Karunad sambrama 2022 : ಚಿರು ಸರ್ಜಾಗೆ ಮರಣೋತ್ತರ ಕನ್ನಡ ಕಲಾಭೂಷಣ ಪ್ರಶಸ್ತಿ ಗೌರವ..
ದಿವಂಗತ ನಟ ಚಿರಂಜೀವಿ ಸರ್ಜಾ ಅವರಿಗೆ ಮರಣೋತ್ತರವಾಗಿ ಕನ್ನಡ ಕಲಾ ಭೂಷಣ ಪ್ರಶಸ್ತಿ ನೀಡಿ ಗೆಲುವು ಕನ್ನಡ ಗೆಳೆಯರ ಬಳಗ ಸಮಿತಿ ಗೌರವಿಸಿದೆ. ಡಿಸೆಂಬರ್ 10. 11 ರಂದು ನಡೆದ 12 ವರ್ಷದ ಕರುನಾಡ ಸಂಭ್ರಮ 2022 ರ ಸಂಭ್ರಮಕ್ಕೆ ಅದ್ದೂರಿಯಾಗಿ ತೆರೆ ಬಿದ್ದಿದೆ.
ಎರಡು ದಿನಗಳ ಕಾಲ ನಡೆದ ಸಂಭ್ರಮ ಚಂದನವನದ ಸ್ಟಾರ್ ತಾರೆಗಳ ಸಮಾಗಮ, ಹಾಡು, ಡಾನ್ಸ್ ಗಳಿಂದ ಕಳೆಗಟ್ಟಿತ್ತು. ವರುಣ್ ಸ್ಟುಡಿಯೋಸ್ ಮತ್ತು ರಾಜ್ ಇವೆಂಟ್ಸ್ ಸಹಯೋಗದಲ್ಲಿ ನಡೆದ ಕರುನಾಡ ಸಂಭ್ರಮ ಯಶಸ್ವಿಯಾಗಿ ತೆರೆ ಕಂಡಿದೆ.
ಈ ವೇಳೆ ನಟ ಚಿರಂಜೀವಿ ಸರ್ಜಾ ಅವರಿಗೆ ಮರಣೋತ್ತರ ‘ಕನ್ನಡ ಕಲಾ ಭೂಷಣ’ ಪ್ರಶಸ್ತಿಯನ್ನು ಗೆಲುವು ಕನ್ನಡ ಗೆಳೆಯರ ಬಳಗ ಸಮಿತಿ ನೀಡಿ ಗೌರವಿಸಿದೆ. ಸಹೋದರ ಹಾಗೂ ನಟ ಧ್ರುವ ಸರ್ಜಾ ಪ್ರಶಸ್ತಿಯನ್ನು ಸ್ವೀಕರಿಸಿ ಎಲ್ಲರಿಗೂ ಧನ್ಯವಾದ ತಿಳಿಸಿದ್ರು. ಈ ವೇಳೆ ಗೆಲುವು ಕನ್ನಡ ಗೆಳೆಯರ ಬಳಗ ಸಮಿತಿ ಅಧ್ಯಕ್ಷ ಕೃಷ್ಣೇಗೌಡ್ರು, ಪ್ರದೀಪ್, ಪ್ರಶಾಂತ್ ಮತ್ತು ತಂಡ ಹಾಜರಿದ್ರು.
ಚಂದನವನದ ಖ್ಯಾತ ತಾರೆಯರು ಭಾಗಿಯಾಗಿ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿದ್ದ್ರು, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ‘ಗಿಲ್ಲಕ್ಕೋ ಶಿವ ಗಿಲ್ಲಕ್ಕೋ’ ಹಾಡಿಗೆ ಹೆಜ್ಜೆ ಹಾಕಿ ಕಾರ್ಯಕ್ರಮದ ಎನರ್ಜಿ ಹೆಚ್ಚಿಸಿದ್ರೆ, ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ, ವಿಕ್ರಮ್ ರವಿಚಂದ್ರನ್, ಸಂಗೀತಾ ಶೃಂಗೇರಿ ಸೇರಿದಂತೆ ಹಲವು ತಾರೆಯರು ತಮ್ಮ ಡಾನ್ಸ್ ಮೂಲಕ ನೆರೆದಿದ್ದವರನ್ನು ರಂಜಿಸಿದ್ರು.
Karunad sambrama 2022 : Chiru Sarja honored with posthumous Kannada Kalabhushan award..








