ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಅಧ್ಯಕ್ಷ ಸ್ಥಾನ ವಹಿಸಲಿದೆ ಭಾರತ….
ಭಾರತವು ಡಿಸೆಂಬರ್ ತಿಂಗಳಲ್ಲಿ ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳಲಿದೆ. ಎರಡು ವರ್ಷಗಳಲ್ಲಿ ಭಾರತವು ಎರಡನೇ ಬಾರಿ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುತ್ತಿದೆ. ಈ ಹಿಂದೆ ಆಗಸ್ಟ್ 2021 ರಲ್ಲಿ ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯ (UNSC) ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಿತ್ತು.
ನ್ಯೂಯಾರ್ಕ್‌ನಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ರುಚಿರಾ ಕಾಂಬೋಜ್, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಡಿಸೆಂಬರ್ 14 ಮತ್ತು15 ರಂದು ಸುಧಾರಿತ ಬಹುಪಕ್ಷೀಯತೆ ಮತ್ತು ಭಯೋತ್ಪಾದನೆ ನಿಗ್ರಹ ಕುರಿತು ಉನ್ನತ ಮಟ್ಟದ ಎರಡು ಒಪ್ಪಂದಗಳ ಕಾರ್ಯಕ್ರಮ ನಡೆಯಲಿದ್ದು, ಇದರ ಅಧ್ಯಕ್ಷತೆಯನ್ನು ವಿದೇಶಾಂಗ ಸಚಿವರು ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿ ಅವರ ಪುತ್ಥಳಿಯನ್ನು ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಉದ್ಘಾಟಿಸಲಿದ್ದು, ವಿದೇಶಾಂಗ ಸಚಿವ ಡಾ.ಎಸ್ ಜೈಶಂಕರ್ ಮತ್ತು ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯ ಪ್ರಧಾನ ಕಾರ್ಯದರ್ಶಿ ಆಂಟೋನಿಯಾ ಗುಟೆರೆಸ್ ಅವರು ಅನಾವರಣಗೊಳಿಸಲಿದ್ದಾರೆ.
UN Security Council India has assumed the presidency of the United Nations Security Council.








