 2026
lavancha-root-traditional-remedy-for-mata-mantra-dosha

ಮಾಟ-ಮಂತ್ರ ದೋಷ ಪರಿಹಾರ

November 5, 2026

ವಿಕಲಚೇತನರ ಸಬಲೀಕರಣ ಇಲಾಖೆಯ ಸಹಯೋಗದೊಂದಿಗೆ, ವಿಶೇಷಚೇತನರಿಗೆ ನೀಡುವ ಯುನಿವರ್ಸಲ್ ಗುರುತು ಚೀಟಿ–ಯುಡಿಐಡಿಯಲ್ಲಿ ಕರ್ನಾಟಕ ಉತ್ತಮ ಸಾಧನೆ ತೋರಿದೆ. ರಾಮನಗರ ಜಿಲ್ಲೆಯಲ್ಲಿ ಅತಿ ಹೆಚ್ಚು ಕಾರ್ಡ್‌ಗಳು ವಿತರಣೆಯಾಗಿವೆ. ಚಿಕ್ಕಮಗಳೂರು ಎರಡನೇ ಸ್ಥಾನದಲ್ಲಿದ್ದು, ಬಾಗಲಕೋಟೆ, ಹಾವೇರಿ, ಉತ್ತರ ಕನ್ನಡ, ಬೆಳಗಾವಿ ಹಾಗೂ ಮಂಡ್ಯ ಜಿಲ್ಲೆಗಳು ನಂತರದ ಸ್ಥಾನಗಳಲ್ಲಿವೆ ಎಂದು ಸಚಿವರು ತಿಳಿಸಿದರು. ಜೊತೆಗೆ, ಉತ್ತಮ ಸಾಧನೆ ಮಾಡಿದ ಜಿಲ್ಲೆಗಳ ಆರೋಗ್ಯಾಧಿಕಾರಿಗಳನ್ನು ಅಭಿನಂದಿಸಿದರು.

ವಿಶೇಷಚೇತನರು ಕಡ್ಡಾಯವಾಗಿ ಯುಡಿಐಡಿ ಪೋರ್ಟಲ್‌ನಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು. ಒಮ್ಮೆ ಲಾಗಿನ್ ಆದ ನಂತರ ಯುಡಿಐಡಿ ಕಾರ್ಡ್ ಪಡೆಯುವುದು ಸುಲಭವಾಗಿದೆ. ಇದರ ಮೂಲಕ ಸರ್ಕಾರದಿಂದ ಹಲವಾರು ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗಲಿದೆ. ಯುಡಿಐಡಿ ಕಾರ್ಡ್‌ನಿಂದ ಬ್ಲಾಕ್ ಮತ್ತು ಜಿಲ್ಲಾ ಹಂತ, ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಎಲ್ಲಾ ಹಂತದ ಅನುಷ್ಠಾನ ಶ್ರೇಣಿಯಲ್ಲಿ ಫಲಾನುಭವಿಯ ಸೌಲಭ್ಯಗಳನ್ನು ಟ್ರ್ಯಾಕ್ ಮಾಡಲಾಗುವುದು. ಕಟ್ಟ ಕಡೆಯ ವಿಶೇಷಚೇತನರಿಗೂ ಯುಡಿಐಡಿ ಕಾರ್ಡ್‌ಗಳನ್ನು ವಿತರಿಸುವುದು ಸರ್ಕಾರದ ಗುರಿಯಾಗಿದ್ದು, ಇದಕ್ಕಾಗಿ ಎಲ್ಲಾ ವಲಯಗಳಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.

ಅಂಗವೈಕಲ್ಯದಲ್ಲಿ ಈ ಹಿಂದೆ 7 ಬಗೆಯ ನ್ಯೂನತೆಗಳನ್ನು ಮಾತ್ರ ಪರಿಗಣಿಸಲಾಗುತ್ತಿತ್ತು. ಆದರೆ 2016 ರ ಆರ್.ಪಿ.ಡಬ್ಲ್ಯೂ.ಡಿ ಕಾಯ್ದೆಗೆ ತಿದ್ದುಪಡಿ ತಂದ ನಂತರ 21 ರೀತಿಯ ನ್ಯೂನತೆಗಳನ್ನು ಗುರುತಿಸಲಾಗಿದೆ. ವಿಶೇಷಚೇತನರ ವೈಯಕ್ತಿಕ ಮತ್ತು ದೈಹಿಕ ನ್ಯೂನತೆಗಳ ಬಗ್ಗೆ ದತ್ತಾಂಶ ಸಂಗ್ರಹಿಸಲಾಗುತ್ತಿದೆ. ಶೈಕ್ಷಣಿಕ, ಉದ್ಯೋಗ ವಿವರಗಳನ್ನು ಸಹ ಇದು ಒಳಗೊಂಡಿದೆ. ಶೇ.40 ರಷ್ಟು ದೈಹಿಕ ನ್ಯೂನತೆ ಹೊಂದಿರುವವರನ್ನು ವಿಶೇಷಚೇತನರು ಎಂದು ಗುರುತಿಸಲಾಗುತ್ತಿದೆ. 2011 ರ ಜನಗಣತಿ ವರದಿಯಂತೆ, ದೇಶದಲ್ಲಿ ಶೇ.2.21 ರಷ್ಟು ಮಂದಿ ಇಂತಹ ಸಮಸ್ಯೆಗಳನ್ನು ಹೊಂದಿದ್ದಾರೆ. ಇವರಿಗೆ ಸೌಲಭ್ಯಗಳನ್ನು ದೊರಕಿಸಿಕೊಡಲು ವಿಶೇಷ ಒತ್ತು ನೀಡಲಾಗಿದೆ ಎಂದು ತಿಳಿಸಿದರು.

UDID card : Distribution of UDID card to 5.86 lakh differently-abled people of the state – Health Minister Dr. K. Sudhakar

Tags: Dr. K Sudhakarudid card
ShareTweetSendShare
Join us on:

Related Posts

virat-kohli-birthday-special-cheeku-king-kohli-cricket-legend

ಸೋಲಿನ ನೆರಳಿನಲ್ಲೂ ಗೆಲುವಿನ ಚಿತ್ತಾರ ಬಿಡಿಸುವ ಕ್ರಿಕೆಟ್ ಜಗತ್ತಿನ ವಿಶ್ವಕರ್ಮ…!

by admin
November 5, 2026
0

ಅವನು...! ಸೋಲಿನ ನೆರಳಿನಲ್ಲೂ ಗೆಲುವಿನ ಚಿತ್ತಾರ ಬಿಡಿಸುವ ಕ್ರಿಕೆಟ್ ಜಗತ್ತಿನ ವಿಶ್ವಕರ್ಮ... ಯಾಕಂದ್ರೆ ಅವನು..! ಕ್ರಿಕೆಟ್ ಅಭಿಮಾನಿಗಳ ಹೃದಯ ಏರುಪೇರು ಆದಾಗ ಮುಖದಲ್ಲಿ ಸಂಭ್ರಮ ಮೂಡಿಸುವ ಮಹಾದೇವ....

lavancha-root-traditional-remedy-for-mata-mantra-dosha

ಮಾಟ-ಮಂತ್ರ ದೋಷ ಪರಿಹಾರ

by admin
November 5, 2026
0

ನಿಮ್ಮ ಮೇಲೆ ವಾಮಾಚಾರ ಅಥವಾ ಮಾಟ-ಮಂತ್ರದ ಪ್ರಭಾವವಿದೆ ಎಂಬ ಆತಂಕ ನಿಮಗಿದೆಯೇ? ಹಾಗಾದರೆ ಈ ಸರಳ ಸಾಂಪ್ರದಾಯಿಕ ಪರಿಹಾರ ವಿಧಾನದ ಬಗ್ಗೆ ತಿಳಿದುಕೊಳ್ಳಿ. ನೋಡಿ, ಇದು ವಿಶೇಷವಾದ...

ಡಿಜಿಟಲ್ ಜನಗಣತಿಗೆ ಮುಹೂರ್ತ ನಿಗದಿ; ಜ. 10ರಿಂದ ಸ್ವಯಂ ಗಣತಿ ಆರಂಭ, ಜ. 25ರಿಂದ ಮನೆಮನೆಗೆ ಸಮೀಕ್ಷೆ

ಡಿಜಿಟಲ್ ಜನಗಣತಿಗೆ ಮುಹೂರ್ತ ನಿಗದಿ; ಜ. 10ರಿಂದ ಸ್ವಯಂ ಗಣತಿ ಆರಂಭ, ಜ. 25ರಿಂದ ಮನೆಮನೆಗೆ ಸಮೀಕ್ಷೆ

by Shwetha
November 5, 2026
0

2027ರ ಜನಗಣತಿಯ ಜನಸಂಖ್ಯೆ ಗಣತಿ ಪ್ರಕ್ರಿಯೆಗೆ ದಿನಾಂಕ ನಿಗದಿಯಾಗಿದೆ. ಇದೇ ಮೊದಲ ಬಾರಿಗೆ ಡಿಜಿಟಲ್ ವಿಧಾನದಲ್ಲಿ ನಡೆಯಲಿರುವ ಜನಗಣತಿಯಲ್ಲಿ ಸಾರ್ವಜನಿಕರಿಗೆ ಮನೆಯಲ್ಲಿಯೇ ಕುಳಿತು ಆನ್‌ಲೈನ್ ಮೂಲಕ ತಮ್ಮ...

ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಪಾಳಯಕ್ಕೆ ಭಾರೀ ಮುಖಭಂಗ: ಜನರು ಸರ್ವಾಧಿಕಾರಿಗಳನ್ನು ಕಿತ್ತೊಗೆಯುತ್ತಾರೆ ಎಂದು ಪ್ರಧಾನಿ ಮೋದಿಗೆ ಪರೋಕ್ಷ ಎಚ್ಚರಿಕೆ ನೀಡಿದ ಕಾಂಗ್ರೆಸ್ ನಾಯಕಿ

ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಪಾಳಯಕ್ಕೆ ಭಾರೀ ಮುಖಭಂಗ: ಜನರು ಸರ್ವಾಧಿಕಾರಿಗಳನ್ನು ಕಿತ್ತೊಗೆಯುತ್ತಾರೆ ಎಂದು ಪ್ರಧಾನಿ ಮೋದಿಗೆ ಪರೋಕ್ಷ ಎಚ್ಚರಿಕೆ ನೀಡಿದ ಕಾಂಗ್ರೆಸ್ ನಾಯಕಿ

by Shwetha
November 5, 2026
0

ಜಾಗತಿಕ ರಾಜಕೀಯದ ಕೇಂದ್ರಬಿಂದುವಾಗಿರುವ ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷವು ಅಭೂತಪೂರ್ವ ಜಯಭೇರಿ ಬಾರಿಸುವ ಮೂಲಕ ಹೊಸ ಇತಿಹಾಸವನ್ನು ನಿರ್ಮಿಸಿದೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ರಿಪಬ್ಲಿಕನ್...

GBA ಚುನಾವಣೆ ನಡೆಸಲು ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಗಡುವು; ಡಿಸೆಂಬರ್ 31ರೊಳಗೆ 5 ನಗರ ಪಾಲಿಕೆಗಳ ಚುನಾವಣೆ ಪೂರ್ಣಗೊಳಿಸಲು ಸೂಚನೆ

GBA ಚುನಾವಣೆ ನಡೆಸಲು ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಗಡುವು; ಡಿಸೆಂಬರ್ 31ರೊಳಗೆ 5 ನಗರ ಪಾಲಿಕೆಗಳ ಚುನಾವಣೆ ಪೂರ್ಣಗೊಳಿಸಲು ಸೂಚನೆ

by Shwetha
November 5, 2026
0

ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಗಡುವು ನೀಡಿದೆ. 2026ರ ಡಿಸೆಂಬರ್ 31ರೊಳಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram