Maharashtra – Karnataka : ‘ಮಹಾ’ ಟ್ರಕ್ ಗಳ ಮೇಲೆ ಕಲ್ಲು ತೂರಾಟ – ಅಮಿತ್ ಶಾ ಗಮನಕ್ಕೆ ತರುತ್ತೇನೆ – ಫಡ್ನವೀಸ್
ದಿನೇ ದಿನೇ ಮಹಾರಾಷ್ಟ್ರ ಕರ್ನಾಟಕ ನಡುವೆ ಗಡಿ ವಿವಾದದ ಆಕ್ರೋಶ ಹೆಚ್ಚಾಗ್ತಲೇ ಇದೆ..
ಮಹಾರಾಷ್ಟ್ರದಲ್ಲಿ ಕರ್ನಾಟಕ ಬಸ್ ಗಳ ಮೇಲೆ ಕಪ್ಪು ಮಸಿ ಬಳಿದು ದಾಳಿ , ಕರ್ನಾಟಕದಲ್ಲಿ ಮಹಾರಾಷ್ಟ್ರ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಯುತ್ತಲೇ ಇದೆ..
ಇದೀಗ ಈ ಬಗ್ಗೆ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ( ಮಾಜಿ ಸಿಎಂ) ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಗಮನಕ್ಕೆ ತರುವುದಾಗಿ ಹೇಳಿದ್ದಾರೆ..
ಸುದ್ದಿಗಾರರ ಜೊತೆಗೆ ಈ ಬಗ್ಗೆ ಮಾತನಾಡಿರುವ ಅವರು ಈ ಸಂಬಂಧ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ದೂರವಾಣಿ ಕರೆ ಮೂಲಕ ಮಾತುಕತೆ ನಡೆಸಿದ್ದೇನೆ.
ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಮಹಾರಾಷ್ಟ್ರದ ಐದು ಲಾರಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದು, ಮಂಗಳವಾರ ಬೆಳಗಾವಿಯ ಹಿರೇಬಾಗೇವಾಡಿ ಟೋಲ್ ಬಳಿ ಕಾರ್ಯಕರ್ತರು ವಾಹನಗಳ ನಂಬರ್ ಪ್ಲೇಟ್ ಗೆ ಕಪ್ಪು ಮಸಿ ಬಳಿದಿದ್ದಾರೆ.
ಮುಖ್ಯಮಂತ್ರಿ ಬೊಮ್ಮಾಯಿ ಅವರು ಖುದ್ದು ಪರಿಶೀಲನೆ ನಡೆಸಿ, ಘಟನೆಯಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ ಹಾಗೂ ಮಹಾರಾಷ್ಟ್ರದಿಂದ ಬರುವ ಬಸ್ ಗಳು ಮತ್ತು ಟ್ರಕ್ ಗಳ ಭದ್ರತೆ ನೀಡುವುದಾಗಿ ತಿಳಿಸಿದ್ದಾರೆ ಎಂದು ಹೇಳಿದ್ದಾರೆ.
ಇದೇ ವೇಳೆ ಭಾರತದಲ್ಲಿ ಇಲ್ಲಿನ ನಾಗರೀಕರು ಎಲ್ಲಿಗೆ ಬೇಕಾದರೂ ಹೋಗಲು ಎಲ್ಲರಿಗೂ ಹಕ್ಕಿದೆ. ಯಾರನ್ನೂ ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಕರ್ನಾಟಕದ ಮುಖ್ಯಮಂತ್ರಿಗಳು ಇತರ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವ ಜನರನ್ನು ರಕ್ಷಿಸಬೇಕೆಂದು ಆಗ್ರಹಿಸಿದ್ದಾರೆ.
ಮಹಾರಾಷ್ಟ್ರ ಅಬಕಾರಿ ಸಚಿವ ಶಂಭುರಾಜ್ ದೇಸಾಯಿ ಅವರು ಮಾತನಾಡಿ, ಈ ಘಟನೆಯ ಬಗ್ಗೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರೊಂದಿಗೆ ಮಾತಕತೆ ನಡೆಸಲಾಗುವುದು. ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಹೋಗುವ ಜನರ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಕರ್ನಾಟಕ ಪೊಲೀಸ್ ಮಹಾನಿರ್ದೇಶಕರೊಂದಿಗೂ ಮಾತನಾಡುತ್ತೇನೆ. ಮುಂದೆ ಇಂತಹ ಘರ್ಷಣೆಗಳನ್ನು ತಪ್ಪಿಸಬೇಕು ಎಂದು ತಿಳಿಸಿದರು.
Maharashtra – Karnataka , border clash , devendra fadnavis talks about the issue..!!