ADVERTISEMENT
Saturday, September 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Siddaramaiah : ಸಿದ್ರಾಮುಲ್ಲಾಖಾನ್  ಬಿಜೆಪಿಯ ಚಾರಿತ್ರ್ಯಹನನದ ರಾಜಕೀಯ ಸರಕು  – ಸಿದ್ದರಾಮಯ್ಯ…  

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರನ್ನ  ಸಿದ್ರಾಮುಲ್ಲಾಖಾನ್  ಎಂದು   ಹೆಸರು ಬದಲಿಸಿ ಕರೆದ  ಬಿಜೆಪಿ ಕರ್ನಾಟಕದ  ಮಾತಿಗೆ  ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ. 

Naveen Kumar B C by Naveen Kumar B C
December 7, 2022
in Newsbeat, Politics, ರಾಜಕೀಯ
siddaramaih

file photo

Share on FacebookShare on TwitterShare on WhatsappShare on Telegram

Siddaramaiah: ಸಿದ್ರಾಮುಲ್ಲಾಖಾನ್  ಬಿಜೆಪಿಯ ಚಾರಿತ್ರ್ಯಹನನದ ರಾಜಕೀಯ ಸರಕು  – ಸಿದ್ದರಾಮಯ್ಯ…

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರನ್ನ  ಸಿದ್ರಾಮುಲ್ಲಾಖಾನ್  ಎಂದು   ಹೆಸರು ಬದಲಿಸಿ ಕರೆದ  ಬಿಜೆಪಿ ಕರ್ನಾಟಕದ  ಮಾತಿಗೆ  ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ.

ಸಿದ್ದರಾಮಯ್ಯ ಟ್ವೀಟ್ ಮಾಡಿ “ಸುಳ್ಳು, ಅಪಪ್ರಚಾರ ಮತ್ತು ಚಾರಿತ್ರ್ಯಹನನವನ್ನೇ ರಾಜಕೀಯ ಪ್ರಚಾರದ ಸರಕನ್ನಾಗಿ ಮಾಡಿಕೊಂಡ ಬಿಜೆಪಿ ಕರ್ನಾಟಕ ನನ್ನ ಹೆಸರಿಗೆ ಮುಸ್ಲಿಂ ಹೆಸರು ಸೇರಿಸಿ ನಡೆಸುತ್ತಿರುವ ಅಪಪ್ರಚಾರದಲ್ಲಿ ಅಚ್ಚರಿಪಡುವಂತಹದ್ದೇನಿಲ್ಲ.

ಶೂನ್ಯ ಸಾಧನೆ, ಭ್ರಷ್ಟಾಚಾರ, ಅನಾಚಾರಗಳ ಮಸಿ ಬಳಿದುಕೊಂಡ ಮುಖ ತೋರಿಸಿ ಮತಯಾಚನೆ ಮಾಡಲಿಕ್ಕಾಗುತ್ತದೆಯೇ? ಮೈತುಂಬ ಕಪ್ಪು ಬಳಿದುಕೊಂಡ ದುಷ್ಟರಿಗೆ ಬಿಳಿಬಟ್ಟೆ ನೋಡಿದಾಕ್ಷಣ ಕಪ್ಪು ಬಳಿಯೋಣ ಎಂದು ಮನಸ್ಸಾಗುವುದು ಸಹಜ ಗುಣ. ಇದು ಅವರ ಸೋಲು, ಹತಾಶೆ ಮತ್ತು ಅಸಹಾಯಕತೆಯನ್ನು ಸೂಚಿಸುತ್ತದೆ. ಒಂದು ಕಾಲದಲ್ಲಿ ಒಂದಷ್ಟು ಸಭ್ಯಸ್ಥರು ಇದ್ದ ಬಿಜೆಪಿ ಕರ್ನಾಟಕ ಇಂತಹ ನೈತಿಕ ಅಧ:ಪತನಕ್ಕೆ ಬಿದ್ದಿರುವುದರ ಬಗ್ಗೆ ಎಲ್ಲರೂ ಸಂತಾಪ ಸೂಚಿಸೋಣ.

ಸಿದ್ರಮುಲ್ಲಾಖಾನ್ ಎಂದು ನನ್ನ ಹೆಸರಿಗೆ ಮುಸ್ಲಿಂ ಹೆಸರು ಸೇರಿಸಿರುವ ಬಗ್ಗೆ ನನಗೇನು ಬೇಸರವಿಲ್ಲ. ಗೋವಿಂದ ಭಟ್ಟರ ಶಿಷ್ಯರಾದ ಶಿಶುನಾಳ ಷರೀಪ್, ಸಂತ ರಮಾನಂದರ ಶಿಷ್ಯರಾದ ಕವಿ ಕಬೀರರ ಪರಂಪರೆ ನಮ್ಮದು. ಆದ್ದರಿಂದ ಮುಸ್ಲಿಂ ಹೆಸರನ್ನು ನನ್ನ ಹೆಸರಿಗೆ ಜೋಡಿಸಿ ಜಾತ್ಯತೀತತೆಯ ನನ್ನ ನಂಬಿಕೆಯನ್ನು ಪುರಸ್ಕರಿಸಿದ್ದಾರೆ.

ಮುಖ್ಯಮಂತ್ರಿಯಾಗಿ ಜನರಿಗಾಗಿ ಮಾಡಿರುವ ಸೇವೆಯನ್ನು ಗುರುತಿಸಿ ಬಹಳಷ್ಟು ಜನ ನನ್ನನ್ನು ‘ಅನ್ನರಾಮಯ್ಯ’, ರೈತರಾಮಯ್ಯ, ಕನ್ನಡ ರಾಮಯ್ಯ, ದಲಿತರಾಮಯ್ಯ ಎಂದೆಲ್ಲಾ ಕರೆಯುತ್ತಾರೆ. ಅದೇ ರೀತಿ ಮುಸ್ಲಿಂ ಸಮುದಾಯಕ್ಕೆ ಮಾಡಿರುವ ಕೆಲಸವನ್ನು ಗುರುತಿಸಿ ನನ್ನನ್ನು ‘ಸಿದ್ರಮುಲ್ಲಾ ಖಾನ್’ ಎಂದು ಕರೆದರೆ ಅದಕ್ಕೂ ಖುಷಿಪಡುವೆ.

ಹಿಂದೂ ಕೋಮುವಾದದಷ್ಟೇ ಸ್ಪಷ್ಟತೆ ಮತ್ತು ಬದ್ಧತೆಯಿಂದ ನಾನು ಮುಸ್ಲಿಂ ಮತ್ತಿತರ ಧರ್ಮಗಳ ಕೋಮುವಾದವನ್ನೂ ವಿರೋಧಿಸುತ್ತಾ ಬಂದಿದ್ದೇನೆ.  ಬಿಜೆಪಿ ಕರ್ನಾಟಕ  ರೀತಿಯಲ್ಲಿ ರಾಜಕೀಯ ಕಾರಣಕ್ಕಾಗಿ ಒಳ್ಳೆಯವರು-ಕೆಟ್ಟವರು ಎಂಬ ಭೇದವಿಲ್ಲದೆ ಸಾರಾಸಗಟಾಗಿ ಮುಸ್ಲಿಮರನ್ನು ಗುರಿಯಾಗಿಟ್ಟುಕೊಂಡ ಕೋಮುವಾದದ ರಾಜಕೀಯವನ್ನು ನಾನು ಮಾಡಿದವನಲ್ಲ.

ಮುಸ್ಲಿಂ ಬಂಧುಗಳ ಮೂಲಭೂತ ಅವಶ್ಯಕತೆಗಳಾದ ಭದ್ರತೆ, ಶಿಕ್ಷಣ, ಆರೋಗ್ಯ, ಉದ್ಯೋಗಳನ್ನು ಒದಗಿಸಲು ಮುಂಗಡಪತ್ರದಲ್ಲಿ ನ್ಯಾಯಬದ್ಧವಾದ ಪಾಲನ್ನು ಎತ್ತಿಟ್ಟು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದಿದ್ದೇನೆ. ಈ ಬಗ್ಗೆ ನನಗೆ ಹೆಮ್ಮೆಯೂ ಇದೆ, ಅಭಿಮಾನವೂ ಇದೆ.

ಟಿಪ್ಪು ಸುಲ್ತಾನ ಜಯಂತಿಯನ್ನು ವಿವಾದವನ್ನಾಗಿ ಮಾಡಿ  ಕರ್ನಾಟಕ ಬಿಜೆಪಿ ಹುಟ್ಟುಹಾಕಿದ ವಿವಾದ ಮತ್ತು ಗಲಭೆಗಳು ರಾಜಕೀಯ ಪ್ರೇರಿತವಾದುದು ಎಂದು ರಾಜ್ಯದ ಜನರಿಗೆ ಮನದಟ್ಟಾಗಿದೆ. ಬಿಜೆಪಿಯ ಮುಖ್ಯಮಂತ್ರಿಗಳಿಂದ ಹಿಡಿದು ಸಚಿವ-ಶಾಸಕರ ವರೆಗೆ ಎಲ್ಲರೂ ಬಗೆಬಗೆಯ ವೇಷಧರಿಸಿ ಟಿಪ್ಪು ಜಯಂತಿ ಆಚರಿಸಿರುವುದನ್ನು ಜನ ನೋಡಿದ್ದಾರೆ.

ಜಗದೀಶ್ ಶೆಟ್ಟರ್ ಮುಖ್ಯಮಂತ್ರಿ ಆಗಿದ್ದಾಗ ಟಿಪ್ಪುವಿನ ಬಗ್ಗೆ 400 ಪುಟಗಳ ಪುಸ್ತಕ ಬರೆಸುವ ಜೊತೆಗೆ ಟಿಪ್ಪುವನ್ನು ಕೊಂಡಾಡಿ ಮುನ್ನುಡಿಯನ್ನೂ ಬರೆದಿದ್ದರು. ವಿಧಾನಮಂಡಲದ ವಜ್ರಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ತಮ್ಮ ಭಾಷಣದಲ್ಲಿ ಟಿಪ್ಪು ಸುಲ್ತಾನನ ಸಾಧನೆಗಳನ್ನು ಉಲ್ಲೇಖಿಸಿ ಶ್ಲಾಘಿಸಿದ್ದರು.

ನಾನು ಮುಖ್ಯಮಂತ್ರಿಯಾಗಿದ್ದಾಗ ಹಿಂದೂ ಯುವಕರ ಕೊಲೆ ನಡೆದಿತ್ತು ಎಂಬ ಸುಳ್ಳು ಪ್ರಚಾರವನ್ನೂ ಬಿಜೆಪಿ ನಡೆಸುತ್ತಿದೆ.  ಶೋಭ ಕರಂದ್ಲಾಜೆ ಅವರು ರಾಜ್ಯದಲ್ಲಿ 24 ಹಿಂದೂಗಳ ಹತ್ಯೆಗಳು ನಡೆದಿವೆ ಎಂದು ಕೇಂದ್ರ ಗೃಹಸಚಿವರಾದ ರಾಜ್ ನಾಥ್ ಸಿಂಗ್ ಅವರಿಗೆ ಪತ್ರ ಬರೆದಿದ್ದರು. ಅದರಲ್ಲಿ ಜೀವಂತವಿದ್ದ ವ್ಯಕ್ತಿಯ ಹೆಸರನ್ನೂ ಸೇರಿಸಲಾಗಿತ್ತು.

ಬಿಜೆಪಿಯವರು ಹೇಳುತ್ತಿರುವ ಹನ್ನೊಂದು ಹಿಂದೂಗಳ ಹತ್ಯೆಯಲ್ಲಿ ಆರೋಪಿಗಳಾಗಿದ್ದವರು ಎಸ್‌ಡಿಪಿಐ ಮತ್ತು ಪಿಎಫ್ಐ ಸದಸ್ಯರು. ಅವರ ವಿರುದ್ಧ ಪ್ರಕರಣ ದಾಖಲಿಸಿ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಪರೇಶ್ ಮೇಸ್ತಾ ಎಂಬ ಯುವಕನ ಸಾವು ಹತ್ಯೆಯಲ್ಲ ಎಂದು ಸಿಬಿಐ ಇತ್ತೀಚೆಗೆ ಹೇಳಿರುವುದು ಬಿಜೆಪಿ ಕರ್ನಾಟಕ  ಸುಳ್ಳುಗಳನ್ನು ಬಯಲುಮಾಡಿದೆ.

ನಮ್ಮ ಸರ್ಕಾರದ ಅವಧಿಯಲ್ಲಿ 11 ಮುಸ್ಲಿಂ ಯುವಕರ ಹತ್ಯೆಯೂ ನಡೆದಿತ್ತು. ಈ ಹತ್ಯೆಗಳ ಎಲ್ಲ ಆರೋಪಿಗಳು ಬಜರಂಗದಳ ಮತ್ತಿತರ ಸಂಘಪರಿವಾರದ ಸಂಘಟನೆಗಳ ಕಾರ್ಯಕರ್ತರಾಗಿದ್ದಾರೆ. ಅವರ ವಿರುದ್ಧವೂ ಪ್ರಕರಣಗಳನ್ನು ದಾಖಲಿಸಿತ್ತು. ಈ ಪ್ರಕರಣಗಳ ಸಮಗ್ರ ಮಾಹಿತಿಯನ್ನು ಅಂದಿನ ಗೃಹಸಚಿವರಾಗಿದ್ದ ರಾಮಲಿಂಗಾ ರೆಡ್ಡಿ ಅವರು ಪುಸ್ತಕ ರೂಪದಲ್ಲಿ ಪ್ರಕಟಿಸಿದ್ದಾರೆ.

ಕರ್ನಾಟಕದ ಜನತೆ ಪ್ರಜ್ಞಾವಂತರಿದ್ದಾರೆ, ಸರಿ-ತಪ್ಪುಗಳನ್ನು ಅರ್ಥಮಾಡಿಕೊಳ್ಳುವಷ್ಟು ವಿವೇಕವುಳ್ಳವರಾಗಿದ್ದಾರೆ. ಆದ್ದರಿಂದ ಅಪಪ್ರಚಾರ ನಡೆಸಿದಷ್ಟು ಅಪಪ್ರಚಾರ ನಡೆಸಿದವರೇ ರಾಜ್ಯದ ಜನರ ಮುಂದೆ ಬತ್ತಲಾಗುತ್ತಾರೆ ಎನ್ನುವುದು ನನಗೆ ಗೊತ್ತು.

ನನ್ನ ವಿರುದ್ಧದ ಅಪಪ್ರಚಾರವನ್ನು ನಿಲ್ಲಿಸಬೇಕೆಂದು ನಾನೇನು ಮನವಿ ಮಾಡುವುದಿಲ್ಲ. ಆದರೆ ಇಂತಹ ಅಪಪ್ರಚಾರಗಳಿಗೆ ಹೆದರಿ ಬಿಜೆಪಿ ಸರ್ಕಾರದ ದುರಾಡಳಿತ, ಭ್ರಷ್ಟಾಚಾರ ಮತ್ತು ಕೋಮುವಾದದ ರಾಜಕಾರಣದ ವಿರುದ್ಧದ ನನ್ನ ಹೋರಾಟವನ್ನು ನಾನು ನಿಲ್ಲಿಸುತ್ತೇನೆ ಎಂದು ತಿಳಿದುಕೊಂಡರೆ ಅದು ಮೂರ್ಖತನ ಅಷ್ಟೆ ಎಂದು ಟ್ವೀಟ್ ಮಾಡಿದ್ದಾರೆ.

Siddaramaiah : Siddramaullah Khan is the political commodity of BJP’s character assassination – Siddaramaiah…

Related posts

ಸಂಪೂರ್ಣ ವಂದೇ ಮಾತರಂ ಹಾಡ್ತೀವಿ ತಾಕತ್ತಿದ್ರೆ ಕ್ರಮ ತಗೊಳ್ಳಿ: ತಂಗಡಗಿ ಎಚ್ಚರಿಕೆಗೆ ಡೋಂಟ್ ಕೇರ್ ಅಂದ ಸೂಲಿಬೆಲೆ

ಸಂಪೂರ್ಣ ವಂದೇ ಮಾತರಂ ಹಾಡ್ತೀವಿ ತಾಕತ್ತಿದ್ರೆ ಕ್ರಮ ತಗೊಳ್ಳಿ: ತಂಗಡಗಿ ಎಚ್ಚರಿಕೆಗೆ ಡೋಂಟ್ ಕೇರ್ ಅಂದ ಸೂಲಿಬೆಲೆ

September 19, 2026
ಚಿತ್ರರಂಗಕ್ಕೆ ಹಿರಿಯ ನಟ ಅನಂತ್ ನಾಗ್ ಗುಡ್‌ಬೈ: ಇನ್ನು ನಟಿಸಲು ಆಸಕ್ತಿಯಿಲ್ಲ ಎಂದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ

ಚಿತ್ರರಂಗಕ್ಕೆ ಹಿರಿಯ ನಟ ಅನಂತ್ ನಾಗ್ ಗುಡ್‌ಬೈ: ಇನ್ನು ನಟಿಸಲು ಆಸಕ್ತಿಯಿಲ್ಲ ಎಂದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ

September 19, 2026
Tags: siddaramaih
ShareTweetSendShare
Join us on:

Related Posts

ಸಂಪೂರ್ಣ ವಂದೇ ಮಾತರಂ ಹಾಡ್ತೀವಿ ತಾಕತ್ತಿದ್ರೆ ಕ್ರಮ ತಗೊಳ್ಳಿ: ತಂಗಡಗಿ ಎಚ್ಚರಿಕೆಗೆ ಡೋಂಟ್ ಕೇರ್ ಅಂದ ಸೂಲಿಬೆಲೆ

ಸಂಪೂರ್ಣ ವಂದೇ ಮಾತರಂ ಹಾಡ್ತೀವಿ ತಾಕತ್ತಿದ್ರೆ ಕ್ರಮ ತಗೊಳ್ಳಿ: ತಂಗಡಗಿ ಎಚ್ಚರಿಕೆಗೆ ಡೋಂಟ್ ಕೇರ್ ಅಂದ ಸೂಲಿಬೆಲೆ

by Shwetha
September 19, 2026
0

ಬೆಂಗಳೂರು: ರಾಜ್ಯದಲ್ಲಿ 'ವಂದೇ ಮಾತರಂ' ಗೀತೆಯ ಗಾಯನ ಈಗ ಸರ್ಕಾರ ಮತ್ತು ಹಿಂದುತ್ವನಿಷ್ಠ ನಾಯಕರ ನಡುವಿನ ನೇರ ಸಂಘರ್ಷಕ್ಕೆ ನಾಂದಿ ಹಾಡಿದೆ. ವಂದೇ ಮಾತರಂ ಗೀತೆಯ ಕೇವಲ...

ಚಿತ್ರರಂಗಕ್ಕೆ ಹಿರಿಯ ನಟ ಅನಂತ್ ನಾಗ್ ಗುಡ್‌ಬೈ: ಇನ್ನು ನಟಿಸಲು ಆಸಕ್ತಿಯಿಲ್ಲ ಎಂದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ

ಚಿತ್ರರಂಗಕ್ಕೆ ಹಿರಿಯ ನಟ ಅನಂತ್ ನಾಗ್ ಗುಡ್‌ಬೈ: ಇನ್ನು ನಟಿಸಲು ಆಸಕ್ತಿಯಿಲ್ಲ ಎಂದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ

by Shwetha
September 19, 2026
0

ಕನ್ನಡ ಚಿತ್ರರಂಗದ ಹಿರಿಯ ಹಾಗೂ ಖ್ಯಾತ ನಟ ಅನಂತ್ ನಾಗ್ ಅವರು ಇನ್ನು ಮುಂದೆ ನಟನೆಯಲ್ಲಿ ಮುಂದುವರಿಯುವ ಆಸಕ್ತಿ ಇಲ್ಲ ಎಂದು ತಿಳಿಸಿದ್ದಾರೆ. ಐದು ದಶಕಗಳಿಗೂ ಹೆಚ್ಚು...

ಕರಾವಳಿ ಜನರೇ ಗಮನಿಸಿ ನಿಮ್ಮ ಜಿಲ್ಲೆಯ ಹೆಸರು ಬದಲಾಗಲಿದೆ:ಕರಾವಳಿಯ ಅಸ್ಮಿತೆಗೆ ಹೊಸ ಮೆರುಗು ನೀಡಲು ಮುಂದಾದ CM ಡಿ ಕೆ ಶಿವಕುಮಾರ್

ಕರಾವಳಿ ಜನರೇ ಗಮನಿಸಿ ನಿಮ್ಮ ಜಿಲ್ಲೆಯ ಹೆಸರು ಬದಲಾಗಲಿದೆ:ಕರಾವಳಿಯ ಅಸ್ಮಿತೆಗೆ ಹೊಸ ಮೆರುಗು ನೀಡಲು ಮುಂದಾದ CM ಡಿ ಕೆ ಶಿವಕುಮಾರ್

by Shwetha
September 19, 2026
0

ಮಂಗಳೂರು: ಕರಾವಳಿಯ ಹೆಬ್ಬಾಗಿಲು ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸದಲ್ಲಿ ಈಗ ಮಹತ್ವದ ಬದಲಾವಣೆಯೊಂದು ಗಾಳಿ ಬೀಸುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯನ್ನು ಇನ್ಮುಂದೆ ಮಂಗಳೂರು ಜಿಲ್ಲೆ ಎಂದು ಮರುನಾಮಕರಣ...

ಕರ್ನಾಟಕದಲ್ಲಿ ಹಾಲಿನ ದರ ಏರಿಕೆ ಸಾಧ್ಯತೆ: ಪ್ರತಿ ಲೀಟರ್‌ಗೆ ₹8 ಹೆಚ್ಚಳಕ್ಕೆ ನಾಲ್ಕು ಹಾಲು ಒಕ್ಕೂಟಗಳ ಪ್ರಸ್ತಾವನೆ

ಕರ್ನಾಟಕದಲ್ಲಿ ಹಾಲಿನ ದರ ಏರಿಕೆ ಸಾಧ್ಯತೆ: ಪ್ರತಿ ಲೀಟರ್‌ಗೆ ₹8 ಹೆಚ್ಚಳಕ್ಕೆ ನಾಲ್ಕು ಹಾಲು ಒಕ್ಕೂಟಗಳ ಪ್ರಸ್ತಾವನೆ

by Shwetha
September 19, 2026
0

ರಾಜ್ಯದ ಜನತೆಗೆ ಶೀಘ್ರದಲ್ಲೇ ಹಾಲಿನ ದರ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ಇದೆ. ಬೆಂಗಳೂರು ಹಾಲಿನ ಒಕ್ಕೂಟ (BAMUL), ಚಾಮರಾಜನಗರ ಹಾಲು ಉತ್ಪಾದಕರ ಒಕ್ಕೂಟ (ಚಮೂಲ್), ಮಂಡ್ಯ...

ಒಕ್ಕಲಿಗರು ಮತ ಹಾಕೋದು ದೇವೇಗೌಡರಿಗೇ ಹೊರತು ಡಿಕೆಶಿಗಲ್ಲ: ಕೆಎನ್ ರಾಜಣ್ಣ ನೀಡಿದ ಕಹಿಸತ್ಯಕ್ಕೆ ಬೆಚ್ಚಿಬಿದ್ದ ಕಾಂಗ್ರೆಸ್!-ದೇವೇಗೌಡರೇ ಒಕ್ಕಲಿಗರ ಸುಪ್ರೀಂ ಎಂದು ಸಾರಿದ ರಾಜಣ್ಣ

ಒಕ್ಕಲಿಗರು ಮತ ಹಾಕೋದು ದೇವೇಗೌಡರಿಗೇ ಹೊರತು ಡಿಕೆಶಿಗಲ್ಲ: ಕೆಎನ್ ರಾಜಣ್ಣ ನೀಡಿದ ಕಹಿಸತ್ಯಕ್ಕೆ ಬೆಚ್ಚಿಬಿದ್ದ ಕಾಂಗ್ರೆಸ್!-ದೇವೇಗೌಡರೇ ಒಕ್ಕಲಿಗರ ಸುಪ್ರೀಂ ಎಂದು ಸಾರಿದ ರಾಜಣ್ಣ

by Shwetha
September 19, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗ ಹೊಸ ಬಾಂಬ್ ಸಿಡಿದಿದೆ. ಅದು ಕೂಡ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಒಳಗಿನಿಂದಲೇ! ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಒಕ್ಕಲಿಗ ಸಮುದಾಯದ ಅಪ್ರತಿಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram