Lawyer’s Protection Bill: ಚಳಿಗಾಲದ ಅಧಿವೇಶನದಲ್ಲಿ ವಕೀಲರ ರಕ್ಷಣಾ ಮಸೂದೆ ಮಂಡನೆ – ಸಿ ಎಂ ಸ್ಪಂದನೆ.
ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ವಕೀಲರ ರಕ್ಷಣಾ ಮಸೂದೆಯನ್ನು ಮಂಡಿಸುವುದಾಗಿ ಸಿಎಂ ತಿಳಿಸಿದ್ದಾರೆ. ವಕೀಲ ಸಂಘ ಸಲ್ಲಿಸಿದ್ದ ಮನವಿ ಗೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಇಂದು ಸಿಎಂ ಭೇಟಿಯಾಗಿ ಮನವಿ ಸಲ್ಲಿಸಿದ ವಕೀಲರ ಸಂಘದ ನಿಯೋಗಕ್ಕೆ ಸಿಎಂ ತಿಳಿಸಿದ್ದಾರೆ.
ಕರ್ತವ್ಯ ನಿರತ ವಕೀಲರ ಮೇಲೆ ದೌರ್ಜನ್ಯಗಳು ಹೆಚ್ಚುತ್ತಿದ್ದು, ಅನೇಕರನ್ನು ಕೊಲ್ಲಲಾಗಿದೆ. ಈ ಹಿನ್ನೆಲೆಯಲ್ಲಿ ವಕೀಲರ ರಕ್ಷಣಾ ಕಾಯ್ದೆಯ ಕರಡು ಮಸೂದೆ ಮಂಡನೆಗೆ ವಕೀಲರ ಸಂಘ ಮನವಿ ಮಾಡಿತ್ತು.
ನವೆಂಬರ್ 5 ರಂದು ನಡೆದ ವಕೀಲರ ಸಂಘದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಈ ಬಗ್ಗೆ ಮಸೂದೆ ಮಂಡಿಸುವ ಭರವಸೆ ನೀಡಿದ್ದರು.
Lawyer’s Protection Bill presented in winter session – CM’s response.








