Himachal Pradesh Election Result : 20 ಸಾವಿರ ಮತಗಳ ಅಂತರದಿಂದ ಸಿಎಂ ಜೈರಾಮ್ ಠಾಕೂರ್ ಗೆಲುವು…
ಹಿಮಾಚಲ ಪ್ರದೇಶದ 68 ವಿಧಾನಸಭಾ ಸ್ಥಾನಗಳಿಗೆ ಮತ ಎಣಿಕೆ ಮುಂದುವರೆದಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಸಮಬಲದ ಹೋರಾಟ ನಡೆಯುತ್ತಿವೆ.
ಬಿಜೆಪಿ 21 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 39 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಆದರೆ, ಸ್ವತಂತ್ರ ಅಭ್ಯರ್ಥಿಗಳು ಮತ್ತು ಇತರ ಅಭ್ಯರ್ಥಿಗಳು 3 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಎಎಪಿಗೆ ಇನ್ನೂ ಖಾತೆ ತೆರೆಯಲು ಸಾಧ್ಯವಾಗಿಲ್ಲ.
ಈಗಾಗಲೇ ಬಿಜೆಪಿ 5 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಸಿಎಂ ಜೈರಾಮ್ ಠಾಕೂರ್ ಅವರು ಸೆರಾಜ್‌ನಿಂದ ಕಾಂಗ್ರೆಸ್‌ನ ಚೇತ್ರಂ ಠಾಕೂರ್ ಅವರನ್ನ 20 ಸಾವಿರಕ್ಕೂ ಹೆಚ್ಚು ಮತಗಳಿಂದ ಸೋಲಿಸುವ ಮೂಲಕ ಗೆದ್ದಿದ್ದಾರೆ. ಮಂಡಿ ಜಿಲ್ಲೆಯ ಸುಂದರನಗರ ಕ್ಷೇತ್ರದಲ್ಲಿ ಬಿಜೆಪಿಯ ರಾಕೇಶ್ ಜಮ್ವಾಲ್ ಅವರು ಕಾಂಗ್ರೆಸ್‌ನ ಸೋಹನ್ ಲಾಲ್ ಠಾಕೂರ್ ಅವರನ್ನ 8,125 ಮತಗಳಿಂದ ಸೋಲಿಸಿದ್ದಾರೆ. ಸಿಎಂ ಠಾಕೂರ್ ಅವರ ತವರು ಜಿಲ್ಲೆಯಲ್ಲಿ ಬಿಜೆಪಿ ಕ್ಲೀನ್ ಸ್ವೀಪ್ ಹಾದಿಯಲ್ಲಿದೆ.
ಸಿಎಂ ಜೈರಾಮ್ ಠಾಕೂರ್ ಅವರ ತವರು ಜಿಲ್ಲೆಯಲ್ಲಿ ಬಿಜೆಪಿ 10 ಸ್ಥಾನಗಳಲ್ಲಿ 5 ಸ್ಥಾನಗಳನ್ನು ಗೆದ್ದಿದೆ, ಉಳಿದ 5 ಸ್ಥಾನಗಳಲ್ಲಿಯೂ ಬಿಜೆಪಿ ಮುನ್ನಡೆ ಸಾಧಿಸಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ತವರು ಜಿಲ್ಲೆಯಲ್ಲಿ ನಾಲ್ಕು ಸ್ಥಾನಗಳ ಪೈಕಿ ಎರಡು ಸ್ಥಾನಗಳಲ್ಲಿ ಬಿಜೆಪಿ ಮತ್ತು ಎರಡು ಸ್ಥಾನಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.
Himachal Pradesh Election Result: CM Jairam Thakur won by a margin of 20 thousand votes…








