BAN v IND : ಯಶಸ್ವಿ ಫಾರ್ಮ್ ನಲ್ಲಿ ಮುಂದುವರಿದ ಶ್ರೇಯಸ್ ಅಯ್ಯರ್
ಪ್ರಸಕ್ತ ವರ್ಷದಲ್ಲಿ ಭರ್ಜರಿ ಫಾರ್ಮ್‌ನಲ್ಲಿರುವ ಟೀಂ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್, ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ತಮ್ಮ ಯಶಸ್ವಿ ಫಾರ್ಮ್ ಮುಂದುವರಿಸಿದ್ದಾರೆ.
ಬಾಂಗ್ಲಾದೇಶ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲನುಭವಿಸುವ ಮೂಲಕ ಸರಣಿ ಸೋಲಿನ ಆಘಾತ ಕಂಡಿದೆ. ಆದರೆ 2023ರ ಏಕದಿನ ವಿಶ್ವಕಪ್ ತಯಾರಿಯಲ್ಲಿರುವ ಭಾರತಕ್ಕೆ ಶ್ರೇಯಸ್ ಅಯ್ಯರ್ ಪ್ರದರ್ಶನ ದೊಡ್ಡಮಟ್ಟದ ವಿಶ್ವಾಸ ಮೂಡಿಸಿದೆ. ಬಾಂಗ್ಲಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಪ್ರಮುಖ ಬ್ಯಾಟ್ಸ್‌ಮನ್‌ಗಳು ವೈಫಲ್ಯದ ನಡುವೆಯೂ ಶ್ರೇಯಸ್ ಅಯ್ಯರ್(81) ಅರ್ಧಶತಕ ಸಿಡಿಸಿ ತಂಡಕ್ಕೆ ಆಸರೆಯಾದರು.
2022ನೇ ಸಾಲಿನಲ್ಲಿ ಏಕದಿನ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿರುವ ಶ್ರೇಯಸ್ ಅಯ್ಯರ್ ಭಾರತದ ಪರ ಹೆಚ್ಚು ರನ್‌ಗಳಿಸಿದ ಆಟಗಾರ ಎನಿಸಿದ್ದಾರೆ. ಪ್ರಸಕ್ತ ವರ್ಷದಲ್ಲಿ ಆಡಿರುವ 11 ಇನ್ನಿಂಗ್ಸ್‌ನಲ್ಲಿ ಶ್ರೇಯಸ್ ಅಯ್ಯುರ್ 6 ಅರ್ಧಶತಕ ಹಾಗೂ 1 ಶತಕ ಸಿಡಿಸಿದ್ದಾರೆ.
ಈ ವರ್ಷದಲ್ಲಿ ಶ್ರೇಯಸ್ ಅಯ್ಯರ್ ಒಟ್ಟಾರೆ 721 ರನ್‌ಗಳಿಸಿದ್ದಾರೆ. ತಮ್ಮ ಅಮೋಘ ಬ್ಯಾಟಿಂಗ್ ಫಾರ್ಮ್‌ನಿಂದ ಮಿಂಚಿರುವ ಶ್ರೇಯಸ್, ಭಾರತ ತಂಡದ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಅಸ್ತ್ರವಾಗಿದ್ದು, ಮುಂದಿನ ವರ್ಷ ಭಾರತದಲ್ಲಿ ನಡೆಯುವ ODI ವಿಶ್ವಕಪ್ ಟೂರ್ನಿಗೆ ತಂಡದಲ್ಲಿ ಸ್ಥಾನ ಪಡೆಯುವ ದೊಡ್ಡ ನಿರೀಕ್ಷೆ ಹೊಂದಿದ್ದಾರೆ.
BAN v IND , shreyas iyer in good form , saakshatv







