ಬೆಂಗಳೂರು : ವಿಶ್ವವನ್ನೇ ತಲ್ಲಣಗೊಳಿಸಿರುವ ಕೊರೊನಾ ವೈರಸ್ ಜೊತೆ ಇದೀಗ ನಾವು ನೀವು ಜೀವನ ಸಾಗಿಸುತ್ತಿದ್ದೇವೆ. ಹೀಗಾಗಿ ಜನರು ಆರೋಗ್ಯದ ಹಿತದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮಗಳು ತೆಗೆದುಕೊಳ್ಳಬೇಕೆಂದು ಸರ್ಕಾರ ಸಲಹೆ ನೀಡುತ್ತಿದೆ. ಜನರೂ ಕೂಡ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಆದ್ರೆ ಯುವತಿ ಮಾರುಕಟ್ಟೆಯಿಂದ ತಂದ ಕೊತ್ತಂಬರಿ ಸೊಪ್ಪನ್ನು ಸಾಬೂನಿನಿಂದ ತೊಳೆದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಲಾಕ್ ಡೌನ್ ಸಡಿಲಿಕೆ ಮಾಡಿರುವ ಸರ್ಕಾರ, ಕೊರೊನಾ ಜೊತೆಗೆ ಜೀವನ ಸಾಗಿಸುವುದನ್ನ ಜನರು ಕಲಿಯಬೇಕು. ಮನೆಗೆ ತಂದ ತರಕಾರಿ, ಹಣ್ಣುಗಳನ್ನು ಉಪ್ಪಿನ ನೀರಿನಲ್ಲಿ ಅಥವಾ ಬಿಸಿ ನೀರಿನಲ್ಲಿ ತೊಳೆಯಬೇಕು. ಹೊರಗಿನಿಂದ ಮನೆಗೆ ಬರೋ ಮುನ್ನ ಸ್ಯಾನಿಟೈಸ್ ಬಳಕೆ ಮಾಡಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ನಿರ್ದೇಶನ ನೀಡಿದೆ. ಅದರಂತೆ ಈ ಯುವತಿ ಮನೆಗೆ ತಂದ ಕೊತ್ತಂಬರಿ ಸೊಪ್ಪನ್ನು ಚೆನ್ನಾಗಿ ತೊಳೆದಿದ್ದಾಳೆ. ಇದನ್ನ ಟಿಕ್ ಟಾಕ್ ನಲ್ಲಿ ವಿಡಿಯೋ ಮಾಡಿ ಅಪ್ಲೋಡ್ ಮಾಡಿದ್ದಾಳೆ.
ಇನ್ನು ಈ ವಿಡಿಯೋ ಟಿಕ್ ಟಾಕ್ ನಲ್ಲಿ ಭಾರಿ ಸದ್ದು ಮಾಡುತ್ತಿದ್ದು,4.6 ಕೋಟಿ ಗೂ ಅಧಿಕ ವ್ಯೂವ್ ಪಡೆದುಕೊಂಡಿದೆ. ಐದು ಸಾವಿರಕ್ಕೂ ಹೆಚ್ಚು ಕಮೆಂಟ್ ಗಳು ಬಂದಿವೆ.








