ಬೆಂಗಳೂರಿನಿಂದ ಹೊರಟಿದ್ದ ಬಸ್‌ಗೆ ಲಾರಿ ಡಿಕ್ಕಿ: 19 ಜನ ಸಾವು
ತಮಿಳುನಾಡಿನ ಅವಿನಾಶಿ ಪಟ್ಟಣದ ಬಳಿ ಘಟನೆ
ಬೆಂಗಳೂರಿನಿಂದ ಕೇರಳದ ಎರ್ನಾಕುಳಂಗೆ ಹೊರಟಿದ್ದ ಬಸ್
ಚೆನ್ನೈ: ಬೆಂಗಳೂರಿನಿಂದ ಹೊರಟಿದ್ದ ಕೇರಳ ರಾಜ್ಯ ಸರ್ಕಾರಿ ಬಸ್ ಗೆ ಕಂಟೇನರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿ 19 ಮಂದಿ ಮೃತಪಟ್ಟಿರುವ ಘಟನೆ ತಮಿಳುನಾಡಿನ ಅವಿನಾಶಿ ಪಟ್ಟಣದ ಬಳಿ ನಡೆದಿದೆ. ಈ ಬಸ್ ಬೆಂಗಳೂರಿನಿಂದ ಕೇರಳದ ಎರ್ನಾಕುಳಂಗೆ ತೆರಳುತ್ತಿತ್ತು ಎಂದು ಹೇಳಲಾಗುತ್ತಿದೆ. ಮತ್ತೂರು-ಸೇಲಂ ಹೆದ್ದಾರಿಯಲ್ಲಿ ಮುಂಜಾನೆ 4.30ರ ಸುಮಾರಿಗೆ ಅಪಘಾತ ನಡೆದಿದೆ. ಬಸ್ಸಿನಲ್ಲಿ 48 ಪ್ರಯಾಣಿಕರಿದ್ದು, ಅದರಲ್ಲಿ 19 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇನ್ನು ಮೃತರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಬಂದಿಲ್ಲ. ಸದ್ಯ ಮೃತದೇಹಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಈ ಘಟನೆ ಬಗ್ಗೆ ಅವಿನಾಶಿಯ ಉಪ ತಹಶೀಲ್ದಾರ್ ಮಾಹಿತಿ ನೀಡಿದ್ದು, 14 ಜನ ಪುರುಷರು ಮತ್ತು 5 ಜನ ಮಹಿಳೆಯರು ಕೇರಳ ರಾಜ್ಯದ ಬಸ್ ಮತ್ತು ಟ್ರಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.








