ADVERTISEMENT
Thursday, June 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Mann Ki Baat : 95 ನೇ ಸಂಚಿಕೆಯಲ್ಲಿ ಪ್ರಧಾನಿ ಹೇಳಿದ ಸಂಕ್ಷಿಪ್ತ ಮಾಹಿತಿ… 

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮನ್ ಕೀ ಬಾತ್ ನ 95ನೇ  ಆವೃತ್ತಿಯ ಕಾರ್ಯಕ್ರಮದಲ್ಲಿ  ತಂತ್ರಜ್ಞಾನದ ಆವಿಷ್ಕಾರ , ಭಾರತೀಯ ಸಂಗೀತ ಸೇರಿದಂತೆ  ಹಲವು ವಿಚಾರಗಳ ಕುರಿತು  ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡರು.

Naveen Kumar B C by Naveen Kumar B C
November 27, 2022
in National, Newsbeat, ದೇಶ - ವಿದೇಶ
mann ki baat modi
Share on FacebookShare on TwitterShare on WhatsappShare on Telegram

man ki baat : 95 ನೇ ಸಂಚಿಕೆಯಲ್ಲಿ ಪ್ರಧಾನಿ ಹೇಳಿದ ಸಂಕ್ಷಿಪ್ತ ಮಾಹಿತಿ…

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮನ್ ಕೀ ಬಾತ್ ನ 95ನೇ  ಆವೃತ್ತಿಯ ಕಾರ್ಯಕ್ರಮದಲ್ಲಿ  ತಂತ್ರಜ್ಞಾನದ ಆವಿಷ್ಕಾರ , ಭಾರತೀಯ ಸಂಗೀತ ಸೇರಿದಂತೆ  ಹಲವು ವಿಚಾರಗಳ ಕುರಿತು  ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡರು.

ಮನ್ ಕಿ ಬಾತ್ ಕಾರ್ಯಕ್ರಮ ಶತಕದತ್ತ ಬಹುವೇಗವಾಗಿ ಸಾಗುತ್ತಿದೆ. 130 ಕೋಟಿ ದೇಶವಾಸಿಗಳೊಂದಿಗೆ ಸಂಪರ್ಕ ಸಾಧಿಸಲು ಮತ್ತೊಂದು ಮಾಧ್ಯಮವಾಗಿದೆ  ಎಂದಿರುವ ಪ್ರಧಾನಿ,  ಸಾರ್ವಜನಿಕ ಸ್ಪರ್ಧೆಯ ಮೂಲಕ  ಜಿ-20 ಲಾಂಛನ ಮತ್ತು ಭಾರತದ ಪ್ರೆಸಿಡೆನ್ಸಿಯ ವೆಬ್ ಸೈಟ್ ಅನ್ನು ಬಿಡುಗಡೆ ಮಾಡಲಾಗಿದೆ.  ಬಹುದೊಡ್ಡ ಶೃಂಗಸಭೆಯನ್ನು ಆಯೋಜಿಸುತ್ತಿರುವುದಕ್ಕೆ ಹಲವು ಮಂದಿ ಸಂತಸ ವ್ಯಕ್ತಪಡಿಸಿದ್ದಾರೆ ಎಂದರು.

ಜಿ-20 ವಿಶ್ವ ಜನಸಂಖ್ಯೆಯಲ್ಲಿ ಮೂರನೇ ಎರಡರಷ್ಟು ಪಾಲನ್ನು ಹೊಂದಿದೆ.

ಡಿಸೆಂಬರ್ ಒಂದರಿಂದ ಭಾರತ, ಜಿ-20 ಶೃಂಗಗಳ ಅಧ್ಯಕ್ಷತೆ ವಹಿಸಲಿದೆ. ಆಜಾದಿ ಕಾ ಅಮೃತ ಮಹೋತ್ಸವದಲ್ಲಿ ಭಾರತಕ್ಕೆ ಈ ಜವಾಬ್ದಾರಿ ದೊರೆತಿರುವುದು ವಿಶಿಷ್ಠವಾಗಿದೆ. ಇದರಿಂದ ಭಾರತಕ್ಕೆ ಉತ್ತಮ ಅವಕಾಶ ದೊರೆತಿದ್ದು,  ಜಾಗತಿಕ ಒಳತಿಗಾಗಿ ವಿಶ್ವ ಕಲ್ಯಾಣದತ್ತ ಗಮನಹರಿಸಬೇಕು ಎಂದರು.

ನವೆಂಬರ್ 18ರಂದು ದೇಶವು ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಇತಿಹಾಸವನ್ನು ನಿರ್ಮಿಸಿರುವುದಕ್ಕೆ ಸಾಕ್ಷಿಯಾಗಿದೆ. ಖಾಸಗಿ ವಲಯದಿಂದ ಸಿದ್ಧಪಡಿಸಲಾದ ಮೊದಲ ರಾಕೆಟ್-ವಿಕ್ರಮ್-ಎಸ್  ಅನ್ನು ಬಾಹ್ಯಾಕಾಶಕ್ಕೆ ಕಳುಹಿಸಿಕೊಟ್ಟಿತು. ಇದು ಹಲವು ವೈಶಿಷ್ಟ್ಯಗಳನ್ನು ಹೊಂದಿರುವ ವಿಕ್ರಮ್ ಎಸ್  ಇತರ ರಾಕೆಟ್ ಗಳಿಗಿಂತ ಹಗುರವಾಗಿದ್ದು, ಬಾಹ್ಯಾಕಾಶ ಕ್ಷೇತ್ರಕ್ಕೆ ಹೊಸ ಯುಗದ ಪ್ರತೀಕದಂತಿದೆ.  ಬಾಹ್ಯಾಕಾಶವನ್ನು ಖಾಸಗಿಯವರಿಗೆ ಮುಕ್ತಗೊಳಿಸಿದ ನಂತರ, ಯುವಕರ ಕನಸುಗಳು ನನಸಾಗುತ್ತಿವೆ. ಭಾರತವು ಬಾಹ್ಯಾಕಾಶ ಕ್ಷೇತ್ರದಲ್ಲಿ ತನ್ನ ಯಶಸ್ಸನ್ನು ನೆರೆಯ ರಾಷ್ಟ್ರಗಳೊಂದಿಗೆ ಹಂಚಿಕೊಳ್ಳುತ್ತಿದೆ ಎಂದು ಹೇಳಿದರು.

ತಂತ್ರಜ್ಞಾನಕ್ಕೆ ಸಂಬಂಧಿಸಿದ ಆವಿಷ್ಕಾರಗಳ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಿ,  ಡ್ರೋಣ್  ಕಾರ್ಯಗಳನ್ನು ಮರೆಯುವುದು ಅಸಾಧ್ಯ. ಡ್ರೋಣ್ ಕ್ಷೇತ್ರದಲ್ಲಿ ಭಾರತ, ವೇಗವಾಗಿ ಮುಂದುವರಿಯುತ್ತಿದ್ದು, ಹಿಮಾಚಲ ಪ್ರದೇಶದಲ್ಲಿ ಕಿನ್ನೌರಿ ಸೇಬುಗಳನ್ನು ಡ್ರೋಣ್ ಮೂಲಕ ಜನರಿಗೆ ತಲುಪಿಸಲಾಗುತ್ತಿದೆ. ಇದರಿಂದ ರೈತರ ಸಾಗಾಣಿಕೆ  ವೆಚ್ಚ ಕಡಿಮೆಯಾಗಿದೆ. ಈ ಹಿಂದೆ ಊಹಿಸಲು ಸಾಧ್ಯವಾಗದಂತಹ ವಿಷಯಗಳಲ್ಲಿ ಸಾಧನೆ ಮಾಡುತ್ತಿದ್ದೇವೆ ಎಂದರು.

ಕಳೆದ 8 ವರ್ಷಗಳಲ್ಲಿ ಸಂಗೀತ ಉಪಕರಣಗಳ ರಫ್ತು ಪ್ರಮಾಣ ಮೂರೂವರೆ ಪಟ್ಟು ಹೆಚ್ಚಾಗಿದೆ. ಪ್ರಪಂಚದಾದ್ಯಂತ ಭಾರತೀಯ ಸಂಸ್ಕೃತಿ ಮತ್ತು ಸಂಗೀತದ ವ್ಯಾಮೋಹ ಹೆಚ್ಚಾಗುತ್ತಿದೆ. ಭಾರತವು ಸಂಗೀತ, ನೃತ್ಯ ಮತ್ತು ಶ್ರೀಮಂತ ಕಲೆಯ ಪರಂಪರೆಯನ್ನು ಹೊಂದಿರುವುದು ನಮ್ಮೆಲ್ಲರ ಸೌಭಾಗ್ಯವಾಗಿದೆ. ದೇಶಾದ್ಯಂತ ಬುಡಕಟ್ಟು ಜನಾಂಗದ ಆದಿವಾಸಿಗಳು ವಿಭಿನ್ನ ಸಂಗೀತ ಪರಂಪರೆಯನ್ನು ಹೊಂದಿದ್ದಾರೆ. ಪರಸ್ಪರ ಸಹಕಾರ ಮತ್ತು ಸಾಮರಸ್ಯದಿಂದ ಪ್ರಕೃತಿಯೊಂದಿಗೆ ಜೀವನ ನಡೆಸುವ ಪ್ರೇರಣೆಯನ್ನು ಸಂಗೀತ ನೀಡುತ್ತದೆ. ಭಾರತೀಯ ಸಂಗೀತದ ಖ್ಯಾತಿಯು ವಿಶ್ವದ ಮೂಲೆಮೂಲೆಗೂ ವ್ಯಾಪಿಸಿದೆ ಎಂದು ತಿಳಿಸಿದರು.

Mann Ki Baat: PM Modi says India’s G20 Presidency is a big opportunity to focus on Global Good,

Related posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಮೇಲ್ಮನೆ ಕದನ…ಸೋಲು ಗೆಲುವಿನ ಲೆಕ್ಕಾಚಾರ..!

June 18, 2026
10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

June 18, 2026
Tags: Mann Ki Baat
ShareTweetSendShare
Join us on:

Related Posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಮೇಲ್ಮನೆ ಕದನ…ಸೋಲು ಗೆಲುವಿನ ಲೆಕ್ಕಾಚಾರ..!

by admin
June 18, 2026
0

ಕರ್ನಾಟಕ ವಿಧಾನಪರಿಷತ್ ಚುನಾವಣೆಯಲ್ಲಿ ಏಳು ಸ್ಥಾನಗಳಿಗೆ ಎಂಟು ಅಭ್ಯರ್ಥಿಗಳು ಕಣಕ್ಕಿಳಿದಿರುವುದರಿಂದ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿದೆ. ಕಾಂಗ್ರೆಸ್ ಐದು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಬಿಜೆಪಿ-ಜೆಡಿಎಸ್ ಮೈತ್ರಿ ಮೂರು...

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

by Shwetha
June 18, 2026
0

ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಇನ್ನು ಮುಂದೆ ಸಮಯ ಪಾಲನೆ ಮತ್ತು ಶಿಸ್ತಿನ ಪರ್ವ ಆರಂಭವಾಗಲಿದೆ. ನೌಕರರು ಕಚೇರಿಗೆ ಬಾರದೆ ಅಥವಾ ತಡವಾಗಿ ಬಂದು ಹಾಜರಾತಿ ದಾಖಲಿಸುವ ಹಳೆಯ...

5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

by Shwetha
June 18, 2026
0

ದೇಶದ ಐದು ಪ್ರಮುಖ ರಾಜ್ಯಗಳಾದ ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಹಾಗೂ ಗೋವಾ ರಾಜ್ಯಗಳ ವಿಧಾನಸಭಾ ಚುನಾವಣೆಗಳು ಅವಧಿಗೆ ಮುನ್ನ ನಡೆಯಲಿವೆ ಎಂಬ ಊಹಾಪೋಹಗಳಿಗೆ ಕೇಂದ್ರ...

₹25,400 ಕೋಟಿ ಒಪ್ಪಂದ; ಪಿಜ್ಜಾ ಹಟ್ ವ್ಯವಹಾರ ಮಾರಾಟಕ್ಕೆ ನಿರ್ಧಾರ

₹25,400 ಕೋಟಿ ಒಪ್ಪಂದ; ಪಿಜ್ಜಾ ಹಟ್ ವ್ಯವಹಾರ ಮಾರಾಟಕ್ಕೆ ನಿರ್ಧಾರ

by Shwetha
June 18, 2026
0

ಜಾಗತಿಕ ಆಹಾರ ಉದ್ಯಮದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಯಮ್.ಕಾಮ್ ತನ್ನ ಅಧೀನದಲ್ಲಿರುವ ಪ್ರಸಿದ್ಧ ಪಿಜ್ಜಾ ಹಟ್ ವ್ಯವಹಾರದ ಕೆಲವು ಭಾಗಗಳನ್ನು ಎರಡು ಪ್ರತ್ಯೇಕ ಒಪ್ಪಂದಗಳ ಮೂಲಕ ಒಟ್ಟು...

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

by Shwetha
June 18, 2026
0

ಬೆಂಗಳೂರು: ಬಿಡದಿ ಟೌನ್‌ಶಿಪ್‌ ಯೋಜನೆಯ ಹೆಸರಿನಲ್ಲಿ ಸಾವಿರಾರು ಎಕರೆ ಫಲವತ್ತಾದ ಭೂಮಿ ಮತ್ತು ಲಕ್ಷಾಂತರ ಮರಗಳನ್ನು ನಾಶಪಡಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ಪ್ರತಿಪಕ್ಷ ನಾಯಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram