ADVERTISEMENT
Thursday, March 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೋವಿಡ್-19: ಭಾರತ – ಶ್ರೀಲಂಕಾ ನಡುವಿನ ಏಕದಿನ ಸರಣಿ ಅಸಾಧ್ಯ

admin by admin
June 12, 2020
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಕೋವಿಡ್-19: ಭಾರತ – ಶ್ರೀಲಂಕಾ ನಡುವಿನ ಏಕದಿನ ಸರಣಿ ಅಸಾಧ್ಯ

ಎಲ್ಲವೂ ಅಂದುಕೊಂಡಂತೆ ನಡೆಯುತ್ತಿದ್ರೆ ಇಷ್ಟು ಹೊತ್ತಿಗೆ ಟೀಮ್ ಇಂಡಿಯಾ ಮತ್ತು ಶ್ರೀಲಂಕಾ ತಂಡಗಳು ಅಭ್ಯಾಸದಲ್ಲಿ ನಿರತವಾಗಬೇಕಿದ್ದವು. ಆದ್ರೆ ಕೊರೋವಾ ಮಹಾಮಾರಿ ಎಲ್ಲದಕ್ಕೂ ಬ್ರೇಕ್ ಹಾಕಿದೆ. ಹೀಗಾಗಿ ಜೂನ್ ಮತ್ತು ಜುಲೈ ತಿಂಗಳಿನಲ್ಲಿ ನಡೆಯಬೇಕಿದ್ದ ಭಾರತ ಮತ್ತು ಶ್ರೀಲಂಕಾ ನಡುವಿನ ಏಕದಿನ ಹಾಗೂ ಟಿ-ಟ್ವೆಂಟಿ ಸರಣಿಗಳನ್ನು ಸ್ಥಗಿತಗೊಳಿಸಲಾಗಿದೆ.
ಬಿಸಿಸಿಐ ಮತ್ತು ಶ್ರೀಲಂಕಾ ಕ್ರಿಕೆಟ್ ಮಂಡಳಿಗಳು ಪರಸ್ಪರ ಚರ್ಚಿಸಿ ಈ ತೀರ್ಮಾನ ತೆಗೆದುಕೊಂಡಿದೆ. ಜೂನ್ ಕೊನೆಯ ವಾರದಿಂದ ಜುಲೈ ತನಕ ಮೂರು ಏಕದಿನ ಮತ್ತು ಮೂರು ಟಿ-ಟ್ವೆಂಟಿ ಪಂದ್ಯಗಳನ್ನು ನಿಗದಿಮಾಡಲಾಗಿತ್ತು. ಆದ್ರೆ ದಿನಾಂಕವನ್ನು ನಿಗದಿ ಮಾಡಿರಲಿಲ್ಲ.
ಇಂತಹ ಪರಿಸ್ಥಿತಿಯಲ್ಲಿ ಶ್ರೀಲಂಕಾ ಪ್ರವಾಸ ಮಾಡಲು ಸಾಧ್ಯವಿಲ್ಲ. ಹಾಗೂ ಟೂರ್ನಿಗಳನ್ನು ಆಡುವುದು ಕೂಡ ಅಸಾಧ್ಯ. ಈ ಬಗ್ಗೆ ನಾವು ಶ್ರೀಲಂಕಾ ಕ್ರಿಕೆಟ್ ಮಂಡಳಿಯ ಜೊತೆ ಚರ್ಚಿಸಿದ್ದೇವೆ. ಮುಂಬರುವ ದಿನಗಳಲ್ಲಿ ಈ ಸರಣಿ ನಡೆಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿದ್ದೇವೆ ಎಂದು ಬಿಸಿಸಿಐ ಕೋಶಾಧಿಕಾರಿ ಅರುಣ್ ಧೂಮಲ್ ಹೇಳಿದ್ದಾರೆ.
ಈ ಸರಣಿ ರದ್ದುಗೊಳ್ಳುವುದು ಖಚಿತವಾಗಿತ್ತು. ಯಾಕಂದ್ರೆ ಟೀಮ್ ಇಂಡಿಯಾ ಆಟಗಾರರು ಇನ್ನೂ ಕೂಡ ತರಬೇತಿ ಶಿಬಿರದಲ್ಲಿ ಭಾಗಿಯಾಗಲು ಸಾಧ್ಯವಾಗುತ್ತಿಲ್ಲ. ಭಾರತದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ. ಈಗಾಗಲೇ ಸುಮಾರು ಎಂಟು ಸಾವಿರ ಮಂದಿ ಸಾವಿಗಿಡಾಗಿದ್ದಾರೆ.
ಆಟಗಾರರು ಮತ್ತೆ ಮೈದಾನದಲ್ಲಿ ಕಾಣಿಸಿಕೊಳ್ಳಬೇಕಾದ್ರೆ ಕನಿಷ್ಠ ನಾಲ್ಕರಿಂದ ಆರು ವಾರಗಳ ತನಕ ಅಭ್ಯಾಸ ನಡೆಸಬೇಕಾಗಿದೆ. ಕಳೆದ ಎರಡೂವರೆ ತಿಂಗಳುಗಳಿಂದ ಕ್ರಿಕೆಟಿಗರು ಮನೆಯಲ್ಲೇ ಇದ್ದಾರೆ. ಅದೂ ಅಲ್ಲದೆ ಅಂತಾರಾಷ್ಟ್ರೀಯ ಪ್ರವಾಸಕ್ಕೆ ಅನುಮತಿ ಸಿಗುತ್ತೆ ಅನ್ನೋದನ್ನು ಈಗಲೇ ಹೇಳಲು ಸಾಧ್ಯವಿಲ್ಲ. ಹೀಗಾಗಿ ಜೂನ್ ಮತ್ತು ಜುಲೈನಲ್ಲಿ ಶ್ರೀಲಂಕಾ ಪ್ರವಾಸ ನಡೆಸುವುದು ಅಸಾಧ್ಯ ಅಂತ ಅರುಣ್ ಧೂಮಾಲ್ ಹೇಳಿದ್ದಾರೆ.
ಈ ಬಗ್ಗೆ ಶ್ರೀಲಂಕಾ ಕ್ರಿಕೆಟ್ ಮಂಡಳಿ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ಕೊರೋನಾ ವೈರಸ್ ನಿಂದಾಗಿ ಶ್ರೀಲಂಕಾ ಪ್ರವಾಸ ಮಾಡಲು ಸಾಧ್ಯವಿಲ್ಲ ಎಂದು ಬಿಸಿಸಿಐ ತಿಳಿಸಿದೆ. ಹಾಗೇ ಸರಣಿ ನಡೆಸುವ ಬಗ್ಗೆ ಮುಂದಿನ ದಿನಗಳ ವೇಳಾಪಟ್ಟಿಯನ್ನು ನೋಡಿಕೊಂಡು ನಿರ್ಧಾರ ಮಾಡಲಾಗುವುದು ಎಂದು ಭರವಸೆ ನೀಡಿದೆ. ಕ್ರಿಕೆಟ್‍ಗೆ ಸಂಬಂಧಪಟ್ಟಂತೆ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾದ್ರೂ ಭಾರತ ಸರ್ಕಾರದ ಮಾರ್ಗದರ್ಶನ ಬೇಕಿದೆ ಎಂದು ಬಿಸಿಸಿಐ ಶ್ರೀಲಂಕಾ ಕ್ರಿಕೆಟ್ ಮಂಡಳಿಗೆ ತಿಳಿಸಿದೆ.
ಈಗಾಗಲೇ ಭಾರತದಲ್ಲಿ ಐಪಿಎಲ್ ಟೂರ್ನಿ ಮುಂದೂಡಲಾಗಿದೆ. ಹಾಗೇ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯೂ ಸ್ಥಗಿತಗೊಂಡಿದೆ. ಈ ಹಿಂದೆ ನಿಗದಿಯಾದಂತೆ ಮಾರ್ಚ್‍ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಸರಣಿ ಆಡಬೇಕಿತ್ತು. ಜೊತೆಗೆ ಐಪಿಎಲ್ ಟೂರ್ನಿಯನ್ನು ಆಡಬೇಕಿತ್ತು. ಒಟ್ಟಾರೆ ಕೋವಿಡ್-19ನಿಂದಾಗಿ ಭಾರತದ ಎರಡು ಸರಣಿಗಳು ಮೊಟಕುಗೊಂಡಿವೆ.

Related posts

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

March 12, 2026
ಗ್ರೇಟರ್ ಬೆಂಗಳೂರು ಆಡಳಿತದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು:  ಸಂಬಳ ನೀಡದಿದ್ದರೆ ಪಶ್ಚಿಮ ವಲಯ ಸಂಪೂರ್ಣ ಬಂದ್ ಎಚ್ಚರಿಕೆ

ಗ್ರೇಟರ್ ಬೆಂಗಳೂರು ಆಡಳಿತದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು: ಸಂಬಳ ನೀಡದಿದ್ದರೆ ಪಶ್ಚಿಮ ವಲಯ ಸಂಪೂರ್ಣ ಬಂದ್ ಎಚ್ಚರಿಕೆ

March 12, 2026
ShareTweetSendShare
Join us on:

Related Posts

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

by Shwetha
March 12, 2026
0

ಬೆಂಗಳೂರು ನಗರದಲ್ಲಿನ ಹೋಟೆಲ್‌ಗಳಲ್ಲಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ಕೆಲವು ತಿಂಡಿಗಳನ್ನು ತಾತ್ಕಾಲಿಕವಾಗಿ ತಯಾರಿಸದಂತೆ ಹೋಟೆಲ್ ಮಾಲೀಕರು ನಿರ್ಧರಿಸಿದ್ದಾರೆ. ವಿಶೇಷವಾಗಿ ಹೆಚ್ಚು...

ಗ್ರೇಟರ್ ಬೆಂಗಳೂರು ಆಡಳಿತದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು:  ಸಂಬಳ ನೀಡದಿದ್ದರೆ ಪಶ್ಚಿಮ ವಲಯ ಸಂಪೂರ್ಣ ಬಂದ್ ಎಚ್ಚರಿಕೆ

ಗ್ರೇಟರ್ ಬೆಂಗಳೂರು ಆಡಳಿತದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು: ಸಂಬಳ ನೀಡದಿದ್ದರೆ ಪಶ್ಚಿಮ ವಲಯ ಸಂಪೂರ್ಣ ಬಂದ್ ಎಚ್ಚರಿಕೆ

by Shwetha
March 12, 2026
0

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ವಿಭಜಿಸಿ ಬಹುನಿರೀಕ್ಷಿತ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ರಚನೆಯಾದ ಕೇವಲ ಆರು ತಿಂಗಳಲ್ಲೇ ಆಡಳಿತಾತ್ಮಕ ಮತ್ತು ಆರ್ಥಿಕ ವ್ಯವಸ್ಥೆ ಸಂಪೂರ್ಣ...

ದೇವೇಗೌಡರ ಶ್ರಮದಿಂದ ಅಧಿಕಾರ ಉಂಡು ದ್ರೋಹ ಬಗೆದ್ರಿ:ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಆಕ್ರೋಶ

​ಕುರಿ ಲೆಕ್ಕ ಹಾಕಲು ಬರಲ್ಲ ಎಂದವರಿಗೆ 17 ಬಜೆಟ್ ಮಂಡಿಸುವ ಅವಕಾಶ ಸಿಕ್ಕಿದ್ದು ಹೇಗೆ :ಅರ್ಥಶಾಸ್ತ್ರ ಓದಿಲ್ಲ ಎಂದರೂ ಕೇಳದೆ ಹಣಕಾಸು ಖಾತೆ ಕೊಟ್ಟಿದ್ದ ದೇವೇಗೌಡ್ರು ಅಂದಿನ ಸತ್ಯ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

by Shwetha
March 12, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಇತಿಹಾಸದಲ್ಲಿಯೇ ಅತಿ ಹೆಚ್ಚು, ಅಂದರೆ 17 ಬಾರಿ ಬಜೆಟ್ ಮಂಡಿಸಿ ಹೊಸ ದಾಖಲೆ ಬರೆದಿದ್ದಾರೆ. ಆದರೆ, ಆರಂಭದಲ್ಲಿ ಅವರಿಗೆ ಹಣಕಾಸು ಖಾತೆಯ...

ಜಾಗತಿಕ ಮಹಾಯುದ್ಧದ ಎಚ್ಚರಿಕೆ ಘಂಟೆ: ಇರಾನ್ ಬೆಂಬಲಕ್ಕೆ ನಿಂತು ಅಮೆರಿಕದ ಎದೆನಡುಗಿಸಿದ ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್

ಜಾಗತಿಕ ಮಹಾಯುದ್ಧದ ಎಚ್ಚರಿಕೆ ಘಂಟೆ: ಇರಾನ್ ಬೆಂಬಲಕ್ಕೆ ನಿಂತು ಅಮೆರಿಕದ ಎದೆನಡುಗಿಸಿದ ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್

by Shwetha
March 12, 2026
0

ಇರಾನ್‌ನ ನೂತನ ಪರಮೋಚ್ಚ ನಾಯಕ ಮುಜ್ತಬಾ ಖಮೇನಿ ಅವರಿಗೆ ಬೆಂಬಲ ಸೂಚಿಸುವ ಮೂಲಕ ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಜಾಗತಿಕ ರಾಜಕಾರಣದಲ್ಲಿ ಹೊಸ ಹಾಗೂ...

ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಕ್ಷಮೆಯಾಚಿಸದಿದ್ದರೆ ತಕ್ಕ ಪಾಠ: ಮುಸ್ಲಿಂ ಮತ್ತು ಅಹಿಂದ ನಾಯಕರಿಂದ  ಎಚ್ಚರಿಕೆ

ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಕ್ಷಮೆಯಾಚಿಸದಿದ್ದರೆ ತಕ್ಕ ಪಾಠ: ಮುಸ್ಲಿಂ ಮತ್ತು ಅಹಿಂದ ನಾಯಕರಿಂದ ಎಚ್ಚರಿಕೆ

by Shwetha
March 12, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ವಿಚಾರವಾಗಿ ಕಾಂಗ್ರೆಸ್ ಪಕ್ಷದೊಳಗೆ ನಡೆಯುತ್ತಿರುವ ಆಂತರಿಕ ಭಿನ್ನಮತ ಈಗ ಬೀದಿಗೆ ಬಂದಿದೆ. ವಸತಿ ಸಚಿವ ಬಿ. ಝಡ್. ಜಮೀರ್ ಅಹ್ಮದ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram