Maharashtra
ಇಂದಿನ ಮಕ್ಕಲ ಯೋಚನೆಗಳೂ ಎತ್ತ ಸಾಗುತ್ತಿದೆ ಎಂದು ಯೋಚಿಸುವ ಪರೀ ಎಷ್ಟು ಕೃರವಾಗಿವೆ ಎಂದು ಊಹೇಯನ್ನು ಸಹ ಮಾಡಲಾಗುವುದಿಲ್ಲ ಎನ್ನುವುದಕ್ಕೆ ಈಗ ನಡೆದಿರುವ ಘಟನೆಯೇ ಸಾಕ್ಷಿಯಾಗಿದೆ
ಈ ಭೀಕರ ಘಟನೆಯು ಮಹಾರಾಷ್ಟ್ರದ ಕಲ್ಯಾಣ್‌ನಲ್ಲಿ ನಡೆದಿದೆ. ಹೌದು
15 ವರ್ಷದ ಬಾಲಕನೊಬ್ಬ 9 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆಗೈದಿರುವ ಎದೇ ಝಲ್ ಎನ್ನಿಸುವಂತ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಕಲ್ಯಾಣ್ ರೈಲ್ವೇ ನಿಲ್ದಾಣದ ಬಳಿಯ ಕಲ್ಯಾಣಿ ಪಶ್ಚಿಮ ಪ್ರದೇಶದ ವಸತಿ ಪ್ರದೇಶದಲ್ಲಿ ನಡೆದಿದೆ.
ಈ ಹತ್ಯೆಯ ಕಾರಣದತ್ತ ಗಮನ ಹರಿಸುವುದಾದರೆ ಅಪ್ರಾಪ್ತ ಹುಡುಗನು 2 ದಿನಗಳ ಹಿಂದೆ ಆತ ಬಾಲಕಿಯ ತಂದೆಯೊಂದಿಗೆ ಜಗಳವಾಡಿದ್ದ. ಈ ಸಂದರ್ಬದಲ್ಲಿ ಹಲ್ಲೆಗೆ ಒಳಗಾಗಿದ್ದನ್ನು ಈ ಸಂದರ್ಭದಲ್ಲಿ ಪ್ರತಿಕಾರ ತೀರಿಸಿಕೊಳ್ಳಲು ಬಾಲಕ ಅವನ ಅಪ್ರಾಪ್ತ ಮಗಳನ್ನು ಅಪಹರಿಸಿ, ಅತ್ಯಾಚಾರ ಮಾಡಿ ಬ್ಲೇಡ್‌ನಿಂದ ಕತ್ತು ಸೀಳಿದ್ದಾನೆ. ಇದಾದ ಬಳಿಕ ರೈಲ್ವೇ ನಿಲ್ದಾಣದ ಬಳಿಯ ಕಲ್ಯಾಣಿ ಪಶ್ಚಿಮ ಪ್ರದೇಶದ ವಸತಿ ಪ್ರದೇಶದ ಪ್ರದೇಶದಲ್ಲಿ 9 ವರ್ಷದ ಬಾಲಕಿಯ ಶವ ಪತ್ತೆಯಾಗಿತ್ತು.
ಈ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿಗಳ ಪರೀಶಿಲನೆ ವೇಳೆ ಅಪ್ರಾಪ್ತ ಬಾಲಕ ಆರೋಪಿಯನ್ನು ಪೊಲೀಸರು ಗುರುತಿಸಿದ್ದಾರೆ. ಬಾಲಕನ ಕುರಿತು ವಿಚಾರಿಸಿದಾಗ ವಿಷಯ ತಿಳಿದು ಬಂದಿದೆ.
ಪ್ರಕರಣವನ್ನು ಮಹಾತ್ಮ ಫುಲೆ ಪೊಲೀಸ್ ಠಾಣೆ ಯಲ್ಲಿ ಧಾಖಲಾಗಿದ್ದು ಯುವಕನನ್ನು ಪೋಲಿಸರು ವಶಪಡಿಸಿಕೊಂಡಿದ್ದಾರೆ.
ಈ ಪ್ರಕರಣವು IPC ಸೆಕ್ಷನ್ ಅಡಿಯಲ್ಲಿ POCSO ಅಡಿಯಲ್ಲಿ ಧಾಖಲಾಗಿದೆ .








