Narendra Modi : ಗೋವಾ ರಾಜ್ಯದ ಮೋಪಾದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ…
ಮಹಾರಾಷ್ಟ್ರದ ನಂತರ ಗೋವಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಮೊಪಾದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಉದ್ಘಾಟಿಸಿದರು.
ಈ ವಿಮಾನ ನಿಲ್ದಾಣಕ್ಕೆ ಗೋವಾದ ದಿವಂಗತ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಮನೋಹರ್ ಪರಿಕ್ಕರ್ ಅವರ ಹೆಸರನ್ನ ಇಡಲಾಗಿದೆ.
ವಿಮಾನ ನಿಲ್ದಾಣ ಉದ್ಘಾಟನೆ ನಂತರ ಮಾತನಾಡಿದ ಪ್ರಧಾನಿ ಮೋದಿ “ಭಾರತವು ವಿಶ್ವದ ಮೂರನೇ ಅತಿದೊಡ್ಡ ವಾಯುಯಾನ ಮಾರುಕಟ್ಟೆಯಾಗಿದೆ. ಕಳೆದ 8 ವರ್ಷಗಳಲ್ಲಿ ನಾವು 72 ವಿಮಾನ ನಿಲ್ದಾಣಗಳನ್ನು ನಿರ್ಮಿಸಿದ್ದೇವೆ. ಪ್ರವಾಸಿಗರಿಗೆ ಪ್ರಯಾಣದ ಸುಲಭತೆಯನ್ನು ಸುಧಾರಿಸಲು ಭಾರತವು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡಿದೆ ಎಂದು ತಿಳಿಸಿದರು.
2014ರ ಮೊದಲು ವಿಮಾನ ಪ್ರಯಾಣ ಐಷಾರಾಮಿಯಾಗಿತ್ತು, ಆದರೆ ಈಗ ಮಧ್ಯಮ ವರ್ಗದ ಕುಟುಂಬಗಳಿಗೂ ಸಹ ಕೈಗೆಟುಕುವ ಹಾಗೇ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ದೇಶದ ವಿಮಾನ ನಿಲ್ದಾಣ ಜಾಲವನ್ನು ಇನ್ನಷ್ಟು ಸುಧಾರಿಸಲಾಗುವುದು ಎಂದು ತಿಳಿಸಿದರು.
Narendra Modi Goa Visit ; Mopa International Airport Inauguration








